ವ್ಯಾನ್ ಪಲ್ಟಿ: 8 ಸಾವು, 16 ಮಂದಿಗೆ ಗಾಯ

ಅಪಘಾತದಲ್ಲಿ ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಆರಂಭಿಸಿದ್ದಾರೆ.

Last Updated : Apr 27, 2019, 08:03 AM IST
ವ್ಯಾನ್ ಪಲ್ಟಿ: 8 ಸಾವು, 16 ಮಂದಿಗೆ ಗಾಯ title=

ಬಲರಾಂಪುರ: ಚಾಲಕನ ಅಜಾಗರೂಕತೆಯಿಂದ ವ್ಯಾನ್ ಪಲ್ಟಿಯಾದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು, 16 ಮಂದಿ ಗಂಭಿರವಾಗಿ ಗಾಯಗೊಂಡಿರುವ ಘಟನೆ ಛತ್ತೀಸಗಡದ ಬಲರಾಮಪುರ ಜಿಲ್ಲೆಯಲ್ಲಿ ಅಮೇರಾ ಗ್ರಾಮದಲ್ಲಿ ಶನಿವಾರ ಮುಂಜಾನೆ ಸಂಭವಿಸಿದೆ ಎಂದು ಎಎನ್ಐ ವರದಿ ಮಾಡಿದೆ.

ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುರ್ಗುಜಾ ಅವರ ಪ್ರಕಾರ, ಏಳು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ವ್ಯಕ್ತಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯಲ್ಲಿ ಮೃತಪಟ್ಟಿದ್ದಾರೆ. ವ್ಯಾನ್ ಚಾಲಕ ಮದ್ಯಪಾನ ಮಾಡಿದ್ದ ಎಂದು ಪ್ರಯಾಣಿಕರು ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದ್ದಾರೆ.

ಅಪಘಾತದಲ್ಲಿ ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಆರಂಭಿಸಿದ್ದಾರೆ.

Trending News