Traffic Constable Saves Life: ತೆಲಂಗಾಣದ ಬಂಜಾರ ಹಿಲ್ಸ್ ನಲ್ಲಿ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಕ್ಕೆ ಒಳಗಾಗಿದ್ದ ವ್ಯಕ್ತಿಯನ್ನು ಕರ್ತವ್ಯದಲ್ಲಿದ್ದ ಟ್ರಾಫಿಕ್ ಕಾನ್‌ಸ್ಟೆಬಲ್ ರಕ್ಷಿಸಿದ್ದಾರೆ. ವಿದ್ಯುತ್ ಸ್ಪರ್ಶಗೊಂಡು ಕೆಳಗೆ ಬಿದ್ದು ಪ್ರಜ್ಞಾಹೀನರಾಗಿದ್ದ ವ್ಯಕ್ತಿಯನ್ನು ಗಮನಿಸಿದ ಟ್ರಾಫಿಕ್ ಕಾನ್‌ಸ್ಟೆಬಲ್, ತರಾತುರಿಯಲ್ಲಿ ಆ ವ್ಯಕ್ತಿಯ ಬಳಿ ತೆರಳಿ ಅವನ ಎದೆಯ ಮೇಲೆ ಎರಡೂ ಕೈಗಳನ್ನು ಇಟ್ಟು  ಉಸಿರಾಟದ ಪ್ರಕ್ರಿಯೆಯು ಸಹಜ ಸ್ಥಿತಿಗೆ ಬರುವವರೆಗೆ ಒತ್ತಿದ್ದಾರೆ. ಇದೇ ವೇಳೆ ಅಲ್ಲಿದ್ದ ಪ್ರತ್ಯಕ್ಷದರ್ಶಿಗಳು ಹಾಗೂ ಸಂಚಾರ ಸಿಬ್ಬಂದಿ 108 ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Shraddha Murder Case: ಅಫ್ತಾಬ್ ಮನೆ ಕಾರ್ಯಾಚರಣೆ: 8 ಮೂಳೆಗಳ ಜೊತೆ ರಕ್ತದ ಮಾದರಿ ಪೊಲೀಸ್ ವಶಕ್ಕೆ


ಟ್ರಾಫಿಕ್ ಪೇದೆಯ ಪ್ರಯತ್ನದಿಂದ ವಿದ್ಯುತ್ ಶಾಕ್ ತಗುಲಿದ್ದ ವ್ಯಕ್ತಿಗೆ ಪ್ರಜ್ಞೆ ಬಂದಿದೆ. ತಕ್ಷಣವೇ ಅವರನ್ನು 108 ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮಂಗಳವಾರ ಸಂಜೆ 6 ಗಂಟೆ ಸುಮಾರಿಗೆ ಬಂಜಾರ ಹಿಲ್ಸ್ ರಸ್ತೆ ನಂ.1 ಒಳವರ್ತುಲ ರಸ್ತೆಯಲ್ಲಿ ಈ ಘಟನೆ ನಡೆದಿದೆ. ವಿದ್ಯುತ್ ಆಘಾತದಿಂದ ವ್ಯಕ್ತಿಯೊಬ್ಬನ ಪ್ರಾಣ ಉಳಿಸಿದ ಟ್ರಾಫಿಕ್ ಕಾನ್ ಸ್ಟೇಬಲ್ ಬೋಳು ಅವರನ್ನು ಮೇಲಧಿಕಾರಿಗಳು ಅಭಿನಂದಿಸಿದ್ದಾರೆ.


ಇದನ್ನೂ ಓದಿ: Video Viral : ಕಾರ್ ಸ್ಟಂಟ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ವ್ಯಕ್ತಿ!


ಅಲ್ಲಿದ್ದ ಪ್ರತ್ಯಕ್ಷದರ್ಶಿಗಳು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ದೃಶ್ಯವನ್ನು ಸೆರೆ ಹಿಡಿದಿದ್ದು, ಆ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಆ ವಿಡಿಯೋಗಳನ್ನು ನೋಡಿದ ನೆಟಿಜನ್‌ಗಳು ಟ್ರಾಫಿಕ್ ಕಾನ್‌ಸ್ಟೆಬಲ್‌ನ ಒಳ್ಳೆಯತನವನ್ನು ಮೆಚ್ಚಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.