ಸಂಭಲ್‌ನಲ್ಲಿ ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ 8 ಮಂದಿ ದುರ್ಮರಣ

ಮಂಗಳವಾರ ತಡರಾತ್ರಿ ಸಂಭಲ್ ನ ಬಹಜೋಯಿ ಠಾಣೆ ವ್ಯಾಪ್ತಿಯಲ್ಲಿ ಲೆಹ್ರಾವಾನ್ ಗ್ರಾಮದ ಬಳಿ ಅಪಘಾತ ಸಂಭವಿಸಿದೆ.

Updated: Jun 19, 2019 , 02:44 PM IST
ಸಂಭಲ್‌ನಲ್ಲಿ ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ 8 ಮಂದಿ ದುರ್ಮರಣ
Pic Courtesy: ANI

ಲಕ್ನೋ: ಇಲ್ಲಿನ ಮೊರಾದಾಬಾದ್-ಆಗ್ರಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಮತ್ತು ಮಿನಿ-ಸರಕುಗಳ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕನಿಷ್ಠ 8 ಜನರು ಸಾವನ್ನಪ್ಪಿದ್ದಾರೆ ಮತ್ತು 11 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಮಂಗಳವಾರ ತಡರಾತ್ರಿ ಸಂಭಲ್ ನ ಬಹಜೋಯಿ ಠಾಣೆ ವ್ಯಾಪ್ತಿಯಲ್ಲಿ ಲೆಹ್ರಾವಾನ್ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು, ಮೃತರೆಲ್ಲರೂ ಮಗಳ ಮದುವೆ ಸಮಾರಂಭ ಮುಗಿಸಿಕೊಂಡು ಸಂತೋಷದಿಂದ ಮರಳುತ್ತಿದ್ದರು. ಈ ಘಟನೆಯಲ್ಲಿ 8 ಮಂದಿ ಸಾವನ್ನಪ್ಪಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಯಮುನಾ ಪ್ರಸಾದ್ ತಿಳಿಸಿದ್ದಾರೆ.

ಘಟನೆಯಲ್ಲಿ ಒಂದೇ ಕುಟುಂಬದ 8 ಮಂದಿ ಸಾವನ್ನಪ್ಪಿದ ಬಳಿಕ, ಕುಟುಂಬದ ಇತರ ಸದಸ್ಯರಿಗೆ ಎಲ್ಲಾ ರೀತಿಯ ನೆರವು ಒದಗಿಸುವುದಾಗಿ ಜಿಲ್ಲೆಯ ಡಿಎಂ ಮತ್ತು ಎಸ್‌ಪಿ ಭರವಸೆ ನೀಡಿದ್ದಾರೆ.