2014 ರಿಂದ ಜಮ್ಮು-ಕಾಶ್ಮೀರದಲ್ಲಿ 963 ಉಗ್ರರ ಸಾವು, 413 ಭದ್ರತಾ ಸಿಬ್ಬಂದಿ ಹುತಾತ್ಮ: ಗೃಹ ಸಚಿವಾಲಯ
ಪ್ರಧಾನಿ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ಭಯೋತ್ಪಾದನೆ ವಿರುದ್ಧ ಸಹಿಷ್ಣು ನೀತಿಯನ್ನು ಅನುಸರಿಸಿ, ಭಯೋತ್ಪಾದಕರನ್ನು ತಟಸ್ಥಗೊಳಿಸಲು ಭದ್ರತಾ ಪಡೆಗಳು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳುತ್ತಿವೆ ಎಂದು ಗೃಹ ಸಚಿವಾಲಯ ಹೇಳಿದೆ.
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು 2014ರಲ್ಲಿ ದೇಶದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತೆ ಮತ್ತು ರಕ್ಷಣಾ ಸಿಬ್ಬಂದಿ 963 ಭಯೋತ್ಪಾದಕರನ್ನು ಹತ್ಯೆಗೈದಿದ್ದಾರೆ. ಈ ಅವಧಿಯಲ್ಲಿ ರಾಜ್ಯದಲ್ಲಿ ನಡೆದ ವಿವಿಧ ಎನ್‌ಕೌಂಟರ್‌ಗಳು ಮತ್ತು ವಿರೋಧಿ ಕಾಂಬಿಂಗ್ ಕಾರ್ಯಾಚರಣೆಗಳಲ್ಲಿ ಒಟ್ಟು 413 ಭದ್ರತಾ ಸಿಬ್ಬಂದಿಗಳು ಹುತಾತ್ಮರಾಗಿದ್ದಾರೆ ಎಂದು ಗೃಹ ಸಚಿವಾಲಯ ಮಾಹಿತಿ ನೀಡಿದೆ.
ಗೃಹ ಸಚಿವಾಲಯ ಲೋಕಸಭೆಯಲ್ಲಿ ಲಿಖಿತ ಉತ್ತರದಲ್ಲಿ ಈ ಡೇಟಾವನ್ನು ನೀಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಭಯೋತ್ಪಾದನೆ ವಿರುದ್ಧ ಸಹಿಷ್ಣು ನೀತಿಯನ್ನು ಅನುಸರಿಸಿ, ಭಯೋತ್ಪಾದಕರನ್ನು ತಟಸ್ಥಗೊಳಿಸಲು ಭದ್ರತಾಪಡೆಗಳು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳುತ್ತಿವೆ ಎಂದು ಗೃಹ ಸಚಿವಾಲಯ ಹೇಳಿದೆ.
ಪ್ರತಿ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಪ್ರಧಾನ ಕಚೇರಿಯಲ್ಲಿ ನಿಯೋಜಿತ ಕಲ್ಯಾಣ ಅಧಿಕಾರಿ ಇದ್ದಾರೆ. ಇದಲ್ಲದೆ, ಕರ್ತವ್ಯದ ವೇಳೆ ಹುತಾತ್ಮರಾದ ಭದ್ರತಾ ಸಿಬ್ಬಂದಿಯ ಕುಟುಂಬಗಳಿಗೆ ಸೂಕ್ತ ಅನುಕೂಲ ಕಲ್ಪಿಸಲು ಘಟಕ ಮಟ್ಟದಲ್ಲಿ ಕಲ್ಯಾಣ ಅಧಿಕಾರಿಗಳನ್ನು ಇರಿಸಲಾಗಿದೆ ಎಂದು ಗೃಹ ಸಚಿವಾಲಯ ಮಾಹಿತಿ ನೀಡಿದೆ.
2018 ರಲ್ಲಿ ಜಮ್ಮು ಮತ್ತು ಕಾಶ್ಮೀರವು ಒಟ್ಟು 318 ಭಯೋತ್ಪಾದಕ ದಾಳಿಗೆ ಸಾಕ್ಷಿಯಾಗಿದೆ ಎಂದು ಸೋಮವಾರ ರಾಜ್ಯ ರಕ್ಷಣಾ ಸಚಿವ ಶ್ರೀಪಾದ್ ನಾಯಕ್ ರಾಜ್ಯಸಭೆಗೆ ಮಾಹಿತಿ ನೀಡಿದ್ದರು. ಇದು 2017 ರಲ್ಲಿ ನಡೆದ ದಾಳಿಯ ಸಂಖ್ಯೆಗಿಂತ 187 ಹೆಚ್ಚಾಗಿದೆ.
ರಾಜ್ಯಸಭಾ ಸಂಸದ ವಿಜಯ್ ಗೋಯೆಲ್ ಅವರಿಗೆ ಲಿಖಿತ ರೂಪದಲ್ಲಿ ಉತ್ತರ ನೀಡಿದ್ದು, ರಕ್ಷಣಾ ಮತ್ತು ಭದ್ರತಾ ಸಿಬ್ಬಂದಿ ಭಯೋತ್ಪಾದಕರ ವಿರುದ್ಧ ಕೈಗೊಂಡ ವಿವಿಧ ಕಾರ್ಯಾಚರಣೆಯಲ್ಲಿ 265 ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಅದೇ ವರ್ಷದಲ್ಲಿ, ಒಟ್ಟು 43 ಸೇನಾ ಜವಾನರು ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯ ಸಮಯದಲ್ಲಿ ಹುತಾತ್ಮರಾದರು ಎಂದು ಉಲ್ಲೇಖಿಸಲಾಗಿದೆ.
ಫೆಬ್ರವರಿ 14 ರಂದು ಪುಲ್ವಾಮಾದ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಬೆಂಗಾವಲು ಪಡೆ ಮೇಲೆ ನಡೆದ ಭಯೋತ್ಪಾದಕ ದಾಳಿ ಸೇರಿದಂತೆ 2019 ರಲ್ಲಿ ಭಾರತವು ಹಲವಾರು ಭಯೋತ್ಪಾದಕ ದಾಳಿಗಳಿಗೆ ಸಾಕ್ಷಿಯಾಗಿದೆ, ಇದರಲ್ಲಿ ಕನಿಷ್ಠ 40 ಸಿಬ್ಬಂದಿ ಸಾವನ್ನಪ್ಪಿದ್ದಾರೆ.
ಜೂನ್‌ನಲ್ಲಿ ದಕ್ಷಿಣ ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಐವರು ಸಿಆರ್‌ಪಿಎಫ್ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪು ಅಲ್ ಉಮರ್ ಮುಜಾಹಿದ್ದೀನ್ ಈ ದಾಳಿಯ ಹೊಣೆಯನ್ನು ಹೊತ್ತುಕೊಂಡಿದ್ದರು.