ಸಂಗರೆಡ್ಡಿ: ಮೂರು ವರ್ಷದ ಹೆಣ್ಣು ಮಗುವನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದ 57 ವರ್ಷದ ವ್ಯಕ್ತಿಗೆ ಸಂಗರೆಡ್ಡಿಯ ಮೊದಲ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿ ಗುರುವಾರ ಆದೇಶ ಹೊರಡಿಸಿದೆ.


COMMERCIAL BREAK
SCROLL TO CONTINUE READING

ಅಪರಾಧಿ ಪಾಲ್ಥೆವರ್ ಶ್ರೀನಿವಾಸ್‌ಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ 5,000 ರೂ.ಗಳ ದಂಡ ಪಾವತಿಸುವಂತೆ ಆದೇಶಿಸಿದೆ. 2017ರ ಡಿಸೆಂಬರ್ 31 ರಂದು ಅಪರಾಧಿಯು ಮೂರು ವರ್ಷದ ಹೆಣ್ಣು ಮಗುವನ್ನು ಅಪಹರಿಸಿ ಅತ್ಯಾಚಾರ ಎಸಗಿ ಪೊದೆಯಲ್ಲಿ ಬಿಟ್ಟು ಹೋಗಿದ್ದ ಎಂದು ಸೈಬರಾಬಾದ್‌ನ ಪೊಲೀಸ್ ಆಯುಕ್ತ ವಿ.ಸಿ. ಸಜ್ಜನಾರ್ ತಿಳಿಸಿದ್ದಾರೆ.


ಬಳಿಕ ಬಾಲಕಿಯು ಅಳುತ್ತಿರುವ ಕೂಗು ಕೇಳಿ ಸ್ಥಳಕ್ಕಾಗಮಿಸಿದ ಜನರು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಪೊಲೀಸರಿಗೆ ವಿಷಯ ಮುಟ್ಟಿಸಿದ್ದರು. ಬಳಿಕ ಆರೋಪಿ ಶ್ರೀನಿವಾಸನನ್ನು  ಆರ್‌ಸಿ ಪುರಂ ಪೊಲೀಸ್ ಠಾಣೆಗೆ ಒಪ್ಪಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಲಾಗಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವುದು ಸಾಬೀತಾಗಿದ್ದು, ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.