ನವದೆಹಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿ ತನ್ನ ಹುಟ್ಟುಹಬ್ಬವನ್ನು ಆಚರಿಸಲು ಬಾಲಕಿಯೊಬ್ಬಳು ತನ್ನ ಸ್ನೇಹಿತನೊಂದಿಗೆ ಹೊರಟಿದ್ದ ಸಂದರ್ಭದಲ್ಲಿ, ಆಕೆ ಮೇಲೆ ಆರು ಜನರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಈಗ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

11ನೇ ತರಗತಿಯ ವಿದ್ಯಾರ್ಥಿನಿ ಮಂಗಳವಾರದಂದು ತನ್ನ ಸ್ನೇಹಿತನೊಂದಿಗೆ ಉದ್ಯಾನವನಕ್ಕೆ ಹೋಗಿದ್ದಳು ಮತ್ತು ರಾತ್ರಿ 9 ಗಂಟೆ ಸುಮಾರಿಗೆ ಅವನೊಂದಿಗೆ ಮನೆಗೆ ಹಿಂದಿರುಗುತ್ತಿದ್ದಾಗ 6 ಜನರನ್ನು ಒಳಗೊಂಡ ಗ್ಯಾಂಗ್ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದೆ. ಈ ಘಟನೆ ವೇಳೆ ಅವರು ಬಾಲಕಿಯ ಸ್ನೇಹಿತನನ್ನು ಥಳಿಸಿ, ನಂತರ ಏಕಾಂತ ಸ್ಥಳಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರು ಘಟನೆಯ ವಿಡಿಯೋ ಮಾಡಿದ್ದಾರೆ ಎನ್ನಲಾಗಿದೆ.


ಸಂತ್ರಸ್ತ ಬಾಲಕಿ ಮರು ದಿನ ಘಟನೆಯ ಬಗ್ಗೆ ತಾಯಿಗೆ ತಿಳಿಸಿದ್ದು, ನಂತರ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಇಬ್ಬರಿಗಾಗಿ ಶೋಧ ನಡೆಸುತ್ತಿದ್ದಾರೆ ಎನ್ನಲಾಗಿದೆ.