ನವದೆಹಲಿ: ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷವು ಭರ್ಜರಿ ಗೆಲುವು ಸಾಧಿಸಿರುವ ಬೆನ್ನಲ್ಲೇ ಪಕ್ಷದ (ಎಎಪಿ) ನಾಯಕ ಭಗವಂತ್ ಮಾನ್ ಅವರು ಬುಧವಾರದಂದು ಪಂಜಾಬ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.


COMMERCIAL BREAK
SCROLL TO CONTINUE READING

ವರದಿಗಳ ಪ್ರಕಾರ, ಪಕ್ಷದ ಪ್ರಮುಖ ಮುಖ ಮತ್ತು ಪಂಜಾಬ್‌ನಲ್ಲಿ ಅದರ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದ ಮಾನ್ (Bhagwant Mann), ಅವರು ಈಗ ಪ್ರಮಾಣ ವಚನ ಸಮಾರಂಭಕ್ಕೆ ಹಾಜರಾಗುವಂತೆ ದೆಹಲಿ ಸಿಎಂ ಮತ್ತು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರನ್ನು ಆಹ್ವಾನಿಸಿದ್ದಾರೆ.


ಇದನ್ನೂ ಓದಿ: Punjab Election Result: ಪಂಜಾಬ್ ನಲ್ಲಿ ಕಾಂಗ್ರೆಸ್ ಸೋಲಿನ ನಂತರ ಸಿದ್ದು ನೀಡಿದ ಮೊದಲ ಹೇಳಿಕೆ ಏನು ?


ಅವರು ಮಾರ್ಚ್ 13 ರಂದು ಅಮೃತಸರದಲ್ಲಿ ದೆಹಲಿ ಸಿಎಂ ಮತ್ತು ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರೊಂದಿಗೆ ರೋಡ್ ಶೋ ನಡೆಸಲಿದ್ದಾರೆ. ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷದ ಅದ್ಭುತ ಗೆಲುವಿನ ಒಂದು ದಿನದ ನಂತರ, ಭಗವಂತ್ ಮಾನ್ ಶುಕ್ರವಾರದಂದು ದೆಹಲಿ ಸಿಎಂ ಮತ್ತು ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿದ್ದರು.


ಮಾನ್ ಇಂದು ಬೆಳಿಗ್ಗೆ ರಾಷ್ಟ್ರ ರಾಜಧಾನಿಗೆ ಆಗಮಿಸಿ ಕೇಜ್ರಿವಾಲ್ (Arvind Kejriwal) ಅವರನ್ನು ಭೇಟಿಯಾದರು.ಇದೇ ವೇಳೆ ಪಕ್ಷದ ಪಂಜಾಬ್ ಉಸ್ತುವಾರಿಯನ್ನು ವಹಿಸಿಕೊಂಡಿದ್ದ ಎಎಪಿ ನಾಯಕ ರಾಘವ್ ಚಡ್ಡಾ ಮತ್ತು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಕೂಡ  ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


ಇದನ್ನೂ ಓದಿ: Arvind Kejriwal : ಮೊಬೈಲ್ ರಿಪೇರಿ ಮಾಡಿದವನು ಸಿಎಂ ಚನ್ನಿಯನ್ನು ಸೋಲಿಸಿದ : ಸಿಎಂ ಕೇಜ್ರಿವಾಲ್ 


ನವನ್‌ಶಹರ್ ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಪೂರ್ವಜರ ಗ್ರಾಮವಾದ ಖಟ್ಕರ್ ಕಲಾನ್‌ನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಮಾನ್ ಈ ಹಿಂದೆ ಹೇಳಿದ್ದರು.ಇದೇ ವೇಳೆ ಪಕ್ಷದ ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ ಮಾನ್ ಅವರು "ಜನರು ಸೊಕ್ಕಿನ ವ್ಯಕ್ತಿಗಳನ್ನು ಸೋಲಿಸಿ ಸಾಮಾನ್ಯ ಜನರನ್ನು ವಿಜಯಶಾಲಿಯಾಗಿಸಿದರು"ಎಂದು ಹೇಳಿದರು.


ಈ ಬಾರಿ ಆಮ್ ಆದ್ಮಿ ಪಕ್ಷವು ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ 92 ಸ್ಥಾನಗಳನ್ನು ಗೆಲ್ಲುವ ಮೂಲಕ 117 ಸದಸ್ಯರ ಶಾಸಕಾಂಗ ಸಭೆಯಲ್ಲಿ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದೆ.


ಈ ಹಿಂದೆ 2017 ರ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ, ಕಾಂಗ್ರೆಸ್ 77 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದರೆ, ಶಿರೋಮಣಿ ಅಕಾಲಿದಳ ಕೇವಲ 15 ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಯಿತು, ಬಿಜೆಪಿ ಮೂರು ಮತ್ತು ಸ್ವತಂತ್ರ ಅಭ್ಯರ್ಥಿಗಳು ಎರಡು ಸ್ಥಾನಗಳನ್ನು ಗೆದ್ದಿದ್ದರು. ಇದೇ ವೇಳೆ ಎಎಪಿ 20 ಸ್ಥಾನಗಳೊಂದಿಗೆ ಎರಡನೇ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.