68ನೇ ವಯಸ್ಸಿನಲ್ಲಿ 3ನೇ ಮದುವೆಯಾದ ಖ್ಯಾತ ವಕೀಲ ಹರೀಶ್ ಸಾಳ್ವೆ..!
Harish Salve wedding: ಹರೀಶ್ ಸಾಳ್ವೆಯವರು 1982ರಲ್ಲಿ ಮೀನಾಕ್ಷಿ ಎಂಬುವರನ್ನು ಮದುವೆಯಾಗಿದ್ದರು. ಆದರೆ 2020ರಲ್ಲಿ ವಿಚ್ಛೇದನ ನೀಡಿದ್ದರು. 2020ರಲ್ಲಿ ಕಾರೋಲಿನ್ ಬ್ರೊಸಾರ್ಡ್ ಜೊತೆಗೆ ಸಪ್ತಪದಿ ತುಳಿದಿದ್ದರು.
ನವದೆಹಲಿ: ತಮ್ಮ 68ನೇ ವಯಸ್ಸಿನಲ್ಲಿ ಸಪ್ತಪದಿ ತುಳಿಯುವ ಮೂಲಕ ಭಾರತದ ಮಾಜಿ ಸಾಲಿಸಿಟರ್ ಜನರಲ್ ಹಾಗೂ ಖ್ಯಾತ ವಕೀಲ ಹರೀಶ್ ಸಾಳ್ವೆ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಈ ಮೂಲಕ ಸಾಳ್ವೆ 68ನೇ ವಯಸ್ಸಲ್ಲಿ 3ನೇ ಮದುವೆಯಾಗಿದ್ದಾರೆ.
ಟ್ರಿನಾ ಎಂಬುವರ ಜೊತೆ ಹರೀಶ್ ಸಾಳ್ವೆ ಲಂಡನ್‌ನಲ್ಲಿ ಮದುವೆ ಆಗಿದ್ದಾರೆ. ಈ ವಿವಾಹ ಕಾರ್ಯಕ್ರಮದಲ್ಲಿ ನೀತಾ ಅಂಬಾನಿ, ಗೋಪಿ ಹಿಂದುಜಾ & ಉಜ್ವಲ್ ರಾವತ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು. ವಿಶೇಷವೆಂದರೆ ಭಾರತದಿಂದ ಎಸ್ಕೇಪ್ ಆಗಿರುವ ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿ ಸಹ ಈ ಕಾರ್ಯಕ್ರಮಕ್ಕೆ ಹಾಜರಾಗಿದ್ದು, ನವಜೋಡಿಗೆ ಶುಭ ಹಾರೈಸಿದ್ದಾರೆ.
ಇದನ್ನೂ ಓದಿ: "ನಾನಿದ್ದರೆ ಬಿಜೆಪಿ ನಾಯಕರಿಗೆ ಆಂತಕ ಎದುರಾಗಲಿದೆ"-ಉಮಾಭಾರತಿ
ವಿವಾಹ ಬಂಧನಕ್ಕೆ ಒಳಗಾಗಿದ್ದಾರೆ. ಕುಲಭೂಷಣ್ ಜಾಧವ್ ಪ್ರಕರಣ ಸೇರಿ ಹಲವು ಉನ್ನತ ಮಟ್ಟದ ಕೇಸ್‌ಗಳಲ್ಲಿ ಸಾಳ್ವೆ ವಕೀಲರಾಗಿದ್ದರು. ಜಾಧವ್ ಪ್ರಕರಣದಲ್ಲಿ ಕೇವಲ 1 ರೂ. ಶುಲ್ಕ ಹಣ ಪಡೆದು ಸುದ್ದಿಯಾಗಿದ್ದರು. 2015ರಲ್ಲಿ ಸಾಳ್ವೆಯವರು ಪದ್ಮ ಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು.
ಇದನ್ನೂ ಓದಿ: ರಾಜಸ್ಥಾನದಲ್ಲಿ ಆತ್ಮಹತ್ಯೆಗೆ ಶರಣಾದ ನೀಟ್ ಪರೀಕ್ಷಾ ಆಕಾಂಕ್ಷಿ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.ರಾಜಸ್ಥಾನದಲ್ಲಿ ಆತ್ಮಹತ್ಯೆಗೆ ಶರಣಾದ ನೀಟ್ ಪರೀಕ್ಷಾ ಆಕಾಂಕ್ಷಿ