NITI Aayog Meeting: ಇಂದು ರಾಜಧಾನಿ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನೀತಿ ಆಯೋಗದ ಸಭೆ ನಡೆಯಲಿದೆ. ಈ ಸಭೆಯ ಅಧ್ಯಕ್ಷತೆಯನ್ನು ಪ್ರಧಾನಿ ನರೇಂದ್ರ ಮೋದಿ ವಹಿಸಲಿದ್ದಾರೆ. ಹಲವು ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗವರ್ನರ್ ಸೇರಿದಂತೆ ಹಲವು ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಆದರೆ ನೀತಿ ಆಯೋಗದ ಸಭೆಗೂ ಮುನ್ನವೇ ಈ ಬಗ್ಗೆ ರಾಜಕೀಯ ತೀವ್ರಗೊಂಡಿದೆ. ವಾಸ್ತವವಾಗಿ, ಕೆಲವು ಮುಖ್ಯಮಂತ್ರಿಗಳು ವಿವಿಧ ಕಾರಣಗಳನ್ನು ನೀಡಿ ಸಭೆಗೆ ಹಾಜರಾಗದೆ ಇರಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಇದರಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಹೆಸರು ಮುಂಚೂಣಿಯಲ್ಲಿದೆ. 


COMMERCIAL BREAK
SCROLL TO CONTINUE READING

ಇದನ್ನೂ ಓದಿ: Mysore Dasara: ಕಾಡಿನಿಂದ ನಾಡಿಗೆ ಆಗಮಿಸಿದ ಗಜಪಡೆ: ಮೈಸೂರು ದಸರಾ ಆನೆಗಳಿಗೆ ಪೂಜೆ ಸಲ್ಲಿಕೆ


ನೀತಿ ಆಯೋಗದ ಸಭೆಯಲ್ಲಿ ದೇಶದ ಭವಿಷ್ಯಕ್ಕಾಗಿ ಯೋಜನೆಗಳನ್ನು ಸಿದ್ಧಪಡಿಸಲಾಗಿದೆ. ಆದರೆ ದೇಶದ ಭವಿಷ್ಯಕ್ಕಾಗಿ ಸಿದ್ಧಪಡಿಸಲಾದ ನೀತಿಗಳು ರಾಜಕೀಯ ಕಾರಿಡಾರ್‌ಗಳ ಮೂಲಕವೂ ಹಾದುಹೋಗಬೇಕು. 2019ರ ನಂತರ ಮೊದಲ ಬಾರಿಗೆ ನಡೆಯುತ್ತಿರುವ ಸಭೆಯೂ ರಾಜಕೀಯ ಸುಳಿಗೆ ಸಿಲುಕಿದೆ. ಏಕೆಂದರೆ ಈ ಸಭೆಯಲ್ಲೂ ಕೇಂದ್ರ ಮತ್ತು ರಾಜ್ಯಗಳ ನಡುವಿನ ಜಟಾಪಟಿ  ಮುನ್ನಲೆಗೆ ಬಂದಿದೆ. ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಸಭೆಗೆ ಹಾಜರಾಗಲು ನಿರಾಕರಿಸಿದ್ದಾರೆ ಎಂಬ ಮಾಹಿತಿ ಸದ್ಯ ಲಭ್ಯವಾಗಿದೆ. ಪ್ರಧಾನಿಗೆ ಪತ್ರ ಬರೆದಿರುವ ಅವರು, "ರಾಜ್ಯಗಳು ಅಭಿವೃದ್ಧಿಯಾದಾಗ ಮಾತ್ರ ಭಾರತ ಬಲಿಷ್ಠ ರಾಷ್ಟ್ರವಾಗಿ ಅಭಿವೃದ್ಧಿ ಹೊಂದಲು ಸಾಧ್ಯ. ಬಲಿಷ್ಠ ಮತ್ತು ಆರ್ಥಿಕವಾಗಿ ಚೈತನ್ಯವಿರುವ ರಾಜ್ಯಗಳು ಮಾತ್ರ ಭಾರತವನ್ನು ಬಲಿಷ್ಠ ರಾಷ್ಟ್ರವನ್ನಾಗಿ ಮಾಡಬಹುದು. ಭಾರತವನ್ನು ಬಲಿಷ್ಠ ಮತ್ತು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ನಮ್ಮ ಸಾಮೂಹಿಕ ಪ್ರಯತ್ನದಲ್ಲಿ ರಾಜ್ಯಗಳ ವಿರುದ್ಧ ತಾರತಮ್ಯ ಮತ್ತು ಸಮಾನ ಪಾಲುದಾರರಾಗಿ ಪರಿಗಣಿಸದ ಕೇಂದ್ರ ಸರ್ಕಾರದ ಪ್ರಸ್ತುತ ನಿಲುವಿಗೆ ವಿರೋಧ ಸೂಚಿಸಿದ ನಾನು ಈ ಸಭೆಯಿಂದ ದೂರ ಉಳಿಯುತ್ತೇನೆ" ಎಂದು ಹೇಳಿದ್ದಾರೆ. 


ಬಿಜೆಪಿ ಸೆಡ್ಡು: 
ಕಳೆದ ತಿಂಗಳು ಹೈದರಾಬಾದ್‌ನಲ್ಲಿ ಬಿಜೆಪಿ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಸಿದ್ದು ಗಮನಾರ್ಹ. ಈ ಸಭೆಯಲ್ಲೂ ಬಿಜೆಪಿ ಮತ್ತು ಟಿಆರ್‌ಎಸ್ ನಡುವಿನ ಜಟಾಪಟಿ ಬಯಲಿಗೆ ಬಂದಿದೆ. ಇಷ್ಟು ಮಾತ್ರವಲ್ಲದೆ ಇತ್ತೀಚೆಗಷ್ಟೇ ಕೆಸಿಆರ್ ರಾಷ್ಟ್ರಪತಿ ಅಭ್ಯರ್ಥಿ ಸೇರಿದಂತೆ ಹಲವು ಕಡೆ ಕೇಂದ್ರದ ವಿರುದ್ಧ ಹರಿಹಾಯ್ದಿದ್ದರು. ಆದರೆ, ಸಭೆಗೆ ಹಾಜರಾಗದ ಕೆಸಿಆರ್ ನಿರ್ಧಾರಕ್ಕೆ ಬಿಜೆಪಿ ತಿರುಗೇಟು ನೀಡಿದೆ. ಕೆಸಿಆರ್ ಅವರು ತಮ್ಮನ್ನು ನಿಜಾಮ್ ಎಂದು ಪರಿಗಣಿಸುತ್ತಿದ್ದಾರೆ. ಆದ್ದರಿಂದಲೇ ರಾಜ್ಯ ಮತ್ತು ದೇಶದ ಅಭಿವೃದ್ಧಿಯ ಚರ್ಚೆಗೂ ತಮಗೂ ಸಂಬಂಧವಿಲ್ಲ ಎಂಬಂತೆ ವರ್ತಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ. 


ಇದನ್ನೂ ಓದಿ: Numerology: ಈ ದಿನಾಂಕದಂದು ಜನಿಸಿದವರಿಗೆ ಅದೃಷ್ಟದ ಜೊತೆಗೆ ಧನಲಾಭ


ಸಿಎಂ ನಿತೀಶ್ ಕುಮಾರ್ ಕೂಡ ಭಾಗವಹಿಸುತ್ತಿಲ್ಲ: 
ಈ ಸಭೆಗೆ ಹಾಜರಾಗದ ಮುಖ್ಯಮಂತ್ರಿಗಳ ಪೈಕಿ ಕೆಸಿಆರ್ ಒಬ್ಬರೇ ಅಲ್ಲ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಕೂಡ ಈ ಸಭೆಯಿಂದ ದೂರ ಉಳಿದಿದ್ದಾರೆ. ಕಳೆದ ವಾರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷರು ಪಾಟ್ನಾದಲ್ಲಿದ್ದಾಗ ಪಾಟ್ನಾದಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲೂ ಬಿಜೆಪಿ ಮತ್ತು ಜೆಡಿಯು ನಡುವಿನ ಅಂತರ ಕಂಡುಬಂದಿದೆ. ಇನ್ನು ನಿತೀಶ್ ಕಾರ್ಯಕಾರಿಣಿ ಸಭೆಗೂ ಹೋಗಲಿಲ್ಲ ಜೊತೆಗೆ ಬಿಜೆಪಿಯ ಹಿರಿಯ ನಾಯಕರು ಅವರನ್ನು ಭೇಟಿ ಮಾಡಲಿಲ್ಲ. ಆದರೆ, ಕೊರೊನಾ ಸೋಂಕು ತಗುಲಿರುವ ಕಾರಣ ಸಿಎಂ ನಿತೀಶ್‌ ಕುಮಾರ್‌ ಈ ಸಭೆಗೆ ಹಾಜರಾಗುತ್ತಿಲ್ಲ ಎಂದು ಹೇಳಲಾಗುತ್ತಿದೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.