ಚಂದೌಲಿ: ವರ್ಷದ ಮೊದಲ ದಿನ ಉತ್ತರ ಪ್ರದೇಶದ ಚಂದೌಲಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ಮಂಗಳವಾರ (ಜನವರಿ 01) ಬೆಳಗ್ಗೆ ಚಾಲಕನ ನಿಯಂತ್ರಣ ತಪ್ಪಿದ ಟ್ರಕ್ ಗುಡಿಸಲಿಗೆ ನುಗ್ಗಿದ್ದು, ಈ ದುರ್ಘಟನೆಯಲ್ಲಿ ಏಳು ಜನ ಮೃತಪಟ್ಟಿದ್ದಾರೆ. 


COMMERCIAL BREAK
SCROLL TO CONTINUE READING

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಮೃತಪಟ್ಟವರ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಅದೇ ಸಮಯದಲ್ಲಿ ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 


ಯುಪಿ ಬಿಹಾರದ ಗಡಿ ಪ್ರದೇಶದ ಇಲಿಯಾ ಪೋಲಿಸ್ ಸ್ಟೇಷನ್ ಪ್ರದೇಶದ ಮಾಲ್ಡಾಹ್ ಸೇತುವೆಯ ಬಳಿ ಈ ದುರ್ಘಟನೆ ನಡೆದಿದೆ.


ಮಾಹಿತಿಯ ಪ್ರಕಾರ, ಈ ಘಟನೆಯು ಸಂಭವಿಸಿದಾಗ, ಕುಟುಂಬದ ಎಲ್ಲಾ ಸದಸ್ಯರು ಮನೆಯಲ್ಲಿ ಮಲಗಿದ್ದರು ಎಂದು ಹೇಳಲಾಗಿದೆ. ಸತ್ತವರಲ್ಲಿ ಮಹಿಳೆಯರು ಮತ್ತು ಇಬ್ಬರೂ ಮಕ್ಕಳು ಸೇರಿದ್ದಾರೆ. ಈ ಘಟನೆಯ ಬಗ್ಗೆ ಜನರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಉದ್ವೇಗಕ್ಕೊಳಗಾಗಿರುವ ಜನರನ್ನು ನಿಯಂತ್ರಿಸಲು ಹೆಚ್ಚಿನ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ. ಏಳು ಜನರ ಸಾವಿನ ನಂತರ ಗ್ರಾಮಸ್ಥರು ಡಿಎಂ ಸ್ಥಳದಲ್ಲೇ ಬರುವಂತೆ ಒತ್ತಾಯಿಸಿದ್ದಾರೆ. ಇದರ ಜೊತೆಯಲ್ಲಿ, ಸತ್ತವರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ.