ಆತ್ಮಹತ್ಯೆಗೆ ಶರಣಾದ ದೆಹಲಿಯ ಪ್ರತಿಷ್ಠಿತ ಸೇಂಟ್ ಸ್ಟೀಫನ್ಸ್ ಕಾಲೇಜಿನ ಅತಿಥಿ ಉಪನ್ಯಾಸಕ

ದೆಹಲಿಯ ಸೇಂಟ್ ಸ್ಟೀಫನ್ಸ್ ಕಾಲೇಜಿನ ಅತಿಥಿ ಉಪನ್ಯಾಸಕ ರೈಲ್ವೆ ಹಳಿಗಳಲ್ಲಿ ಶವವಾಗಿ ಪತ್ತೆಯಾಗಿದ್ದು, ಅವರ ತಾಯಿ ಉತ್ತರ ದೆಹಲಿಯ ಪಿತಾಂಪುರದ ಅವರ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Last Updated : Oct 20, 2019, 04:54 PM IST
ಆತ್ಮಹತ್ಯೆಗೆ ಶರಣಾದ ದೆಹಲಿಯ ಪ್ರತಿಷ್ಠಿತ ಸೇಂಟ್ ಸ್ಟೀಫನ್ಸ್ ಕಾಲೇಜಿನ ಅತಿಥಿ ಉಪನ್ಯಾಸಕ  title=
ಸಾಂದರ್ಭಿಕ ಚಿತ್ರ

ನವದೆಹಲಿ: ದೆಹಲಿಯ ಸೇಂಟ್ ಸ್ಟೀಫನ್ಸ್ ಕಾಲೇಜಿನ ಅತಿಥಿ ಉಪನ್ಯಾಸಕ ರೈಲ್ವೆ ಹಳಿಗಳಲ್ಲಿ ಶವವಾಗಿ ಪತ್ತೆಯಾಗಿದ್ದು, ಅವರ ತಾಯಿ ಉತ್ತರ ದೆಹಲಿಯ ಪಿತಾಂಪುರದ ಅವರ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

55 ವರ್ಷದ ಮಹಿಳೆಯ ಬಾಯಿಯಲ್ಲಿ ಬಟ್ಟೆಯನ್ನು ತುರುಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರ 27 ವರ್ಷದ ಮಗ ದೆಹಲಿ ವಿಶ್ವವಿದ್ಯಾಲಯದ ಈ ಪ್ರತಿಷ್ಠಿತ ಕಾಲೇಜಿನಲ್ಲಿ ತತ್ವಶಾಸ್ತ್ರದ ಅತಿಥಿ ಉಪನ್ಯಾಸಕರಾಗಿದ್ದರು. ಇಬ್ಬರೂ ಕೇರಳದ ಕೊಟ್ಟಾಯಂ ಮೂಲದವರು ಎಂದು ತಿಳಿದುಬಂದಿದೆ.

ಸರಾಯ್ ರೋಹಿಲ್ಲಾ ರೈಲ್ವೆ ನಿಲ್ದಾಣದಲ್ಲಿ ಹಳಿಗಳ ಮೇಲೆ ಬಿದ್ದು ಅತಿಥಿ ಉಪನ್ಯಾಸಕ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಬಾಕಿ ಇದ್ದು, ಅವರು ಬಂಧನದಿಂದ ರಕ್ಷಣೆಯಲ್ಲಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅತಿಥಿ ಉಪನ್ಯಾಸಕನ ಹತ್ತಿರದವರು ಹೇಳುವಂತೆ ಆತ ಮಾನಸಿಕ ಖಿನ್ನತೆಗೆ ಒಳಗಾಗಿದ್ದಾನೆ ಮತ್ತು ಐದು ದಿನಗಳ ಹಿಂದೆ ತಾಯಿಗೂ ಆತ್ಮಹತ್ಯೆ ಮಾಡಿಕೊಳ್ಳಲು ಮನವೊಲಿಸಲು ಪ್ರಯತ್ನಿಸಿದ್ದಾನೆ ಎನ್ನಲಾಗಿದೆ.

ಅತಿಥಿ ಉಪನ್ಯಾಸಕರ ಶವ ಪತ್ತೆಯಾದ ರೈಲ್ವೆ ಹಳಿಗಳಲ್ಲಿ ಕೈಚೀಲ, ಕೈಗಡಿಯಾರ ಮತ್ತು ಚಾಲನಾ ಪರವಾನಗಿ ದೊರೆತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Trending News