ಬಂಗಾಳಿ ನಾಡಿನಲ್ಲಿ ಕುವೆಂಪು...! ಹಿಂದಿ ಹೇರಿಕೆ ವಿರುದ್ಧ ಬಂಗಾಳಿಗಳ ಆಕ್ರೋಶ
ಪಶ್ಚಿಮ ಬಂಗಾಳದಲ್ಲಿ ಹಿಂದಿ ಹೇರಿಕೆಯ ವಿಚಾರವಾಗಿ ಬಂಗಾಳಿಗಳು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಹಿಂದಿ ಹೇರಿಕೆಯ ವಿಚಾರವಾಗಿ ಬಂಗಾಳಿಗಳು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
ಇದೆ ವೇಳೆ ಸಿ.ಎನ್.ಅಣ್ಣಾದೊರೆ ಹಾಗೂ ಕುವೆಂಪು ಅವರ ಪೋಸ್ಟರ್ ಗಳನ್ನು ಹಿಡಿದು ಹಿಂದಿ ವಿರುದ್ಧ ಘೋಷಣೆ ಕೂಗುತ್ತಿರುವ ದೃಶ್ಯ ಪ್ರತಿಭಟನೆ ವೇಳೆ ಕಂಡು ಬಂದಿತು.
ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಇಂಗ್ಲೀಶ್ ಭಾಷೆಗೆ ಪ್ರಾಧಾನ್ಯತೆಯನ್ನು ಕಡಿತಗೊಳಿಸಿ ಹಿಂದಿಗೆ ಹೆಚ್ಚಿನ ಮಾನ್ಯತೆಯನ್ನು ನೀಡಲಾಗುತ್ತಿದೆ ಆ ಮೂಲಕ ದೇಶದ ಭಾಷಾ ವೈವಿದ್ಯತೆಯನ್ನು ಸರ್ಕಾರ ನಾಶ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ-Diwali Bonus: ಸರ್ಕಾರಿ ನೌಕರರಿಗೊಂದು ಭಾರಿ ಸಂತಸದ ಸುದ್ದಿ, ಸಿಗಲಿದೆ 1 ತಿಂಗಳ ವೇತನ ಬೋನಸ್
ಭಾರತೀಯ ಸಂವಿಧಾನದ ಎಂಟನೆ ಪರಿಚ್ಛೇದದ ಅನ್ವಯ ಭಾರತದ ಎಲ್ಲಾ ಭಾಷೆಗಳಿಗೆ ಸಮಾನವಾದ ಮಾನ್ಯತೆಯನ್ನು ನೀಡಬೇಕು ಎಂದು ಅವರು ಆಗ್ರಹಿಸಿದರು.
ಇತ್ತೀಚಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೇಂದ್ರ ಸರ್ಕಾರದ ಪ್ರತಿಷ್ಠಿತ ಸಂಸ್ಥೆಗಳಾದ ಐಐಟಿಯಂತಹ ಸಂಸ್ಥೆಗಳಲ್ಲಿ ಹಿಂದಿ ಮಾಧ್ಯಮದಲ್ಲಿ ಬೋಧನೆಗೆ ಅವಕಾಶ ಕಲ್ಪಿಸಲು ಸೂಚಿಸಿದ್ದರು.ಅಷ್ಟೇ ಅಲ್ಲದೆ ವಿಶ್ವಸಂಸ್ಥೆಯಲ್ಲಿಕೂಡ ಅಧಿಕೃತ ಭಾಷೆಯನ್ನಾಗಿ ಹಿಂದಿಯನ್ನು ಘೋಷಿಸಬೇಕು ಎಂದು ಸಂಸತ್ತಿನ ಸಮಿತಿ ಸೂಚಿಸಿತ್ತು.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.