ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಭಾರೀ ಅಗ್ನಿ ದುರಂತ(Delhi House Fire)ಸಂಭವಿಸಿದ್ದು ಒಂದೇ ಕುಟುಂಬದ ನಾಲ್ವರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಸೀಮಾಪುರಿ ಪ್ರದೇಶದಲ್ಲಿರುವ 3 ಅಂತಸ್ತಿನ ಹಳೆಯ ಕಟ್ಟಡವೊಂದರಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ಈ ದುರ್ಘಟನೆ ನಡೆದಿದೆ.


COMMERCIAL BREAK
SCROLL TO CONTINUE READING

ಇಂದು ನಸುಕಿನ ವೇಳೆ(4 AM) ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ(Massive House Fire) ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕದಳ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಘಟನಾ ಸ್ಥಳಕ್ಕೆ 4 ಅಗ್ನಿಶಾಮಕ ವಾಹನಗಳು ಆಗಮಿಸಿದ್ದರಿಂದ ಸಿಬ್ಬಂದಿ ಬೆಂಕಿಯ ಜ್ವಾಲೆಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ.


ಇದನ್ನೂ ಓದಿ: Bank Holidays : ಬ್ಯಾಂಕ್ ಗ್ರಾಹಕರೆ ಗಮನಿಸಿ : ನವೆಂಬರ್‌ನಲ್ಲಿ 17 ದಿನ ಬ್ಯಾಂಕ್ ರಜೆ! ಫುಲ್ ಲಿಸ್ಟ್ ಇಲ್ಲಿದೆ 


3 ಅಂತಸ್ತಿನ ಕಟ್ಟಡದ 3ನೇ ಮಹಡಿಯ ಕೊಠಡಿ(Seemapuri)ಯಲ್ಲಿ ನಾಲ್ವರ ಶವ ಸಿಕ್ಕಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ನಾಲ್ವರು ಕೂಡ ದಟ್ಟ ಹೊಗೆಯ ಕಾರಣ ಉಸಿರುಗಟ್ಟಿ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. ಸಾವನ್ನಪ್ಪಿದವರನ್ನು 58 ವರ್ಷದ ಹೊರಿಲಾಲ್, ಅವರ ಪತ್ನಿ 55 ವರ್ಷದ ರೀನಾ, 24 ವರ್ಷದ ಪುತ್ರ ಆಶು ಹಾಗೂ 18 ವರ್ಷದ ಮಗಳು ರೋಹಿಣಿ ಎಂದು ಗುರುತಿಸಲಾಗಿದೆ. ಹೊರಿಲಾಲ್ ದಂಪತಿಯ ಮತ್ತೊಬ್ಬ ಪುತ್ರ 22 ವರ್ಷದ ಅಕ್ಷಯ್ ಅಗ್ನಿಅವಘಡದಲ್ಲಿ ಬದುಕುಳಿದಿದ್ದು, ಈತ 2ನೇ ಅಂತಸ್ತಿನಲ್ಲಿ ಮಲಗಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾನೆಂದು ವರದಿಯಾಗಿದೆ.   


PM Kisan ಯೋಜನೆಯ 10ನೇ ಕಂತು ಈ ಕಾರ್ಡ್ ಇಲ್ಲದಿದ್ದರೆ ಬರುವುದಿಲ್ಲ, ನೋಂದಣಿಯ ಹೊಸ ಪ್ರಕ್ರಿಯೆ ಇಲ್ಲಿದೆ!


ಇದೀಗ ಎಲ್ಲಾ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಸೊಳ್ಳೆ ಕಾಯಿಲ್ ಗೆ ಬೆಂಕಿ ಹೊತ್ತಿದ ಪರಿಣಾಮ ಅಗ್ನಿಅವಘಡ ಸಂಭವಿಸಿದೆ ಅಂತಾ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು(Delhi Police) ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ