ಉತ್ತರ ಪ್ರದೇಶ: ಮಲಗಿದ್ದ ಅಪ್ರಾಪ್ತ ದಲಿತ ಬಾಲಕಿಯನ್ನು ಅಪಹರಿಸಿ ಹತ್ಯೆ

ಕುಟುಂಬ ಸದಸ್ಯರೊಂದಿಗೆ ತಮ್ಮ ಮನೆಯ ಹೊರಗೆ ಮಲಗಿದ್ದಾಗ 12 ವರ್ಷದ ದಲಿತ ಬಾಲಕಿಯನ್ನು ಅಪಹರಿಸಿ ಹತ್ಯೆಗೈದಿರುವ ಘಟನೆ ಇಲ್ಲಿನ ಗ್ರಾಮವೊಂದರಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

PTI | Updated: Jun 21, 2019 , 05:13 PM IST
ಉತ್ತರ ಪ್ರದೇಶ: ಮಲಗಿದ್ದ ಅಪ್ರಾಪ್ತ ದಲಿತ ಬಾಲಕಿಯನ್ನು ಅಪಹರಿಸಿ ಹತ್ಯೆ
ಸಾಂದರ್ಭಿಕ ಚಿತ್ರ

ಉನ್ನಾವೋ : ಕುಟುಂಬ ಸದಸ್ಯರೊಂದಿಗೆ ತಮ್ಮ ಮನೆಯ ಹೊರಗೆ ಮಲಗಿದ್ದಾಗ 12 ವರ್ಷದ ದಲಿತ ಬಾಲಕಿಯನ್ನು ಅಪಹರಿಸಿ ಹತ್ಯೆಗೈದಿರುವ ಘಟನೆ ಇಲ್ಲಿನ ಗ್ರಾಮವೊಂದರಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುರುವಾರ-ಶುಕ್ರವಾರದ ಮಧ್ಯರಾತ್ರಿ ಸಫಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಹಳ್ಳಿಯಲ್ಲಿ ಈ ಘಟನೆ ನಡೆದಿದೆ ಎಂದು ಅವರು ಹೇಳಿದರು. ಬಾಲಕಿ ದಲಿತ ಸಮುದಾಯಕ್ಕೆ ಸೇರಿದ್ದಾಳೆ ಎಂದು ತಿಳಿದುಬಂದಿದೆ.ಆದರೆ ಆಕೆ ಅತ್ಯಾಚಾರಕ್ಕೊಳಗಾಗಿದ್ದಾಳೋ ಇಲ್ಲವೋ ಎಂಬುದು ಮರಣೋತ್ತರ ಪರೀಕ್ಷೆಯ ನಂತರವೇ ಸ್ಪಷ್ಟವಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ ಗಿರ್ ಅವರ ಕುಟುಂಬ ಸದಸ್ಯರು ಶುಕ್ರವಾರ ಬೆಳಿಗ್ಗೆ ಎಚ್ಚರವಾದಾಗ ಅವಳನ್ನು ನಾಪತ್ತೆಯಾಗಿರುವುದು ತಿಳಿದುಬಂದಿದೆ. ಬಾಲಕಿಯು ತಂದೆ ಜೊತೆ ಮನೆಯ ಹೊರಗಿನ ಇತರ ಕುಟುಂಬ ಸದಸ್ಯರೊಂದಿಗೆ ಮಲಗಿದ್ದಾಳೆ ಮತ್ತು ಮುಂಜಾನೆ 3 ರವರೆಗೆ ಅವರೊಂದಿಗೆ ಇದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.ಆದರೆ  ಬೆಳಿಗ್ಗೆ ಎದ್ದಾಗ ಬಾಲಕಿಯನ್ನು ಕಾಣೆಯಾಗಿರುವುದು ಕಂಡು ಬಂದಿದೆ ಎಂದು ಹೇಳಿದ್ದಾರೆ

ಬೆಳಿಗ್ಗೆ ಬಾಲಕಿಗಾಗಿ ಹುಡುಕಾಟವನ್ನು ಪ್ರಾರಂಭಿಸಿದಾಗ ಅವಳ ರಕ್ತದ ದೇಹವನ್ನು ಗ್ರಾಮದ ಹೊರಗೆ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ತಲುಪಿದ ಲಕ್ನೋ ರೇಂಜ್ ಇನ್ಸ್‌ಪೆಕ್ಟರ್ ಜನರಲ್ ಎಸ್.ಕೆ.ಭಗತ್, ನಾಲ್ಕು ತಂಡಗಳನ್ನು ರಚಿಸಲಾಗಿದೆ, ಮತ್ತು ಶೀಘ್ರದಲ್ಲೇ ಪ್ರಕರಣವನ್ನು ಬೇದಿಸಲಾಗುವುದು ಎಂದು ಹೇಳಿದರು.

"ಪೊಲೀಸರಿಗೆ ಬಲವಾದ ಸುಳಿವು ಸಿಕ್ಕಿದೆ. ಶ್ವಾನ ತಂಡವನ್ನು ನೋಡಿದ ನಂತರ, ಮೃತ ಹುಡುಗಿಯ ನೆರೆಹೊರೆಯವನು ಸ್ಥಳದಿಂದ ಪರಾರಿಯಾಗುತ್ತಿರುವುದು ಕಂಡುಬಂದಿದೆ" ಎಂದು ಅವರು ಹೇಳಿದರು ಮತ್ತು ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆಯೋ ಇಲ್ಲವೋ ಎಂಬುದು ಮರಣೋತ್ತರ ಪರೀಕ್ಷೆಯಲ್ಲಿ ಸ್ಪಷ್ಟವಾಗುತ್ತದೆ .