ಸಾಮೂಹಿಕ ಅತ್ಯಾಚಾರದ ಪ್ರಕರಣ ದಾಖಲಿಸಿದ ನಂತರ, ರಸ್ತೆ ಅಪಘಾತದಲ್ಲಿ ಬಾಲಕಿಯ ತಂದೆ ಸಾವು

ಉತ್ತರ ಪ್ರದೇಶದ ಕಾನ್ಪುರದ 13 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಗ್ರಾಮದಲ್ಲಿ ಮೂವರು ಸಾಮೂಹಿಕ ಅತ್ಯಾಚಾರ ಎಸಗಿದ ಎರಡು ದಿನಗಳ ನಂತರ, ಆಕೆಯ ತಂದೆ ಇಂದು ಬೆಳಿಗ್ಗೆ ಆಸ್ಪತ್ರೆಯ ಹೊರಗೆ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

Last Updated : Mar 10, 2021, 06:17 PM IST
  • ಉತ್ತರ ಪ್ರದೇಶದ ಕಾನ್ಪುರದ 13 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಗ್ರಾಮದಲ್ಲಿ ಮೂವರು ಸಾಮೂಹಿಕ ಅತ್ಯಾಚಾರ ಎಸಗಿದ ಎರಡು ದಿನಗಳ ನಂತರ, ಆಕೆಯ ತಂದೆ ಇಂದು ಬೆಳಿಗ್ಗೆ ಆಸ್ಪತ್ರೆಯ ಹೊರಗೆ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಸಾಮೂಹಿಕ ಅತ್ಯಾಚಾರದ ಪ್ರಕರಣ ದಾಖಲಿಸಿದ ನಂತರ, ರಸ್ತೆ ಅಪಘಾತದಲ್ಲಿ ಬಾಲಕಿಯ ತಂದೆ ಸಾವು title=
ಸಾಂದರ್ಭಿಕ ಚಿತ್ರ

ನವದೆಹಲಿ: ಉತ್ತರ ಪ್ರದೇಶದ ಕಾನ್ಪುರದ 13 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಗ್ರಾಮದಲ್ಲಿ ಮೂವರು ಸಾಮೂಹಿಕ ಅತ್ಯಾಚಾರ ಎಸಗಿದ ಎರಡು ದಿನಗಳ ನಂತರ, ಆಕೆಯ ತಂದೆ ಇಂದು ಬೆಳಿಗ್ಗೆ ಆಸ್ಪತ್ರೆಯ ಹೊರಗೆ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳಾಗಿರುವ ದೀಪು ಯಾದವ್ ಮತ್ತು ಸೌರಭ್ ಯಾದವ್ ಅವರ ತಂದೆ ಕಾನ್ಪುರದಿಂದ 100 ಕಿ.ಮೀ ದೂರದಲ್ಲಿರುವ ಕನ್ನೌಜ್ ಜಿಲ್ಲೆಯ ಸಬ್ ಇನ್ಸ್‌ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಮೂರನೇ ಆರೋಪಿ ಗೋಲು ಯಾದವ್ ಅವರನ್ನು ಬಂಧಿಸಲಾಗಿದ್ದು, ಬಾಲಕಿಯ ಕುಟುಂಬವು ಪೊಲೀಸರ ವಿರುದ್ಧ ಗಂಭೀರ ಆರೋಪಗಳನ್ನು ಹೊರಿಸಿದೆ.ಸಾಮೂಹಿಕ ಅತ್ಯಾಚಾರ (Gang Rape) ಪ್ರಕರಣ ದಾಖಲಾದಾಗಿನಿಂದಲೂ ಆರೋಪಿಗಳ ಕುಟುಂಬವು ಅವರಿಗೆ ಬೆದರಿಕೆ ಹಾಕುತ್ತಿದೆ ಮತ್ತು ಪೊಲೀಸರು ಇದಕ್ಕೆ ಸಹಕರಿಸುತ್ತಾರೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಬಿಹಾರದಲ್ಲಿ ಸಾಮೂಹಿಕ ಅತ್ಯಾಚಾರದಿಂದಾಗಿ ಆತ್ಯಹತ್ಯೆ ಮಾಡಿಕೊಂಡ ದಲಿತ ಬಾಲಕಿ

'ನನ್ನ ಮಗನನ್ನು ಕೊಲೆ ಮಾಡಲಾಗಿದೆ...ಪೊಲೀಸರು ಇದಕ್ಕೆ ಸಹಕರಿಸುತ್ತಾರೆ" ಎಂದು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ವ್ಯಕ್ತಿಯ ತಂದೆ ಇಂದು ಬೆಳಿಗ್ಗೆ ಸುದ್ದಿಗಾರರಿಗೆ ತಿಳಿಸಿದರು.ಮಂಗಳವಾರ, ಬಾಲಕಿಯ ಕುಟುಂಬದ ಮತ್ತೊಬ್ಬ ಸದಸ್ಯರು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಅವರು ಬೆದರಿಕೆಗಳನ್ನು ಎದುರಿಸುತ್ತಿದ್ದಾರೆ. "ನಾವು ದೂರು ಸಲ್ಲಿಸಿದ ಕೂಡಲೇ, ಮುಖ್ಯ ಆರೋಪಿಗಳ ಹಿರಿಯ ಸಹೋದರ ನಮಗೆ ಬೆದರಿಕೆ ಹಾಕಲು ಪ್ರಾರಂಭಿಸಿದರು.'ಹುಷಾರಾಗಿರು, ನನ್ನ ತಂದೆ ಸಬ್ ಇನ್ಸ್‌ಪೆಕ್ಟರ್; ನಾವು ಮತ್ತೆ ಅದೇ ಕ್ರೂರ ಕೃತ್ಯ ಎಸಗುತ್ತೇವೆ' ಎಂದು ಕುಟುಂಬದ ಸದಸ್ಯ ಹೇಳಿದ್ದಾರೆ ಎನ್ನಲಾಗಿದೆ.

"ವೈದ್ಯಕೀಯ ಪರೀಕ್ಷೆ ನಡೆಯುತ್ತಿರುವಾಗ, ತಂದೆ ಚಹಾ ಕುಡಿಯಲು ಹೊರ ನಡೆದರು. ಆ ಸಮಯದಲ್ಲಿ,ಅವರಿಗೆ ಅಪಘಾತ ಸಂಭವಿಸಿದೆ.ಅವರನ್ನು ಕಾನ್ಪುರ ಆಸ್ಪತ್ರೆಗೆ ಸಾಗಿಸಲಾಯಿತು, ಆದರೆ ಅಲ್ಲಿ ಅವರು ಮೃತಪಟ್ಟಿದ್ದಾರೆ.ಬಾಲಕಿಯ ತಂದೆ ನೀಡಿದ ದೂರಿನ ಆಧಾರದ ಮೇಲೆ ಕಾನ್ಪುರ ಪೊಲೀಸರು ಮಂಗಳವಾರ ಸಾಮೂಹಿಕ ಅತ್ಯಾಚಾರ ಮತ್ತು ಕ್ರಿಮಿನಲ್ ಬೆದರಿಕೆ ಪ್ರಕರಣ ದಾಖಲಿಸಿದ್ದರು.

ಇದನ್ನೂ ಓದಿ: ನಿರ್ಭಯಾ: ಅಪರಾಧಿಗಳ ಪರ ವಕೀಲರು ಪ್ರಕರಣ ಕೈಗೆತ್ತಿಕೊಳ್ಳಲು ಇದು ಕಾರಣವಂತೆ!

"ತಂದೆ ಅತ್ಯಾಚಾರ ಪ್ರಕರಣ ದಾಖಲಿಸಿದ್ದು, ನಾವು ಕೂಡಲೇ ಅದರ ಮೇಲೆ ಕ್ರಮ ಕೈಗೊಂಡಿದ್ದೇವೆ. ಬದುಕುಳಿದವರು ಚೆನ್ನಾಗಿದ್ದಾರೆ. ಪ್ರಕರಣದ ತನಿಖೆಗಾಗಿ ನಾವು ಐದು ತಂಡಗಳನ್ನು ರಚಿಸಿದ್ದೇವೆ" ಎಂದು ಕಾನ್ಪುರದ ಹಿರಿಯ ಪೊಲೀಸ್ ಅಧಿಕಾರಿ ಬ್ರಿಜೇಶ್ ಶ್ರೀವಾಸ್ತವ ಮಂಗಳವಾರ ಹೇಳಿದ್ದಾರೆ.ಘಟನೆಯ ಆಕ್ರೋಶದ ಮಧ್ಯೆ, ಎರಡೂ ಪ್ರಕರಣಗಳಲ್ಲಿ ತ್ವರಿತ ತನಿಖೆ ನಡೆಸುವಂತೆ ಯುಪಿ ಪೊಲೀಸರು ಕಾನ್ಪುರ ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ. ಅಪಘಾತದಲ್ಲಿ ಭಾಗಿಯಾದ ಟ್ರಕ್ ಅನ್ನು ವಶಪಡಿಸಿಕೊಳ್ಳಬೇಕು ಮತ್ತು ಚಾಲಕನನ್ನು ಶೀಘ್ರದಲ್ಲೇ ಬಂಧಿಸಬೇಕು ಎಂದು ಅದು ಕೇಳಿದೆ.

ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಕಾನ್ಪುರದ ಜಿಲ್ಲಾ ಮ್ಯಾಜಿಸ್ಟ್ರೇಟ್ ಡಾ.ಅಲೋಕ್ ತಿವಾರಿ ಅವರು, "ಸರ್ಕಾರ ಮತ್ತು ಆಡಳಿತವು ಬದುಕುಳಿದವರ ಕುಟುಂಬದೊಂದಿಗೆ ಇದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪರಿಹಾರವನ್ನು ಘೋಷಿಸಿದ್ದಾರೆ. ಎರಡೂ ಪ್ರಕರಣಗಳನ್ನು ಶೀಘ್ರವಾಗಿ ತನಿಖೆ ಮಾಡಲಾಗುವುದು ಮತ್ತು ಯಾರನ್ನೂ ಬಿಡಲಾಗುವುದಿಲ್ಲ. ತಪ್ಪಿತಸ್ಥರು ಕಠಿಣ ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ. ನಾವು ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಕ್ರಮವನ್ನು ಪರಿಗಣಿಸುತ್ತಿದ್ದೇವೆ "ಎಂದು ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

 

Trending News