Shankar Mishra Arrest: ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಆರೋಪ: ಕಿರಾತಕ ಬೆಂಗಳೂರಿನಲ್ಲಿ ಅರೆಸ್ಟ್

Shankar Mishra Arrest: ಇನ್ನು ಆರೋಪಿ ಶಂಕರ್ ಮಿಶ್ರಾನನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತಿದ್ದು, ಆತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಹೇಳಲಾಗುತ್ತದೆ. ಅಷ್ಟೇ ಅಲ್ಲದೆ, ಪೊಲೀಸರು ವಿಚಾರಣೆಗಾಗಿ ಕಸ್ಟಡಿಗೆ ವಹಿಸುವಂತೆ ಮನವಿ ಮಾಡಲಿದ್ದಾರೆ

Written by - Bhavishya Shetty | Last Updated : Jan 7, 2023, 11:22 AM IST
    • ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿ
    • ಆರೋಪಿ ಶಂಕರ್ ಮಿಶ್ರಾನನ್ನು ಬೆಂಗಳೂರಿನಲ್ಲಿ ಬಂಧಿಸಿದ ದೆಹಲಿ ಪೊಲೀಸರು
    • ವಿಮಾನದಲ್ಲಿ ವಯಸ್ಸಾದ ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸಿದ್ದ ಶಂಕರ್
Shankar Mishra Arrest: ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಆರೋಪ: ಕಿರಾತಕ ಬೆಂಗಳೂರಿನಲ್ಲಿ ಅರೆಸ್ಟ್ title=
Shankar Mishra

Shankar Mishra Arrest: ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪಿ ಶಂಕರ್ ಮಿಶ್ರಾನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಶಂಕರ್ ಮಿಶ್ರಾನನ್ನು ಬೆಂಗಳೂರಿನಲ್ಲಿ ಬಂಧಿಸಿದ್ದು, ಸದ್ಯ ಆತನನ್ನು ದೆಹಲಿಗೆ ಕರೆತಂದಿದ್ದಾರೆ.

ಇನ್ನು ಆರೋಪಿ ಶಂಕರ್ ಮಿಶ್ರಾನನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತಿದ್ದು, ಆತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಹೇಳಲಾಗುತ್ತದೆ. ಅಷ್ಟೇ ಅಲ್ಲದೆ, ಪೊಲೀಸರು ವಿಚಾರಣೆಗಾಗಿ ಕಸ್ಟಡಿಗೆ ವಹಿಸುವಂತೆ ಮನವಿ ಮಾಡಲಿದ್ದಾರೆ.

ಇದನ್ನೂ ಓದಿ: ಪ್ರಯಾಣಿಕರನ್ನು ನಿಭಾಯಿಸುವ ಕುರಿತು ಹೊಸ ನಿಯಮ ಜಾರಿಗೆ ತಂದ ಡಿಜಿಸಿಎ

ಇತ್ತೀಚೆಗೆಯಷ್ಟೇ ಆರೋಪಿ ಶಂಕರ್ ಮಿಶ್ರಾ, ವಿಮಾನದಲ್ಲಿ ವಯಸ್ಸಾದ ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸಿದ್ದ. ಈ ಘಟನೆ ಮುನ್ನೆಲೆಗೆ ಬರುತ್ತಿದ್ದಂತೆ ಆರೋಪಿಯನ್ನು ಅವನ ಕೆಲಸದಿಂದ ವಜಾಗೊಳಿಸಲಾಗಿದೆ. ಆದರೆ ಆರೋಪಿಯ ತಂದೆ, “ಮಗನನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಆರೋಪಿ ಶಂಕರ್ ಮಿಶ್ರಾ ನಿರೀಕ್ಷಣಾ ಜಾಮೀನು ಪಡೆಯಲು ಮುಂದಾಗಿದ್ದಾರೆ. ಇನ್ನು ಮಿಶ್ರಾಗಾಗಿ ಪೊಲೀಸರು ನಿರಂತರವಾಗಿ ಶೋಧ ಕಾರ್ಯದಲ್ಲಿ ನಡೆಸಿದ್ದು, ಇದೀಗ ಕೊನೆಗೂ ಆತನನ್ನು ಬಂಧಿಸಿದ್ದಾರೆ.

ನವೆಂಬರ್ 26 ರಂದು ನ್ಯೂಯಾರ್ಕ್‌ನಿಂದ ದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ನಾಚಿಕೆಗೇಡಿನ ಘಟನೆಯೊಂದು ನಡೆದಿದೆ. ಏರ್ ಇಂಡಿಯಾ ವಿಮಾನದ ಬ್ಯುಸಿನೆಸ್ ಕ್ಲಾಸ್ ನಲ್ಲಿ ಪ್ರಯಾಣಿಸುತ್ತಿದ್ದ ಶಂಕರ್ ಮಿಶ್ರಾ, ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ ಘಟನೆ ನಡೆದಿತ್ತು. ಶಂಕರ್ ಮಿಶ್ರಾ ಮಲ್ಟಿ ನ್ಯಾಷನಲ್  ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ.

ಶಂಕರ್ ಮಿಶ್ರಾ ಮಾಡಿರುವ ಅಮಾನವೀಯ ಘಟನೆಯಿಂದ ಮಹಿಳೆಯ ಬಟ್ಟೆ, ಬೂಟುಗಳು ಮತ್ತು ವಸ್ತುಗಳು ಗಲೀಜಾಗಿದ್ದವು. ತಕ್ಷಣವೇ ಸಂತ್ರಸ್ತ ಮಹಿಳೆಗೆ ವಿಮಾನದ ಸಿಬ್ಬಂದಿಯು ಬಟ್ಟೆಗಳನ್ನು ನೀಡಿದರು.

ಇದನ್ನೂ ಓದಿ: Government schemes for Girls: ಈ ಯೋಜನೆಯಡಿ ಅರ್ಜಿ ಸಲ್ಲಿಸಿದರೆ 12ನೇ ತರಗತಿ ವಿದ್ಯಾರ್ಥಿನಿಯರಿಗೆ ಸಿಗಲಿದೆ 6 ಸಾವಿರ ರೂ

ಸಂತ್ರಸ್ತ ಮಹಿಳೆ ಶಂಕರ್ ಮಿಶ್ರಾ ವರ್ತನೆಯಿಂದ ತೀವ್ರ ಕೋಪಗೊಂಡಿದ್ದು, ಆತನನ್ನು ಬಂಧಿಸಬೇಕು ಎಂದು ಒತ್ತಾಯಿಸಿದ್ದರು. ಆದರೆ ವಿಮಾನಯಾನ ಸಿಬ್ಬಂದಿ ಕ್ಷಮೆಯಾಚಿಸುವ ಜೊತೆಗೆ ವಿಷಯವನ್ನು ಅಲ್ಲಿಯೇ ಬಿಡುವಂತೆ ಮನವಿ ಮಾಡಿದ್ದರು. ಪ್ರಯಾಣಿಕರ ಗೌರವ ಮತ್ತು ಸುರಕ್ಷತೆಯನ್ನು ನೋಡಿಕೊಳ್ಳುವಲ್ಲಿ ಏರ್ ಇಂಡಿಯಾದ ಸಿಬ್ಬಂದಿ ವಿಫಲರಾಗಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ನಂತರ ನವೆಂಬರ್ 27 ರಂದು ಮಹಿಳೆ ಟಾಟಾ ಗ್ರೂಪ್ ಅಧ್ಯಕ್ಷ ಎನ್. ಚಂದ್ರಶೇಖರನ್ ಅವರಿಗೆ ದೂರು ನೀಡಿದ್ದಾರೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News