ಲೋಕಸಭಾ ಚುನಾವಣೆಗೆ ಏಪ್ರಿಲ್ 25 ರಂದು ಎಎಪಿಯಿಂದ ಪ್ರಣಾಳಿಕೆ ಬಿಡುಗಡೆ ಸಾಧ್ಯತೆ

ಮುಂಬರುವ ಲೋಕಸಭೆ ಚುನಾವಣೆಗೆ ಏಪ್ರಿಲ್ 25 ರಂದು ಆಮ್ ಆದ್ಮಿ ಪಕ್ಷ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Last Updated : Apr 6, 2019, 02:47 PM IST
ಲೋಕಸಭಾ ಚುನಾವಣೆಗೆ ಏಪ್ರಿಲ್ 25 ರಂದು ಎಎಪಿಯಿಂದ ಪ್ರಣಾಳಿಕೆ ಬಿಡುಗಡೆ ಸಾಧ್ಯತೆ title=
File Image

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಏಪ್ರಿಲ್ 25 ರಂದು ಆಮ್ ಆದ್ಮಿ ಪಕ್ಷ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ದೆಹಲಿಯಲ್ಲಿ ಏಳು ಲೋಕಸಭಾ ಕ್ಷೇತ್ರಗಳಿಗೆ ಮೇ 12 ರಂದು ಮತದಾನ ನಡೆಯಲಿದೆ. ಸಾರ್ವತ್ರಿಕ ಚುನಾವಣೆಗೆ ಬಿಡುಗಡೆ ಮಾಡಲಿರುವ ಪ್ರಣಾಳಿಕೆಯಲ್ಲಿ ದೆಹಲಿ ರಾಜ್ಯ ಸ್ವಾಯತ್ತತೆಗೆ ಒತ್ತು ನೀಡಲಾಗುವುದು ಎಂದು ಮೂಲಗಳು ತಿಳಿಸಿವೆ.

ದೆಹಲಿಯ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯ ನೇತೃತ್ವದ ಏಳು ಸದಸ್ಯರ ತಂಡ ಈ ಪ್ರಣಾಳಿಕೆಯನ್ನು ಸಿದ್ಧಪಡಿಸಿದೆ. ರಾಷ್ಟ್ರೀಯ ರಾಜಧಾನಿಯಲ್ಲಿ ಆಡಳಿತಾರೂಢ ಎಎಪಿ ರಾಜ್ಯ ಸ್ವಾಯತ್ತತೆಗಾಗಿ ಹೋರಾಡುತ್ತಿದೆ.
 

Trending News