Uttar Pradesh: ಬರಾಬಂಕಿಯಲ್ಲಿ ಭೀಕರ ರಸ್ತೆ ಅಪಘಾತ, 18 ಜನರು ಧಾರುಣ ಸಾವು
ಉತ್ತರ ಪ್ರದೇಶದ ಬರಾಬಂಕಿ ಜಿಲ್ಲೆಯ ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಡಬಲ್ ಡೆಕ್ಕರ್ ಬಸ್ ಹಿಂದಿನಿಂದ ವೇಗವಾಗಿ ಬರುತ್ತಿದ್ದ ಟ್ರಕ್ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ 18 ಜನರು ಸಾವನ್ನಪ್ಪಿದ್ದರೆ, ಸುಮಾರು 20 ಜನರು ಗಾಯಗೊಂಡಿದ್ದಾರೆ.
ನವದೆಹಲಿ: ಉತ್ತರ ಪ್ರದೇಶದ ಬರಾಬಂಕಿ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇದರಲ್ಲಿ 18 ಜನರು ಸಾವನ್ನಪ್ಪಿದ್ದಾರೆ. ಮಾಹಿತಿಯ ಪ್ರಕಾರ, ಲಖನೌ-ಅಯೋಧ್ಯೆ ಹೆದ್ದಾರಿಯಲ್ಲಿ (Lucknow-Ayodhya Highway) ಮಂಗಳವಾರ ತಡರಾತ್ರಿ ನಿಲ್ಲಿಸಿದ್ದ ಡಬಲ್ ಡೆಕ್ಕರ್ ಬಸ್‌ಗೆ ಟ್ರಕ್ ಡಿಕ್ಕಿ ಹೊಡೆದಿದ್ದು, ಇದರಲ್ಲಿ 18 ಜನರು ಧಾರುಣ ಸಾವನ್ನಪ್ಪಿದ್ದಾರೆ.
ರಸ್ತೆಯ ಬದಿಯಲ್ಲಿ ನಿಲ್ಲಿಸಲಾಗಿದ್ದ ಬಸ್ :
ಹರಿಯಾಣದ ಪಾಲ್ವಾಲ್ ನಿಂದ ಹೊರಟು ಬಿಹಾರದ ಕಡೆಗೆ ಸಾಗುತ್ತಿದ್ದ ಬಸ್ ರಾತ್ರಿ 8 ಗಂಟೆ ಸುಮಾರಿಗೆ ಮಧ್ಯ ದಾರಿಯಲ್ಲಿ ಕೆಟ್ಟ ಪರಿಣಾಮ ಚಾಲಕ ಅದನ್ನು ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದಾನೆ. ಹಿಂದಿನಿಂದ ಬರುತ್ತಿದ್ದ ಟ್ರಕ್ ರಾತ್ರಿ 12 ಗಂಟೆ ಸುಮಾರಿಗೆ ಡಬಲ್ ಡೆಕ್ಕರ್ ಬಸ್‌ಗೆ ಡಿಕ್ಕಿ (Bus Truck Accident) ಹೊಡೆದಿದೆ. ಇದರಿಂದಾಗಿ ಅಪಘಾತ ಸಂಭವಿಸಿದೆ. ಈ ಭೀಕರ ಅಪಘಾತದಲ್ಲಿ ಹಲವು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ- ಇಂದು ಬೆಳಿಗ್ಗೆ 11 ಗಂಟೆಗೆ ರಾಜ್ಯದ ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಪ್ರಮಾಣವಚನ
ಮಾಹಿತಿಯ ಪ್ರಕಾರ, ಈ ಅಪಘಾತದಲ್ಲಿ ಸುಮಾರು 20 ಜನರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ. ಘಟನಾ ಸ್ಥಳದಲ್ಲಿ ಪೊಲೀಸ್ ಪಡೆ ಇದ್ದು, ರಸ್ತೆ ತೆರವುಗೊಳಿಸಲಾಗುತ್ತಿದೆ. ಅಪಘಾತದ ನಂತರ, ಗಾಯಗೊಂಡವರ ಸ್ಥಿತಿ ತಿಳಿಯಲು ಎಡಿಜಿ ಆಸ್ಪತ್ರೆಗೆ ಹೋಗಿ ತನಿಖೆಗೆ ಆದೇಶಿಸಿದ್ದಾರೆ. ಪೊಲೀಸರ ಪ್ರಕಾರ, ಬಸ್ ಕೆಟ್ಟಿದ್ದರಿಂದ ಚಾಲಕ ಪ್ರಯಾಣಿಕರಿಗೆ ವಿಶ್ರಾಂತಿ ತೆಗೆದುಕೊಳ್ಳುವಂತೆ ಹೇಳಿ ತಾನು ಬಸ್ ರಿಪೇರಿ ಮಾಡುತ್ತಿದ್ದರು. ಆದರೆ ನಂತರ ಇದ್ದಕ್ಕಿದ್ದಂತೆ ಹಿಂದಿನಿಂದ ಬರುತ್ತಿದ್ದ ಟ್ರಕ್ ಬಸ್‌ಗೆ ಡಿಕ್ಕಿ (Bus Accident) ಹೊಡೆದಿದ್ದು ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಇದನ್ನೂ ಓದಿ- Vodafone Idea 4 ಹೊಸ ಪೋಸ್ಟ್‌ಪೇಯ್ಡ್ ಯೋಜನೆಗಳು, 299 ರೂ.ಗಳಿಗೆ 30GB ಡೇಟಾ
ಅಪಘಾತದಲ್ಲಿ ಸುಮಾರು 20 ಜನರು ಗಾಯಗೊಂಡಿದ್ದಾರೆ:
ಲಕ್ನೋ ವಲಯ ಎಡಿಜಿ ಸತ್ಯನಾರಾಯಣ್ ಸಬತ್ ಅವರು ಈ ಬಸ್ ಅನ್ನು ರಾಮ್ ಸಾನೆಹಿ ಘಾಟ್ ಬಳಿ ನಿಲ್ಲಿಸಲಾಗಿತ್ತು ಮತ್ತು ತಡರಾತ್ರಿ ಟ್ರಕ್ ಬಸ್‌ಗೆ ಡಿಕ್ಕಿ ಹೊಡೆದಿದೆ ಎಂದು ಹೇಳಿದರು. ಆಸ್ಪತ್ರೆಯಲ್ಲಿ 19 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ ಕೂಡ ಬಸ್ ಅಡಿಯಲ್ಲಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು ಸ್ಥಳದಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯ ಮುಂದುವರೆದಿದೆ ಎಂದು ತಿಳಿದುಬಂದಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ