ನವದೆಹಲಿ: ಬಿಜೆಪಿಯ ಮಾಜಿ ಶಾಸಕಿ ಮಾಯಾ ಕೊಡ್ನಾನಿ ಮತ್ತು ಬಜರಂಗದಳದ ಮಾಜಿ ನಾಯಕ ಬಾಬು ಬಜರಂಗಿ ಸೇರಿದಂತೆ 2002ರಲ್ಲಿ ನಡೆದ ಕೋಮುಗಲಭೆಯಲ್ಲಿ 11 ಮಂದಿ ಮುಸ್ಲಿಂ ಸಮುದಾಯದವರ ಮೇಲೆ ನಡೆದ ನರೋಡಾ ಗಾಮ್ ಹತ್ಯಾಕಾಂಡದ ಎಲ್ಲಾ ಆರೋಪಿಗಳನ್ನು ಗುಜರಾತ್‌ನ ಅಹಮದಾಬಾದ್‌ನ ವಿಶೇಷ ನ್ಯಾಯಾಲಯ ಗುರುವಾರ ಖುಲಾಸೆಗೊಳಿಸಿದೆ. 


COMMERCIAL BREAK
SCROLL TO CONTINUE READING

ಇದನ್ನೂ ಓದಿ: ರಾಹುಲ್‌ ಗಾಂಧಿ ಶಿಕ್ಷೆ ತಡೆ ಕೋರಿಕೆಯನ್ನು ತಿರಸ್ಕರಿಸಿದ ಸೂರತ್‌ ಕೋರ್ಟ್..!‌


ಪ್ರಕರಣದಲ್ಲಿ ಒಟ್ಟು 86 ಆರೋಪಿಗಳಿದ್ದು, ಅವರಲ್ಲಿ 18 ಮಂದಿ ಮಧ್ಯಂತರದಲ್ಲಿ ಸಾವನ್ನಪ್ಪಿದ್ದಾರೆ. ಆರೋಪಿಗಳು ಸೆಕ್ಷನ್ 302 (ಕೊಲೆ), 307 (ಕೊಲೆಗೆ ಯತ್ನ), 143 (ಕಾನೂನುಬಾಹಿರ ಸಭೆ), 147 (ಗಲಭೆ), 148 (ಮಾರಕ ಆಯುಧಗಳಿಂದ ಶಸ್ತ್ರಸಜ್ಜಿತವಾದ ಗಲಭೆ), 120 (ಬಿ) (ಕ್ರಿಮಿನಲ್ ಪಿತೂರಿ), ಮತ್ತು 153 ( ಗಲಭೆಗಳಿಗೆ ಪ್ರಚೋದನೆ), ಅವರ ಮೇಲೆ ದಾಖಲಿಸಲಾಗಿತ್ತು, ಮರಣ ಶಿಕ್ಷೆಯು ಈ ಅಪರಾಧಗಳಿಗೆ ಇರುವ ಗರಿಷ್ಟ ಶಿಕ್ಷೆಯಾಗಿದೆ.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.