ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ(ಎಲ್ಒಸಿ) ಭಾರೀ ಹಿಮಪಾತ ಸಂಭವಿಸಿದ ಪರಿಣಾಮ ಓರ್ವ ಯೋಧ ಮೃತಪಟ್ಟ ಘಟನೆ ಗುರುವಾರ ನಡೆದಿದೆ. 


COMMERCIAL BREAK
SCROLL TO CONTINUE READING

ಸಾವ್ಜೈನ್ ಪ್ರದೇಶದಲ್ಲಿರುವ ಸೇನಾ ಪೋಸ್ಟ್ ಬಳಿ ಗುರುವಾರ ಬೆಳಗಿನ ಜಾವ 4 ಗಂಟೆ ಸಮಯದಲ್ಲಿ ಭಾರಿ ಹಿಮಪಾತ ಸಂಭವಿಸಿದ್ದು, ಹಿಮದಡಿ ಸಿಲುಕಿದ್ದ ಇಬ್ಬರು ಯೋಧರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಓರ್ವ ಯೋಧ ಸಾವನ್ನಪ್ಪಿದ್ದಾರೆ. 


ಮೃತ ಯೋಧನನ್ನು ಲಾನ್ಸ್ ನಾಯಕ್ ಸಪನ್ ಮೆಹ್ರಾ ಎಂದು ಗುರುತಿಸಲಾಗಿದ್ದು, ಮತ್ತೊಬ್ಬ ಯೋಧನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.