ನವದೆಹಲಿ: ಇಂದು ಛತ್ತೀಸ್ ಗಡ್ ದ ಕಾರ್ಮಿಕನನ್ನು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭಯೋತ್ಪಾದಕರು ಹತ್ಯೆ ಮಾಡಿದ್ದಾರೆ. ಶೋಪಿಯಾನ್‌ನಲ್ಲಿ ಟ್ರಕ್ ಚಾಲಕನನ್ನು ಗುಂಡಿಕ್ಕಿ ಕೊಂದ ಎರಡು ದಿನಗಳ ನಂತರ ಉಗ್ರರು ಮತ್ತೆ ಅಟ್ಟಹಾಸ ಮೆರೆದಿದ್ದಾರೆ. 


COMMERCIAL BREAK
SCROLL TO CONTINUE READING

ಜಮ್ಮು ಮತ್ತು ಕಾಶ್ಮೀರಕ್ಕೆ ಹೊರಗಿನಿಂದ ಬಂದಿರುವ ಕಾರ್ಮಿಕರನ್ನು ಭಯೋತ್ಪಾದಕರು ಗುರಿಯಾಗಿಸಿಕೊಂಡು ಅವರಲ್ಲಿ ಭಯ ಹುಟ್ಟಿಸಲು ಮತ್ತು ವ್ಯಾಪಾರಕ್ಕೆ ಅಡ್ಡಿಪಡಿಸಲು ಉಗ್ರರು ಈ ಕ್ರಮ ತೆಗೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಾಶ್ಮೀರ ಕಣಿವೆಯಲ್ಲಿ ಹಣ್ಣಿನ ತೋಟದಿಂದ ಟ್ರಕ್ ಓಡಿಸುತ್ತಿದ್ದ ವ್ಯಕ್ತಿಯನ್ನು ಉಗ್ರರು ಸೋಮವಾರ ಹತ್ಯೆ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.



ಆಗಸ್ಟ್ 5 ರಿಂದ ಕೇಂದ್ರ ಸರ್ಕಾರವು ಸಂವಿಧಾನದ 370 ನೇ ವಿಧಿ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ರದ್ದುಪಡಿಸುವುದು ಮತ್ತು ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದ ನಿರ್ಧಾರವನ್ನು ತೆಗೆದುಕೊಂಡಿತ್ತು, ಆಗಿನಿಂದಲೂ ಕಾಶ್ಮೀರದಲ್ಲಿ ನಿಷೇದಾಜ್ಞೆ ಮುಂದುವರೆದಿದೆ.


ಕಳೆದ ವಾರ ಕಾಶ್ಮೀರದ ಶ್ರೀನಗರದಲ್ಲಿ ಮಾರುಕಟ್ಟೆ ಪ್ರದೇಶದಲ್ಲಿ ಭಯೋತ್ಪಾದಕರು ನಡೆಸಿದ ಗ್ರೆನೇಡ್ ದಾಳಿಯ ನಂತರ ಏಳು ಜನರು ಗಾಯಗೊಂಡಿದ್ದರು. ದಕ್ಷಿಣ ಕಾಶ್ಮೀರದ ಅನಂತ್‌ನಾಗ್‌ನಲ್ಲಿ ಭಯೋತ್ಪಾದಕರು ಗ್ರೆನೇಡ್ ಎಸೆದು 14 ಮಂದಿ ಗಾಯಗೊಂಡ ಕೆಲವೇ ದಿನಗಳಲ್ಲಿ ಈ ದಾಳಿ ನಡೆದಿದೆ.