8th Pay Commission Latest News: ಕೇಂದ್ರ ಸರ್ಕಾರಿ ನೌಕರರ ಪಾಲಿಗೆ ಒಂದು ಕಹಿ ಸುದ್ದಿ ಪ್ರಕಟವಾಗಿದೆ. ಕೇಂದ್ರ ನೌಕರರ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ 8ನೇ ವೇತನ ಆಯೋಗ ರಚನೆಯ ಕುರಿತು ಯಾವುದೇ ಪ್ರಸ್ತಾವನೆ ಸರಕಾರದ ಮುಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಪ್ರಶ್ನೋತ್ತರ ವೇಳೆಯಲ್ಲಿ ಕೇಳಿದ ಪ್ರಶ್ನೆಗೆ ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಲಿಖಿತ ರೂಪದಲ್ಲಿ ಈ ಉತ್ತರ ನೀಡಿದ್ದಾರೆ.
[[{"fid":"252245","view_mode":"default","fields":{"format":"default","field_file_image_alt_text[und][0][value]":false,"field_file_image_title_text[und][0][value]":false},"type":"media","field_deltas":{"1":{"format":"default","field_file_image_alt_text[und][0][value]":false,"field_file_image_title_text[und][0][value]":false}},"link_text":false,"attributes":{"class":"media-element file-default","data-delta":"1"}}]]


COMMERCIAL BREAK
SCROLL TO CONTINUE READING

ಇದಕ್ಕೂ ಮುನ್ನ ಕೇಂದ್ರ ಸರ್ಕಾರಿ ನೌಕರರ 8 ನೇ ವೇತನ ಆಯೋಗವನ್ನು ರಚಿಸುವ ಪ್ರಸ್ತಾವನೆಯು ಕೇಂದ್ರ ಸರ್ಕಾರದ ಮುಂದೆ ಇದೆಯೇ ಮತ್ತು ಅದರ ಶಿಫಾರಸ್ಸುಗಳನ್ನು ಜನವರಿ 1, 2026ರಿಂದ ಜಾರಿಗೆ ಬರಲಿವೆಯೇ ಎಂದು ಲೋಕಸಭೆಯಲ್ಲಿ ಹಣಕಾಸು ಸಚಿವರಿಗೆ ಪ್ರಶ್ನೆಯನ್ನು ಕೇಳಲಾಗಿತ್ತು. ಈ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪಂಕಜ್ ಚೌಧರಿ, 8ನೇ ವೇತನ ಆಯೋಗವನ್ನು ರಚಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದಿದ್ದಾರೆ.


ಇದನ್ನೂ ಓದಿ-Viral Video : ನಾಯಿಯನ್ನು ರಕ್ಷಿಸಲು ಬೃಹತ್ ಹೆಬ್ಬಾವಿನ ಜೊತೆ ಪುಟ್ಟ ಮಕ್ಕಳ ಫೈಟ್‌

ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಣದುಬ್ಬರವನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರಿ ನೌಕರರ ವೇತನವನ್ನು ಹೆಚ್ಚಿಸಲು ಸರ್ಕಾರ ಅನೇಕ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಹಣಕಾಸು ರಾಜ್ಯ ಸಚಿವರು ಹೇಳಿದ್ದಾರೆ. ಇದರಲ್ಲಿ ಪ್ರತಿ ಆರು ತಿಂಗಳಿಗೊಮ್ಮೆ ತುಟ್ಟಿಭತ್ಯೆ ಹೆಚ್ಚಳ ಕೂಡ ಒಂದಾಗಿದೆ ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ-Viral Video: ಮಹಿಳೆಯ ಮೇಲೆ ಪ್ರೀತಿಯ ಸುರಿಮಳೆಗೈದ ಬೀದಿ ನಾಯಿಗಳು, ವಿಡಿಯೋ ನೋಡಿ


1947 ರಿಂದ ಇದುವರೆಗೆ 10 ವೇತನ ಆಯೋಗಗಳನ್ನು ರಚಿಸಲಾಗಿದೆ. ಸರ್ಕಾರವು ಪ್ರತಿ 10 ವರ್ಷಗಳಿಗೊಮ್ಮೆ ಹೊಸ ವೇತನ ಆಯೋಗವನ್ನು ರಚಿಸುತ್ತದೆ. ಅವುಗಳ ಶಿಫಾರಸುಗಳ ಆಧಾರದ ಮೇಲೆ ಕೇಂದ್ರ ಸರ್ಕಾರಿ ನೌಕರರ ವೇತನ ಮತ್ತು ಪಿಂಚಣಿದಾರರ ಪಿಂಚಣಿ ಹೆಚ್ಚಿಸಲಾಗುತ್ತದೆ. ಏಳನೇ ವೇತನ ಆಯೋಗವನ್ನು ಯುಪಿಎ ಸರ್ಕಾರವು 24 ಫೆಬ್ರವರಿ 2014 ರಂದು ರಚಿಸುತ್ತು. 2006ರಲ್ಲಿ ಮತ್ತು 2016ರಲ್ಲಿ ರಚನೆ ಗೊಂಡ ಮತ್ತು ಅಸ್ತಿತ್ವದಲ್ಲಿರುವ ಆರನೇ ಮತ್ತು ಏಳನೇ ವೇತನ ಆಯೋಗಗಳು ಕೇಂದ್ರ ನೌಕರರ ವೇತನದಲ್ಲಿ ಭಾರಿ ಹೆಚ್ಚಳಕ್ಕೆ ಶಿಫಾರಸು ಮಾಡಿದ್ದವು ಮತ್ತು ಅದನ್ನು ಒಪ್ಪಿಕೊಂಡು ಸರ್ಕಾರವೂ ಕೂಡ ನೌಕರ ವೇತನವನ್ನು ಹೆಚ್ಚಿಸುತ್ತು.


ಇದನ್ನೂ ನೋಡಿ-


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.