`ಕೋವಿಡ್ಗೆ 40 ಲಕ್ಷ ಜನ ಸತ್ತಿದ್ದು ಸರ್ಕಾರದ ನಿರ್ಲಕ್ಷ್ಯದಿಂದ..`: ರಾಹುಲ್ ಗಾಂಧಿ ಕಿಡಿ
ಸರ್ಕಾರವು ನಿಜವಾದ ಕೋವಿಡ್-19 ಸಾವಿನ ಅಂಕಿಅಂಶಗಳನ್ನು ಬಿಡುಗಡೆ ಮಾಡಿಲ್ಲ ಎಂದು ಕಾಂಗ್ರೆಸ್ ಆರೋಪಿಸುತ್ತಿದೆ. ಈ ಬೆನ್ನಲ್ಲೇ ಕೋವಿಡ್ಗೆ 40 ಲಕ್ಷ ಜನ ಸತ್ತಿದ್ದು ಸರ್ಕಾರದ ನಿರ್ಲಕ್ಷ್ಯದಿಂದಲೇ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.
ನವದೆಹಲಿ: ಸರ್ಕಾರದ ನಿರ್ಲಕ್ಷ್ಯದಿಂದಾಗಿ 40 ಲಕ್ಷ ಭಾರತೀಯರು ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ಸಾವನ್ನಪ್ಪಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಹೇಳಿದ್ದಾರೆ. ಸತ್ತವರ ಕುಟುಂಬಗಳಿಗೆ ತಲಾ ₹4 ಲಕ್ಷ ಪರಿಹಾರ ನೀಡಬೇಕು ಎಂದು ಮತ್ತೊಮ್ಮೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಇದನ್ನೂ ಓದಿ:Tamilnadu : ಹೆತ್ತಮ್ಮನನ್ನೇ 10 ವರ್ಷ ರೂಮ್‌ನಲ್ಲಿ ಕೂಡಿಹಾಕಿದ್ದ ಪಾಪಿ ಮಕ್ಕಳು...
ಈ ಬಗ್ಗೆ ಟ್ತೀಟ್ ಮಾಡಿರುವ ರಾಹುಲ್ ಗಾಂಧಿ, ನ್ಯೂಯಾರ್ಕ್ ಟೈಮ್ಸ್ ವರದಿಯ ಸ್ಕ್ರೀನ್‌ಶಾಟ್ ಅನ್ನು ಹಂಚಿಕೊಂಡಿದ್ದಾರೆ. "ಮೋದಿ ಜೀ ಸತ್ಯವನ್ನು ಮಾತನಾಡುವುದಿಲ್ಲ. ಇತರರಿಗೆ ಮಾತನಾಡಲು ಬಿಡುವುದಿಲ್ಲ. ಆಮ್ಲಜನಕದ ಕೊರತೆಯಿಂದ ಯಾರೂ ಸತ್ತಿಲ್ಲ ಎಂದು ಅವರು ಇನ್ನೂ ಸುಳ್ಳು ಹೇಳುತ್ತಾರೆ!" ಎಂದು ಆರೋಪಿಸಿದ್ದಾರೆ.
ಕೋವಿಡ್ 19 ಮರಣ ಸಂಖ್ಯೆಯನ್ನು ಅಂದಾಜಿಸುವ ವಿಶ್ವ ಆರೋಗ್ಯ ಸಂಸ್ಥೆಯ ವಿಧಾನವನ್ನು ಭಾರತ ಶನಿವಾರ ಪ್ರಶ್ನಿಸಿದೆ. ಬೃಹತ್ ಭೌಗೋಳಿಕ ಗಾತ್ರ ಮತ್ತು ಜನಸಂಖ್ಯೆ ಹೊಂದಿರುವ ದೇಶದಲ್ಲಿ ಕೋವಿಡ್ ಮರಣ ಅಂಕಿ ಅಂಶವನ್ನು ಅಂದಾಜಿಸಲು ಅಂತಹ ಗಣಿತದ ವಿಧಾನವನ್ನು ಅನ್ವಯಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿದೆ. ನ್ಯೂಯಾರ್ಕ್ ಟೈಮ್ಸ್ ಪತ್ರಿಕೆಯಲ್ಲಿ ಪ್ರಕಟವಾದ ಲೇಖನಕ್ಕೆ ಪ್ರತಿಕ್ರಿಯೆಯಾಗಿ ಸಚಿವಾಲಯ ಈ ಹೇಳಿಕೆ ಹೊರಡಿಸಿದೆ.
ಇದನ್ನೂ ಓದಿ: Life insurance policy : ಜೀವ ವಿಮಾ ಪಾಲಿಸಿ ಖರೀದಿಸುವ ನೆನಪಿರಲಿ 5 ವಿಷಯಗಳು
ಸರ್ಕಾರವು ಕೋವಿಡ್ ಸೋಂಕಿನಿಂದ ಮೃತಪಟ್ಟವರ ವಾಸ್ತವ ಅಂಕಿ ಅಂಶವನ್ನು ಬಿಡುಗಡೆ ಮಾಡುತ್ತಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದೆ. ಹಾಗೆಯೇ ಮೃತಪಟ್ಟ ಪ್ರತಿ ಕೋವಿಡ್ ರೋಗಿಯ ಕುಟುಂಬಕ್ಕೆ ತಲಾ 4 ಲಕ್ಷ ರೂ ಪರಿಹಾರ ನೀಡಬೇಕು ಎಂದು ಮನವಿ ಮಾಡಿದೆ.
ಭಾರತದ ಆರೋಗ್ಯ ಸಚಿವಾಲಯದ ದತ್ತಾಂಶದ ಪ್ರಕಾರ, ಭಾನುವಾರದ ವೇಳೆಗೆ ಭಾರತದಲ್ಲಿ 5,21,751 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.