ಪಶ್ಚಿಮ ಬಂಗಾಳದಲ್ಲಿ ಆಧಾರ್ ಕಾರ್ಡ ನಿಷ್ಕ್ರಿಯ: ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ ಮಮತಾ ಬ್ಯಾನರ್ಜಿ

CM mamata banerjee : ರಾಜ್ಯದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳ ಜನರ ಆಧಾರ್ ಕಾರ್ಡ್‌ಗಳನ್ನು ನಿಷ್ಕ್ರಿಯಗೊಳಿಸಲಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. 

Written by - Zee Kannada News Desk | Last Updated : Feb 20, 2024, 11:00 AM IST
  • ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ
  • ಸಮುದಾಯದ ಸದಸ್ಯರಿಗೆ ಯಾವುದೇ ಪೂರ್ವ ಸೂಚನೆ ನೀಡದೆ ಆಧಾರ್ ಕಾರ್ಡ್‌ಗಳನ್ನು ನಿಷ್ಕ್ರಿಯಗೊಳಿಸಲಾಗಿದೆ ಎಂದು ಆರೋಪಿಸಿದ್ದಾರೆ
  • ಈ ಕ್ರಮವು ಸಹಜ ನ್ಯಾಯದ ಸಂಪೂರ್ಣ ಉಲ್ಲಂಘನೆಯಾಗಿದೆ
ಪಶ್ಚಿಮ ಬಂಗಾಳದಲ್ಲಿ ಆಧಾರ್ ಕಾರ್ಡ ನಿಷ್ಕ್ರಿಯ:  ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ ಮಮತಾ ಬ್ಯಾನರ್ಜಿ title=

West bengal adhar card inactive : ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ರಾಜ್ಯದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳ ಜನರ ಆಧಾರ್ ಕಾರ್ಡ್‌ಗಳನ್ನು ನಿಷ್ಕ್ರಿಯಗೊಳಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಪಶ್ಚಿಮ ಬಂಗಾಳದ ವಿಶೇಷವಾಗಿ ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು ಮತ್ತು ಒಬಿಸಿ ಸಮುದಾಯಗಳಿಗೆ ಸೇರಿದ ಜನರ ಆಧಾರ್ ಕಾರ್ಡ್‌ಗಳನ್ನು  ನಿಷ್ಕ್ರಿಯಗೊಳಿಸಲಾಗಿದೆ. ಇದೊಂದು ಗಂಭೀರ ಸ್ವರೂಪದ  ಬೆಳವಣಿಗೆಯಾಗಿದ್ದು, ಇದನ್ನು ನಿಮ್ಮ ಗಮನಕ್ಕೆ ತರಲು ನಾನು ಬಯಸುತ್ತೇನೆ ಎಂದು ಬರೆದಿದ್ದಾರೆ. 

ಇದನ್ನು ಓದಿ : ಜವಾನ್ ನ ಲಕ್ಶ್ಮೀ ಪಾತ್ರದ ಹುಡುಗಿಯ ನ್ಯೂ ಪೋಟೋಶೂಟ್ : ಪ್ರಿಯಾಮಣಿ

ಈ ಕ್ರಮವು ಸಹಜ ನ್ಯಾಯದ ಸಂಪೂರ್ಣ ಉಲ್ಲಂಘನೆಯಾಗಿದೆ  ಮತ್ತು ಸಮುದಾಯದ ಸದಸ್ಯರಿಗೆ ಯಾವುದೇ ಪೂರ್ವ ಸೂಚನೆ ನೀಡದೆ ಆಧಾರ್ ಕಾರ್ಡ್‌ಗಳನ್ನು ನಿಷ್ಕ್ರಿಯಗೊಳಿಸಲಾಗಿದೆ ಎಂದು ಆರೋಪಿಸಿದ್ದಾರೆ

ಇದನ್ನು ಓದಿ : ಕಾಡಾನೆ ದಾಳಿಗೆ ಬಲಿಯಾದ ವ್ಯಕ್ತಿ ಕುಟುಂಬಕ್ಕೆ ಪರಿಹಾರ ನೀಡುವ ರಾಜ್ಯ ಸರ್ಕಾರದ ತೀರ್ಮಾನ ಖಂಡನೀಯ: ಬಿ.ವೈ.ವಿಜಯೇಂದ್ರ    

> ರಾಜ್ಯ ಸರ್ಕಾರವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ದೆಹಲಿಯಲ್ಲಿರುವ UIDAl ನ ಪ್ರಧಾನ ಕಛೇರಿಯು ಯಾವುದೇ ಕ್ಷೇತ್ರ ವಿಚಾರಣೆ ಅಥವಾ ವ್ಯಕ್ತಿಗಳ ಅಭಿಪ್ರಾಯ, ಅನಿಸಿಕೆ ಕೇಳದೆ, ನೇರವಾಗಿ ವ್ಯಕ್ತಿಗಳು ಮತ್ತು ಕುಟುಂಬ ಸದಸ್ಯರಿಗೆ ಅವರ ಆಧಾರ್ ಕಾರ್ಡ್‌ಗಳನ್ನು ನಿಷ್ಕ್ರಿಯಗೊಳಿಸುವುದರ ಕುರಿತು ನಿಮ್ಮ ಗಮನಕ್ಕೆ ತರುತ್ತಿದ್ದೇನೆ.

 

ಕಾರಣಗಳನ್ನು ನೀಡದೆ ಆಧಾರ್ ಕಾರ್ಡ್‌ಗಳನ್ನು ನಿಷ್ಕ್ರಿಯಗೊಳಿಸುವ ಇಂತಹ ಹಠಾತ್ ಕ್ರಮಕ್ಕೆ , ರಾಜ್ಯದ ಪ್ರತಿಯೊಬ್ಬ ನಾಗರಿಕರು ಈ ವಿಷಯದ ಬಗ್ಗೆ ಭಯದ ಸ್ಥಿತಿಯಲ್ಲಿದ್ದಾರೆ ಎನ್ನುವದರ ಕಾರಣಗಳ ಬಗ್ಗೆ,  ನಾನು ನಿಮ್ಮಿಂದ ತಿಳಿಯಲು ಬಯಸುತ್ತೇನೆ ಎಂದು ಮಮತಾ ಬ್ಯಾನರ್ಜಿ ಪತ್ರದಲ್ಲಿ ಬರೆದಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News