close

News WrapGet Handpicked Stories from our editors directly to your mailbox

ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: 8 ಮಂದಿ ಸ್ಥಳದಲ್ಲೇ ಸಾವು!

ಅಪಘಾತದ ಬಗ್ಗೆ ಮಾಹಿತಿ ಪಡೆಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿರುವ, ಪೊಲೀಸರು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.

Updated: Mar 29, 2019 , 09:55 AM IST
ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: 8 ಮಂದಿ ಸ್ಥಳದಲ್ಲೇ ಸಾವು!
Pic Courtesy: ANI

ನವದೆಹಲಿ: ಶುಕ್ರವಾರ ಬೆಳಿಗ್ಗೆ ಗ್ರೇಟರ್ ನೋಯ್ಡಾದ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಎಂಟು ಜನರು ಮೃತಪಟ್ಟಿದ್ದಾರೆ ಮತ್ತು 30 ಮಂದಿ ಗಾಯಗೊಂಡಿದ್ದಾರೆ.

ಶುಕ್ರವಾರ ಬೆಳಗ್ಗೆ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಬಸ್ ಮತ್ತು ಟ್ರಕ್ ಮುಖಾಮುಖಿಗೊಂಡು ಈ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ, 8 ಜನರು ಮೃತಪಟ್ಟಿರುವುದಾಗಿ ದೃಢಪಡಿಸಲಾಗಿದೆ, 30 ಕ್ಕಿಂತ ಹೆಚ್ಚು ಜನರು ಗಾಯಗೊಂಡಿದ್ದಾರೆಂದು ವರದಿಯಾಗಿದೆ. 

ಅಪಘಾತದ ಬಳಿಕ ಸ್ಥಳೀಯ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.  ಅಪಘಾತದ ಬಗ್ಗೆ ಮಾಹಿತಿ ಪಡೆಯುತ್ತಿದ್ದಂತೆ, ಪೊಲೀಸರು ಮತ್ತು ರಕ್ಷಣಾ ಪಡೆ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.

ಗ್ರೇಟರ್ ನೋಯ್ಡಾ ರಬುಪುರಾ ಪೊಲೀಸ್ ಠಾಣೆಯ ಪೊಲೀಸರು ಅಪಘಾತದಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.