ಒಡಿಶಾ: ಮತಗಟ್ಟೆ ಹೊರಗೆ ಸಾವನ್ನಪ್ಪಿದ 95 ವರ್ಷದ ವೃದ್ಧ
ಚುನಾವಣೆಯಲ್ಲಿ ಮತ ಹಾಕಲು ಸರತಿ ಸಾಲಿನಲ್ಲಿ ನಿಂತಿದ್ದ 95 ವರ್ಷದ ವೃದ್ಧರೊಬ್ಬರು ಮತಗಟ್ಟೆ ಹೊರಗೆ ಮೃತಪಟ್ಟಿರುವ ಘಟನೆ ಒಡಿಶಾದಲ್ಲಿ ನಡೆದಿದೆ.
ಭುವನೇಶ್ವರ: ಒಡಿಶಾದಲ್ಲಿ ನಡೆಯುತ್ತಿರುವ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗೆ ಮತ ಹಾಕಲು ಬಂದಿದ್ದ 95 ವರ್ಷದ ವೃದ್ಧರೋರ್ವರು ಮತಗಟ್ಟೆ ಹೊರಗೆ ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ.
ಒಡಿಶಾದಲ್ಲಿ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಮತ ಚಲಾಯಿಸಲು ಬಂದಿದ್ದ 95 ವರ್ಷದ ವ್ಯಕ್ತಿ ಸರತಿ ಸಾಲಿನಲ್ಲಿ ಕಾಯುತ್ತಿದ್ದ ವೇಳೆ ಸಾವನ್ನಪ್ಪಿದ್ದಾರೆ.
ಅಸ್ಕ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಕನ್ಸಾಮರಿ ಮತಗಟ್ಟೆಯಲ್ಲಿ ಮತ ಚಲಾವಣೆಗಾಗಿ ಸರತಿಯಲ್ಲಿ ನಿಂತು ಕಾಯುತ್ತಿದ್ದ ವ್ಯಕ್ತಿ ಹಠಾತ್ತನೆ ಕುಸಿದುಬಿದ್ದು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.