Medical Miracle: ಏಳು ತಿಂಗಳು ಕೋಮಾದಲ್ಲಿದ್ದೇ ಮಗುವಿಗೆ ಜನ್ಮ ನೀಡಿದ ‘ಮಹಾತಾಯಿ’

ಮಾ. 31ರಂದು ಬುಲಂದ್‌ಶಹರ್‌ ಮೂಲದ ಗರ್ಭಿಣಿ ಮಹಿಳೆ ತನ್ನ ಗಂಡನ ಜೊತೆ ಹೆಲ್ಮೆಟ್‌ ಧರಿಸದೇ ದ್ವಿಚಕ್ರ  ವಾಹನದಲ್ಲಿ ಪ್ರಯಾಣಿಸುತ್ತಿದ್ದಳು. ಈ ಸಂದರ್ಭದಲ್ಲಿ ರಸ್ತೆ ಅಪಘಾತಕ್ಕೀಡಾಗಿದ್ದಾರೆ. ತಲೆಗೆ ಗಂಭೀರವಾಗಿ ಏಟು ಬಿದ್ದ ಕಾರಣ ಕೋಮಾ ಸ್ಥಿತಿಗೆ ತಲುಪಿದ್ದಳು. ಬಳಿಕ ಆಕೆಯನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು.

Written by - Bhavishya Shetty | Last Updated : Oct 29, 2022, 11:56 AM IST
    • ಸುಮಾರು 7 ತಿಂಗಳಿನಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಹಿಳೆ
    • ಆದರೆ ಈಗ ಈಕೆ ಆರೋಗ್ಯವಂತ ಹೆಣ್ಣುಮಗುವಿಗೆ ಜನ್ಮ ನೀಡಿದ್ದಾಳೆ
    • ಈ ಅಚ್ಚರಿಯ ಘಟನೆ ನಡೆದಿರುವುದು ನವದೆಹಲಿಯಲ್ಲಿ
Medical Miracle: ಏಳು ತಿಂಗಳು ಕೋಮಾದಲ್ಲಿದ್ದೇ ಮಗುವಿಗೆ ಜನ್ಮ ನೀಡಿದ ‘ಮಹಾತಾಯಿ’ title=
Medical Miracle

ನವದೆಹಲಿ: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಗರ್ಭಿಣಿ ಮಗುವಿಗೆ ಜನ್ಮ ನೀಡಿದ ಅಚ್ಚರಿಯ ಘಟನೆ ನಡೆದಿದೆ. ರಸ್ತೆ ಅಪಘಾತದಲ್ಲಿ ಗಾಯಗೊಂಡ ಈಕೆ ಸುಮಾರು 7 ತಿಂಗಳಿನಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಳು. ಆದರೆ ಈಗ ಈಕೆ ಆರೋಗ್ಯವಂತ ಹೆಣ್ಣುಮಗುವಿಗೆ ಜನ್ಮ ನೀಡಿದ್ದಾಳೆ. ಈ ಅಚ್ಚರಿಯ ಘಟನೆ ನಡೆದಿರುವುದು ನವದೆಹಲಿಯಲ್ಲಿ.

ಇದನ್ನೂ ಓದಿ: ಎಲಾನ್ ಮಸ್ಕ್ ತೆಕ್ಕೆಗೆ ಟ್ವಿಟರ್: CEO ಪರಾಗ್ ಅಗ್ರವಾಲ್ ಗೆ ಸಿಗಲಿದೆ 345 ಕೋಟಿ!

ಮಾ. 31ರಂದು ಬುಲಂದ್‌ಶಹರ್‌ ಮೂಲದ ಗರ್ಭಿಣಿ ಮಹಿಳೆ ತನ್ನ ಗಂಡನ ಜೊತೆ ಹೆಲ್ಮೆಟ್‌ ಧರಿಸದೇ ದ್ವಿಚಕ್ರ  ವಾಹನದಲ್ಲಿ ಪ್ರಯಾಣಿಸುತ್ತಿದ್ದಳು. ಈ ಸಂದರ್ಭದಲ್ಲಿ ರಸ್ತೆ ಅಪಘಾತಕ್ಕೀಡಾಗಿದ್ದಾರೆ. ತಲೆಗೆ ಗಂಭೀರವಾಗಿ ಏಟು ಬಿದ್ದ ಕಾರಣ ಕೋಮಾ ಸ್ಥಿತಿಗೆ ತಲುಪಿದ್ದಳು. ಬಳಿಕ ಆಕೆಯನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು.

ಇದೀಗ ಏಳು ತಿಂಗಳ ಬಳಿಕ ಆಶ್ಚರ್ಯವೆಂಬಂತೆ ಮಹಿಳೆ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಅಪಘಾತವಾಗಿದ್ದರೂ ಸಹ ಗರ್ಭದಲ್ಲಿದ್ದ ಮಗುವಿಗೆ ಯಾವುದೇ ಹಾನಿಯಾಗಿರಲಿಲ್ಲ. ಹೀಗಾಗಿ ಗರ್ಭಪಾತ ಮಾಡಿಸುವ ಬದಲು ಆಕೆಯ ಮನೆಯವರು ಮಗುವನ್ನು ಉಳಿಸಿಕೊಳ್ಳುವ ನಿರ್ಧಾರವನ್ನು ಮಾಡಿದ್ದರು. ಮಹಿಳೆಯನ್ನು 3 ತಿಂಗಳು ವೆಂಟಿಲೇಟರ್‌ನಲ್ಲಿಟ್ಟು ಹಲವಾರು ಶಸ್ತ್ರಚಿಕಿತ್ಸೆ ಮಾಡಲಾಯಿತು. ಹಾನಿಗೊಳಗಾದ ಮೆದುಳಿನ ಭಾಗವನ್ನೂ ತೆಗೆಯಲಾಯಿತು. ಜೊತೆ ಜೊತೆಗೆ 5 ಶಸ್ತ್ರಚಿಕಿತ್ಸೆಯನ್ನು ನಡೆಸಲಾಯಿತು.

ಇದನ್ನೂ ಓದಿ: Viral Video: ಚಲಿಸುತ್ತಿದ್ದ ಕಾರಿನ ಹಿಂಭಾಗದಿಂದಲೇ ಪಟಾಕಿ ಸಿಡಿಸಿದ ಭೂಪ..!

ಇದೆಲ್ಲದರ ಬಳಿಕವೂ ಮಹಿಳೆಯ ಮೆದುಳು ನಿಷ್ಕ್ರಿಯಗೊಂಡಿತ್ತು. ಇಷ್ಟಾಗಿಯೂ ಅಚ್ಚರಿಯೆಂಬಂತೆ 7 ತಿಂಗಳ ಬಳಿಕವೂ ಆರೋಗ್ಯವಂತ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಆದರೆ ಮಹಿಳೆಗೆ ಎದೆಹಾಲು ಕುಡಿಸುವ ಸಾಮರ್ಥ್ಯ ಇಲ್ಲದ ಕಾರಣ ಬಾಟಲಿ ಹಾಲನ್ನು ನೀಡಲಾಗುತ್ತಿದೆ. ಸದ್ಯ ಮಗು ಆರೋಗ್ಯವಾಗಿದೆ.

 

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News