ಟಿಎಂಸಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಮಮತಾ ಬ್ಯಾನರ್ಜಿಯ ಸೋದರಳಿಯ ಅಭಿಷೇಕ್ ನೇಮಕ
ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿಯನ್ನು ಪಕ್ಷದ ಅಖಿಲ ಭಾರತ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಶನಿವಾರ ನೇಮಕ ಮಾಡಿದ್ದಾರೆ.
ನವದೆಹಲಿ: ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿಯನ್ನು ಪಕ್ಷದ ಅಖಿಲ ಭಾರತ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಶನಿವಾರ ನೇಮಕ ಮಾಡಿದ್ದಾರೆ.
ಇದನ್ನೂ ಓದಿ: Whatsapp Fake Message: ವಾಟ್ಸಾಪ್‌ನಲ್ಲಿ ವೈರಲ್ ಆಗುತ್ತಿರುವ ಈ ಲಿಂಕ್ ಅನ್ನು ಮರೆತೂ ಕೂಡ ಕ್ಲಿಕ್ ಮಾಡಬೇಡಿ
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಟಿಎಂಸಿ ಮುಖಂಡ ಪಾರ್ಥ ಚಟರ್ಜಿ ಅವರು ಪಕ್ಷದಲ್ಲಿ ಕೇವಲ ಒಂದು ಹುದ್ದೆಯನ್ನು ಅಲಂಕರಿಸಲು ಒಬ್ಬ ವ್ಯಕ್ತಿಗೆ ಅವಕಾಶ ನೀಡಲಾಗುವುದು ಎಂದು ಕಾರ್ಯಕಾರಿ ಸಮಿತಿ ನಿರ್ಧರಿಸಿದೆ ಮತ್ತು ಕೋರ್ ಕಮಿಟಿ ಕೂಡ ಇದಕ್ಕೆ ಅನುಮೋದನೆ ನೀಡಿದೆ.
ಇದನ್ನು ಓದಿ- ರಷ್ಯಾ ಅಧ್ಯಕ್ಷ ವಾಡ್ಲಿಮೀರ್ ಪುಟಿನ್ ಗೆ ಕರೆ ಮಾಡಿ ಪ್ರಧಾನಿ ಮೋದಿ ಹೇಳಿದ್ದೇನು?
'ನಮ್ಮ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಸಂಸದ ಅಭಿಷೇಕ್ ಬ್ಯಾನರ್ಜಿ (Abhishek Banerjee) ಅವರನ್ನು ಟಿಎಂಸಿಯ ಅಖಿಲ ಭಾರತ ಪ್ರಧಾನ ಕಾರ್ಯದರ್ಶಿಯಾಗಿ ನಾಮ ನಿರ್ದೇಶನ ಮಾಡಿದ್ದಾರೆ' ಎಂದು ಚಟರ್ಜಿ ಹೇಳಿದ್ದಾರೆ.
ಈಗ ಸುಬ್ರತಾ ಬಕ್ಷಿ ಅವರ ಬದಲಿಗೆ ಅಭಿಷೇಕ್ ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.ಇನ್ನೊಂದೆಡೆಗೆ ಟಿಎಂಸಿ ಮುಖಂಡ ಸಯೋನಿ ಘೋಷ್ ಅವರನ್ನು ಯುವ ವಿಭಾಗದ ಅಧ್ಯಕ್ಷರನ್ನಾಗಿ ಮಾಡಲಾಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ