Aravalli Accident: ಗುಜರಾತ್‌ನಲ್ಲಿ ಪಾದಚಾರಿಗಳ ಮೇಲೆ ಹರಿದ ಕಾರು, 6 ಮೃತ, ಹಲವರಿಗೆ ಗಾಯ

ಗುಜರಾತ್‌ನ ಅರಾವಳಿಯಲ್ಲಿ ಭಾರೀ ರಸ್ತೆ ಅಪಘಾತ: ಗುಜರಾತ್‌ನ ಅರಾವಳಿ ಜಿಲ್ಲೆಯಲ್ಲಿ ಭಾರೀ ಅಪಘಾತ ಸಂಭವಿಸಿದ್ದು, ಇಲ್ಲಿ ವೇಗವಾಗಿ ಬರುತ್ತಿದ್ದ ಕಾರು ಪಾದಚಾರಿಗಳ ಮೇಲೆ ಹರಿದ ಪರಿಣಾಮ ಆರು ಮಂದಿ ಮೃತಪಟ್ಟಿದ್ದಾರೆ. ಇದೇ ವೇಳೆ ಆರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿ ಆಗಿದೆ. 

Written by - Yashaswini V | Last Updated : Sep 2, 2022, 09:09 AM IST
  • ಗುಜರಾತ್‌ನ ಅರಾವಳಿಯಲ್ಲಿ ರಸ್ತೆ ಅಪಘಾತ
  • ಅರಾವಳಿ ಮಾಲ್ಪುರದ ಕೃಷ್ಣಾಪುರ ಬಳಿ ಈ ಭೀಕರ ಅಪಘಾತ ಸಂಭವಿಸಿದೆ.
  • ಘಟನೆಯಲ್ಲಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದರೆ, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ
Aravalli Accident: ಗುಜರಾತ್‌ನಲ್ಲಿ ಪಾದಚಾರಿಗಳ ಮೇಲೆ ಹರಿದ ಕಾರು, 6 ಮೃತ, ಹಲವರಿಗೆ ಗಾಯ  title=
Road Accident

ಗುಜರಾತ್‌ನ ಅರಾವಳಿಯಲ್ಲಿ ರಸ್ತೆ ಅಪಘಾತ:  ಗುಜರಾತ್‌ನ ಅರಾವಳಿ ಜಿಲ್ಲೆಯಲ್ಲಿ ಭಾರೀ ರಸ್ತೆ ಅಪಘಾತ ಸಂಭವಿಸಿದೆ.  ಅರಾವಳಿ ಮಾಲ್ಪುರದ ಕೃಷ್ಣಾಪುರ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಇಲ್ಲಿ ವೇಗವಾಗಿ ಬರುತ್ತಿದ್ದ ಕಾರು ಪಾದಚಾರಿಗಳ ಮೇಲೆ ಹರಿದ ಪರಿಣಾಮ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇದೇ ವೇಳೆ 7 ಮಂದಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಅರಾವಳಿ ಅಪಘಾತದಲ್ಲಿ ಆರು ಜನರ ಧಾರುಣ ಸಾವು:
ರಸ್ತೆ ಅಪಘಾತದ ಬಗ್ಗೆ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು, ಘಟನೆಯಲ್ಲಿ  ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದರೆ, ಗಾಯಗೊಂಡವರನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರನ್ನು ಗುರುತಿಸಲಾಗುತ್ತಿದ್ದು, ಅವರ ಕುಟುಂಬಗಳನ್ನು ಸಂಪರ್ಕಿಸಲು ಪ್ರಯತ್ನಿಸಲಾಗುತ್ತಿದೆ ಎಂದು ತಿಳಿದು ಬಂದಿದೆ. 

ಇದನ್ನೂ ಓದಿ- Dawood Ibrahim : ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸುಳಿವು ನೀಡಿದ್ರೆ 25 ಲಕ್ಷ ಬಹುಮಾನ!

ಅರಾವಳಿಯಲ್ಲಿ ನಡೆದ ಈ ಭೀಕರ ಅಪಘಾತದಲ್ಲಿ ಪಾದಚಾರಿಗಳಿಗೆ ಢಿಕ್ಕಿ ಹೊಡೆದ ಕಾರಿನ ಮುಂಭಾಗ ತೀವ್ರವಾಗಿ ಜಖಂಗೊಂಡಿರುವುದು ಫೋಟೋದಲ್ಲಿ ಕಂಡು ಬಂದಿದೆ. ಕಾರಿನ ಸ್ಥಿತಿ ನೋಡಿದರೆ ಡಿಕ್ಕಿಯ ರಭಸ ಎಷ್ಟು ಭೀಕರವಾಗಿತ್ತು ಎಂಬುದನ್ನು ಊಹಿಸಬಹುದಾಗಿದೆ. 

ಇದನ್ನೂ ಓದಿ- Weather Update: ದೇಶದ ಈ ಭಾಗಗಳಲ್ಲಿ ಮುಂದಿನ 4 ದಿನ ಭಾರೀ ಮಳೆ ಎಚ್ಚರಿಕೆ ನೀಡಿದ ಐಎಂಡಿ

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿದ್ದು, ತನಿಖೆ ಮುಂದುವರೆಸಿದ್ದಾರೆ. ಈ ಅಪಘಾತದಲ್ಲಿ ಮೃತಪಟ್ಟ ಮೃತದೇಹಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲು ಸಿದ್ಧತೆ ನಡೆಸಲಾಗಿದೆ. ಮೃತರ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗುವುದು. ಬಳಿಕ ಅವರ ಮೃತದೇಹವನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News