ಕೊಂಡಗಾನ್: ಬೊಲೆರೋ-ಟ್ರಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಾವನ್ನಪಿದ ದಾರುಣ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ.


COMMERCIAL BREAK
SCROLL TO CONTINUE READING

ಛತ್ತೀಸಗಢದ ಕೊಂಡಿಗಾಂವ್​ನ ದೂದಗಾಂವ್​ ರಸ್ತೆಯಲ್ಲಿ ಈ ಭೀಕರ ಅಪಘಾತದಲ್ಲಿ ಸಂಭವಿಸಿದ್ದು, ಮೂವರು ಮಹಿಳೆಯರು, ಇಬ್ಬರು ಬಾಲಕಿಯರು ಸೇರಿದಂತೆ ಒಂದೇ ಕುಟುಂಬದ 7 ಮಂದಿ ಸಾವನ್ನಪ್ಪಿದ್ದು, ಗಾಯಗೊಂಡ ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. 


ಕೊಂಡಿಗಾಂವ್​ದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ವಾಪಸ್​ ಬರುತ್ತಿದ್ದಾಗ ಈ ಘಟನೆ ನಡೆದಿದ್ದು, ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದು, ಉಳಿದವರು ಆಸ್ಪತ್ರೆಗೆ ದಾಖಲಾದ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. 


ರಾಯ್ಪುರ್-ಕೊಡಗಾವ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಜಗದಲ್ಪುರ ಹೆದ್ದಾರಿಯಲ್ಲಿ ದೂದಗಾಂವ್ ಗ್ರಾಮದ ಬಳಿ ಅಪಘಾತ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸಲಾಗುತ್ತಿದೆ.