Gujarat Bus Accident: ಚಾಲಕನಿಗೆ ಹೃದಯಾಘಾತ: ಕಾರಿಗೆ ಬಸ್ ಡಿಕ್ಕಿ ಹೊಡೆದು 9 ಮಂದಿ ದುರ್ಮರಣ; 28 ಜನರಿಗೆ ಗಾಯ

Gujarat Bus Accident: ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿದ್ದ ಎಲ್ಲರೂ ಸಾವನ್ನಪ್ಪಿದ್ದಾರೆ. ಇನ್ನು ಬಸ್‌ನಲ್ಲಿದ್ದ 28 ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ 11 ಜನರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದಿಂದ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತವಾಗಿದ್ದು, ಪೊಲೀಸರು ಆಗಮಿಸಿ ಕಾರ್ಯಾಚರಣೆ ಕೈಗೊಂಡು ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ

Written by - Bhavishya Shetty | Last Updated : Dec 31, 2022, 12:54 PM IST
    • ಬಸ್ ಚಾಲಕನಿಗೆ ಮಾರ್ಗ ಮಧ್ಯೆ ಹೃದಯಾಘಾತವಾಗಿದೆ
    • ಟೊಯೊಟಾ ಫಾರ್ಚುನರ್ ಕಾರಿಗೆ ಬಸ್ ಡಿಕ್ಕಿ ಹೊಡೆದಿದೆ
    • ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಒಂಬತ್ತು ಜನರ ಪ್ರಾಣ ಪಕ್ಷಿ ಹಾರಿಹೋಗಿದೆ
Gujarat Bus Accident: ಚಾಲಕನಿಗೆ ಹೃದಯಾಘಾತ: ಕಾರಿಗೆ ಬಸ್ ಡಿಕ್ಕಿ ಹೊಡೆದು 9 ಮಂದಿ ದುರ್ಮರಣ; 28 ಜನರಿಗೆ ಗಾಯ title=
Bus driver heart attack

Gujarat Bus Accident: ಗುಜರಾತ್: ಕಳೆದ ದಿನ ತಡರಾತ್ರಿ ಗುಜರಾತ್‌ನ ನವಸಾರಿ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿದ್ದು 28 ಜನರು ಗಾಯಗೊಂಡಿದ್ದಾರೆ. ಸೂರತ್‌ನಿಂದ ಪ್ರಮುಖ್ ಸ್ವಾಮಿ ಮಹಾರಾಜ್ ಶತಾಬ್ದಿ ಮಹೋತ್ಸವ ಕಾರ್ಯಕ್ರಮ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಸಿದ್ಧಾರ್ಥ್ ಮತ್ತು ಕಿಯಾರಾ ಮದುವೆ : ಫೆ.6ಕ್ಕೆ ಸಪ್ತಪದಿ ತುಳಿಯಲಿರುವ ಸ್ಟಾರ್‌ ಜೋಡಿ

ಬಸ್ ಚಾಲಕನಿಗೆ ಮಾರ್ಗ ಮಧ್ಯೆ ಹೃದಯಾಘಾತವಾಗಿದೆ. ಇದೇ ವೇಳೆ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಸಾಗುತ್ತಿದ್ದ ಟೊಯೊಟಾ ಫಾರ್ಚುನರ್ ಕಾರಿಗೆ ಬಸ್ ಡಿಕ್ಕಿ ಹೊಡೆದಿದೆ. ಬಸ್ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಒಂಬತ್ತು ಜನರ ಪ್ರಾಣ ಪಕ್ಷಿ ಹಾರಿಹೋಗಿದೆ.

ಇದನ್ನೂ ಓದಿ: ಹೊಸ ವರ್ಷದ ಸಂಭ್ರಮಾಚರಣೆಗೆ ಕ್ಷಣಗಣನೆ: ಸಿಸಿಟಿವಿ ನಿಯಂತ್ರಣಕ್ಕೆ ಪ್ರತ್ಯೇಕ ವಾರ್ ರೂಮ್

ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿದ್ದ ಎಲ್ಲರೂ ಸಾವನ್ನಪ್ಪಿದ್ದಾರೆ. ಇನ್ನು ಬಸ್‌ನಲ್ಲಿದ್ದ 28 ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ 11 ಜನರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದಿಂದ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತವಾಗಿದ್ದು, ಪೊಲೀಸರು ಆಗಮಿಸಿ ಕಾರ್ಯಾಚರಣೆ ಕೈಗೊಂಡು ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ.  

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News