ನವದೆಹಲಿ: ಕಳೆದ ನಾಲ್ಕು ದಿನಗಳಿಂದ ನಿರಂತರ ಮಳೆಯಿಂದಾಗಿ ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. 


COMMERCIAL BREAK
SCROLL TO CONTINUE READING

ಪ್ರವಾಹದಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 40ಕ್ಕೆ ತಲುಪಿದ್ದು, 9 ಮಂದಿ ಗಾಯಗೊಂಡಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಕೆಲವು ರೈಲುಗಳನ್ನು ರದ್ದುಪಡಿಸಲಾಗಿದ್ದು, ಶಾಲಾ ಕಾಲೇಜುಗಳಿಗೆ ರಜೆ ನೀಡಿ, 14 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. 


ಬಿಹಾರದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಕುರಿತಂತೆ ಸಿಎಂ ನಿತೀಶ್ ಕುಮಾರ್ ಅವರಿಗೆ ಕರೆ ಮಾಡಿದ ಪ್ರಧಾನಿ ಮೋದಿ, ಕೇಂದ್ರ ಸರ್ಕಾರದ ವತಿಯಿಂದ ಸಾಧ್ಯವಿರುವ ಎಲ್ಲಾ ಸಹಕಾರವನ್ನು ನೀಡಲಾಗುವುದು" ಎಂದು ಸೋಮವಾರ ಹೇಳಿದ್ದಾರೆ.


ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, "ರಾಜ್ಯದ ಕೆಲವು ಭಾಗಗಳಲ್ಲಿನ ಪ್ರವಾಹ ಪರಿಸ್ಥಿತಿಯ ಬಗ್ಗೆ ಬಿಹಾರ ಸಿಎಂ ನಿತೀಶ್ ಕುಮಾರ್ ಜಿ ಅವರೊಂದಿಗೆ ಮಾತನಾಡಿದ್ದೇನೆ. ಪ್ರವಾಹ ಪೀಡಿತರಿಗೆ ಸಹಾಯ ಮಾಡಲು ಏಜೆನ್ಸಿಗಳು ಸ್ಥಳೀಯ ಆಡಳಿತದೊಂದಿಗೆ ಕೆಲಸ ಮಾಡುತ್ತಿವೆ. ಅಗತ್ಯವಿರುವ ಎಲ್ಲ ಹೆಚ್ಚಿನ ಸಹಾಯವನ್ನು ಒದಗಿಸಲು ಕೇಂದ್ರವು ಸಿದ್ಧವಾಗಿದೆ" ಎಂದು ಹೇಳಿದ್ದಾರೆ.


ಮುಂದಿನ 24 ಗಂಟೆಗಳಲ್ಲಿ ಆರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಹಾರದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲು ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್ಎಫ್ ನ ಸುಮಾರು 18 ತಂಡಗಳನ್ನು ರಚಿಸಲಾಗಿದ್ದು, ಪರಿಹಾರ ಕಾರ್ಯಗಳಲ್ಲಿ ನಿರತವಾಗಿವೆ. 


ಪ್ರವಾಹ ಹಿನ್ನೆಲೆಯಲ್ಲಿ, ಬಿಹಾರ ಸರ್ಕಾರ ತುರ್ತು ಸಹಾಯವಾಣಿ ಸಂಖ್ಯೆಗಳನ್ನು ಪ್ರಕಟಿಸಿದ್ದು, ಅವು ಕೆಳಕಂಡಂತಿವೆ:


ರಾಜೇಂದ್ರ ನಗರ: 9006192686
ಪಾಟ್ನಾ ನಗರ: 7903331869, 8340582547
ಕಡಮ್ಕುವಾನ್: 8210286544, 9431295882
ಎನ್‌ಡಿಆರ್‌ಎಫ್: 8541908006
ಎಸ್‌ಡಿಆರ್‌ಎಫ್: 9801598289
ಕಂಕರ್‌ಬಾಗ್: 6203674823