ಶ್ರೀನಗರ: ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ರಾತ್ರಿಯಿಂದ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆ ನಾಲ್ವರು ಉಗ್ರರನ್ನು ಹೊಡೆದುರುಳಿಸಿದೆ. ಈ ಉಗ್ರರು ಲಷ್ಕರ್-ಇ-ತೊಯ್ಬಾಗೆ ಸೇರಿದವರು ಎಂದು ಹೇಳಲಾಗುತ್ತಿದೆ.
#UPDATE: 4 terrorists of Lashkar-e-Taiba (LeT) killed in an encounter with security forces in Lassipora area of Pulwama District. pic.twitter.com/Qzr4Dxj3BI
— ANI (@ANI) April 1, 2019
ಪುಲ್ವಾಮ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಮಾಹಿತಿ ಪಡೆದ ಬಳಿಕ ಭದ್ರತಾಪಡೆ ಭಾನುವಾರ ರಾತ್ರಿ ಶೋಧ ಕಾರ್ಯ ಆರಂಭಿಸಿದರು. ಈ ವೇಳೆ ಉಗ್ರರು ಭದ್ರತಾ ಪಡೆಯ ಮೇಲೆ ಗುಂಡಿನ ಮಳೆ ಗೈದಿದ್ದಾರೆ. ಪ್ರತಿ ದಾಳಿ ನಡೆಸಿದ ಸೇನೆ ನಾಲ್ವರು ಉಗ್ರರನ್ನು ಸದೆಬಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಈ ವೇಳೆ ಮೂವರು ಭದ್ರತಾ ಪಡೆ ಸಿಬ್ಬಂದಿಗೆ ಗಾಯಗಳಾಗಿವೆ ಎಂದು ಮೂಲಗಳು ತಿಳಿಸಿವೆ. ಸ್ಥಳದಲ್ಲಿ ಇನ್ನೂ ಕೆಲ ಉಗ್ರರು ಅಡಗಿರುವ ಶಂಕೆ ವ್ಯಕ್ತವಾಗಿದ್ದು ಸೋಮವಾರ ಬೆಳಿಗ್ಗೆ ಕೂಡ ಎನ್‌ಕೌಂಟರ್ ಮುಂದುವರೆದಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸುತ್ತಮುತ್ತಲ ಪ್ರದೇಶದಲ್ಲಿ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ.