ಕಳೆದ ಮೂರು ವರ್ಷದಲ್ಲಿ ಕಾಶ್ಮೀರದಲ್ಲಿ 733 ಉಗ್ರರ ಹತ್ಯೆ -ಗೃಹ ಸಚಿವಾಲಯ

ಕಳೆದ ಮೂರು ವರ್ಷಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಒಟ್ಟು 733 ಭಯೋತ್ಪಾದಕರು ಹತ್ಯೆಯಾಗಿದ್ದಾರೆ ಎಂದು ಗೃಹ ಸಚಿವಾಲಯ ಮಂಗಳವಾರ ತಿಳಿಸಿದೆ. 

Last Updated : Jun 25, 2019, 05:12 PM IST
ಕಳೆದ ಮೂರು ವರ್ಷದಲ್ಲಿ ಕಾಶ್ಮೀರದಲ್ಲಿ 733 ಉಗ್ರರ ಹತ್ಯೆ -ಗೃಹ ಸಚಿವಾಲಯ title=
ಸಾಂದರ್ಭಿಕ ಚಿತ್ರ

ನವದೆಹಲಿ: ಕಳೆದ ಮೂರು ವರ್ಷಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಒಟ್ಟು 733 ಭಯೋತ್ಪಾದಕರು ಹತ್ಯೆಯಾಗಿದ್ದಾರೆ ಎಂದು ಗೃಹ ಸಚಿವಾಲಯ ಮಂಗಳವಾರ ತಿಳಿಸಿದೆ. 

ಗೃಹ ವ್ಯವಹಾರಗಳ ರಾಜ್ಯ ಸಚಿವ ಜಿ ಕಿಶನ್ ರೆಡ್ಡಿ ಮಾತನಾಡಿ 'ಜೂನ್ 16 ರವರೆಗೆ 2019 ರಲ್ಲಿ 113 ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. 2018 ರಲ್ಲಿ  257 , 2017 ರಲ್ಲಿ 213  ಮತ್ತು 2016 ರಲ್ಲಿ 150 ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ.

ಭಯೋತ್ಪಾದನೆಯ ಬಗ್ಗೆ ಶೂನ್ಯ ಸಹಿಷ್ಣುತೆಯ ನೀತಿಯನ್ನು ಸರ್ಕಾರ ಅಳವಡಿಸಿಕೊಂಡಿದೆ. ಭಯೋತ್ಪಾದನೆಯನ್ನು ಎದುರಿಸಲು ಭದ್ರತಾ ಪಡೆಗಳು ಪರಿಣಾಮಕಾರಿ ಮತ್ತು ನಿರಂತರ ಕ್ರಮಗಳನ್ನು ತೆಗೆದುಕೊಳ್ಳುತ್ತಿವೆ. ಇದರಿಂದಾಗಿ ಸಾವು ನೋವುಗಳು ಸೇರಿದಂತೆ ಇಂತಹ ಘಟನೆಗಳ ಸಂಖ್ಯೆಯಲ್ಲಿ ಗಮನಾರ್ಹವಾದ ಬದಲಾವಣೆಯಾಗಿದೆ ಎಂದು ಗೃಹ ವ್ಯವಹಾರಗಳ ರಾಜ್ಯ ಸಚಿವ ಜಿ ಕಿಶನ್ ರೆಡ್ಡಿ ಹೇಳಿದರು.

ಭಯೋತ್ಪಾದಕರ ಚಟುವಟಿಕೆಗಳನ್ನು ಎದುರಿಸಲು  ಗ್ರಿಡ್ ಕಾರ್ಯಾಚರಣೆಯನ್ನು ಬಲಪಡಿಸುವುದು, ಭದ್ರತಾ ಸಂಸ್ಥೆಗಳ ನಡುವೆ ಸಮನ್ವಯತೆ  ಹೆಚ್ಚಿಸುವುದು, ಭಯೋತ್ಪಾದಕ ಕೃತ್ಯಗಳಿಗೆ ಪರಿಣಾಮಕಾರಿಯಾದ ಪ್ರತೀಕಾರ, ಹೀಗೆ ಹಲವು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಉದ್ಯೋಗಾವಕಾಶಗಳನ್ನು ಒದಗಿಸುವುದು ಸೇರಿದಂತೆ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ಮತ್ತು ಯುವ ವಿನಿಮಯ ಕಾರ್ಯಕ್ರಮಗಳ ಮೂಲಕ ಯುವಕರನ್ನು ಮುಖ್ಯವಾಹಿನಿಗೆ ತರಲು ಸರ್ಕಾರ  ಕ್ರಮಗಳನ್ನು ಜಾರಿಗೆ ತಂದಿದೆ.

ಇದಲ್ಲದೆ, 2018 ರಲ್ಲಿ ರಾಜ್ಯದಲ್ಲಿ ಒಟ್ಟು 614 ಘಟನೆಗಳು ನಡೆದಿದ್ದು, ಇದರಲ್ಲಿ 39 ನಾಗರಿಕರು ಸಾವನ್ನಪ್ಪಿದ್ದಾರೆ; 2017 ರಲ್ಲಿ 342 ಘಟನೆಗಳು ನಡೆದಿದ್ದು, ಇದರಲ್ಲಿ 40 ನಾಗರಿಕರು ಸಾವನ್ನಪ್ಪಿದ್ದಾರೆ ಮತ್ತು 2016 ರಲ್ಲಿ 322 ಘಟನೆಗಳು ನಡೆದಿದ್ದು, ಇದರಲ್ಲಿ 15 ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಗೃಹ ಸಚಿವಾಲಯ ತನ್ನ ವರದಿಯಲ್ಲಿ ತಿಳಿಸಿದೆ.

Trending News