ನವದೆಹಲಿ: ಸೋಮವಾರ ಬೆಳಗ್ಗೆ ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯಲ್ಲಿ ಪೊಲೀಸರು ನಡೆಸಿದ ಎನ್‌ಕೌಂಟರ್‌ನಲ್ಲಿ ಮಹಿಳೆ ಸೇರಿದಂತೆ ಕನಿಷ್ಠ ನಾಲ್ವರು ಮಾವೋವಾದಿಗಳು ಹತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಟೊಂಟೊ ಮತ್ತು ಗೋಯಿಲ್ಕೆರಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ.


COMMERCIAL BREAK
SCROLL TO CONTINUE READING

ಗುಂಡಿನ ಚಕಮಕಿಯಲ್ಲಿ ನಾಲ್ವರು ಮಾವೋವಾದಿಗಳು ಸಾವನ್ನಪ್ಪಿದ್ದಾರೆ, ಇಬ್ಬರನ್ನು ಬಂಧಿಸಲಾಗಿದೆ ಎಂದು ಜಾರ್ಖಂಡ್ ಪೊಲೀಸ್ ವಕ್ತಾರ ಮತ್ತು ಐಜಿ (ಕಾರ್ಯಾಚರಣೆ) ಅಮೋಲ್ ವಿ ಹೋಮ್ಕರ್ ಪಿಟಿಐಗೆ ತಿಳಿಸಿದ್ದಾರೆ.


ಇದನ್ನೂ ಓದಿ: ವಾಲ್ಮೀಕಿ ನಿಗಮದ ಹಗರಣ ಪ್ರಕರಣ: ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ


ಪೊಲೀಸರ ಪ್ರಕಾರ, ಎನ್‌ಕೌಂಟರ್‌ನಲ್ಲಿ ಒಬ್ಬ ಝೋನಲ್ ಕಮಾಂಡರ್, ಒಬ್ಬ ಸಬ್-ಜೋನಲ್ ಕಮಾಂಡರ್ ಮತ್ತು ಒಬ್ಬ ಏರಿಯಾ ಕಮಾಂಡರ್ ಸೇರಿದಂತೆ ನಾಲ್ವರು ನಕ್ಸಲರು ಸಾವನ್ನಪ್ಪಿದ್ದಾರೆ, ಆದರೆ ಇಂದು ಚೈಬಾಸಾದಲ್ಲಿ ಏರಿಯಾ ಕಮಾಂಡರ್ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ.ಅಲ್ಲದೆ, ವಿವಿಧ ಕ್ಯಾಲಿಬರ್‌ನ ರೈಫಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.