ಉತ್ತರಾಖಂಡ: ತೆಹ್ರಿ ಗರ್ವಾಲ್ನ ಸೇತುವೆ ಬಳಿ ಕಾರು ಅಪಘಾತ, 7 ಮಂದಿ ಸಾವು
ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ತೆಹ್ರಿ: ಉತ್ತರಾಖಂಡದ ತೆಹ್ರಿ ಗರ್ವಾಲ್ ಜಿಲ್ಲೆಯ ನೈನ್‌ಬಾಗ್‌ನ ಸೇತುವೆಯ ಬಳಿ ಸೋಮವಾರ ತಡ ರಾತ್ರಿ ಭೀಕರ ಕಾರು ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ಎಸ್‌ಡಿಆರ್‌ಎಫ್ ತಂಡ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.