ಗಯಾ: ಅತ್ಯಾಚಾರ ಆರೋಪಿಗಳನ್ನು ಬಂಧಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ನಡೆದಿರುವ ಘಟನೆ ಬಿಹಾರದ ನವಾದಾ ಜಿಲ್ಲೆಯಲ್ಲಿ ಗುರುವಾರ ನಡೆದಿದೆ.


COMMERCIAL BREAK
SCROLL TO CONTINUE READING

ಅತ್ಯಾಚಾರ ಆರೋಪಿಗಳನ್ನು ಬಂಧಿಸಲು ಆರು ಮಂದಿ ಪೊಲೀಸರು ಮನೆಯ ಸಮೀಪ ತೆರಳುತ್ತಿದ್ದಂತೆ ಅವರು ತಪ್ಪಿಸಿಕೊಳ್ಳಲು ಪ್ರಯತ್ನಿಸಿದರು. ಈ ವೇಳೆ ನಾವು ಅವರ ಬೆನ್ನಟ್ಟಿದಾಗ ಒಂದು ಗುಂಪು ನಮ್ಮ ಮೇಲೆ ದಾಳಿ ನಡೆಸಿದೆ ಎನ್ನಲಾಗಿದೆ.


ಆರೋಪಿಗಳು ಜಿಲ್ಲೆಯ ಗ್ರಾಮದಿಂದ ಇಬ್ಬರು ಹುಡುಗಿಯರನ್ನು ಅಪಹರಿಸಿ ಅತ್ಯಾಚಾರ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 


ಹುಡುಗಿಯರು ಮನೆಗೆ ಮರಳಿದ ನಂತರ ಪೊಲೀಸರು ಆರೋಪಿಗಳ ಹುಡುಕಾಟ ಪ್ರಾರಂಭಿಸಿದ್ದರು. ಆರೋಪಿಗಳು ಅಡಗಿರುವ ಜಾಗ ತಿಳಿದು ಅವರನ್ನು ಬಂಧಿಸಲು ಗ್ರಾಮಕ್ಕೆ ತೆರಳಿದರು. ಆ ಸಮಯದಲ್ಲಿ ಕೆಲವು ಪುರುಷರು ಪೊಲೀಸರ ಮೇಲೆ ದಾಳಿ ಮಾಡಿದರು. ಕಾನ್ಸ್ಟೇಬಲ್ ಮತ್ತು ಹಿರಿಯ ಪೊಲೀಸ್ ಅಧಿಕಾರಿ ಸೇರಿದಂತೆ ಆರು ಪೊಲೀಸರು ಗಾಯಗೊಂಡಿದ್ದಾರೆ ಎಂದು ಗಯಾ ಹಿರಿಯ ಪೊಲೀಸ್ ಅಧಿಕಾರಿ ರಾಜೀವ್ ಕುಮಾರ್ ಮಿಶ್ರಾ ಹೇಳಿದ್ದಾರೆ.



ಗಾಯಗೊಂಡಿರುವ ಆರು ಮಂದಿಯನ್ನೂ ಆಸ್ಪತ್ರೆಗೆ ಸೇರಿಸಲಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಆರೋಪಿಗಳಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಮಿಶ್ರಾ ಹೇಳಿದ್ದಾರೆ.