Car Accident: ಟೀಂ ಇಂಡಿಯಾದ ಮಾಜಿ ವಿಕೆಟ್‌ ಕೀಪರ್ ಪುತ್ರನ ಬಂಧನ

ಭಾರತ ತಂಡದ ಮಾಜಿ ವಿಕೆಟ್ ಕೀಪರ್ ಸಬಾ ಕರೀಮ್ ಅವರ ಪುತ್ರ ಫಿಡೆಲ್ ಅವರನ್ನು ಮುಂಬೈ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

Last Updated : Jan 8, 2020, 09:21 AM IST
Car Accident: ಟೀಂ ಇಂಡಿಯಾದ ಮಾಜಿ ವಿಕೆಟ್‌ ಕೀಪರ್ ಪುತ್ರನ ಬಂಧನ title=

ಮುಂಬೈ: ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತ ಕ್ರಿಕೆಟ್ ತಂಡದ ಮಾಜಿ ತಂಡದ ವಿಕೆಟ್ ಕೀಪರ್ ಸಬಾ ಕರೀಮ್ ಅವರ ಪುತ್ರ ಫಿಡೆಲ್ ಅವರನ್ನು ಮುಂಬೈ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಮಂಗಳವಾರ ಬೆಳಿಗ್ಗೆ, ಕರೀಮ್ ಪೆಡ್ಡರ್ ರಸ್ತೆಯಿಂದ ವರ್ಲಿ ಕಡೆಗೆ ಹೋಗುತ್ತಿದ್ದಾಗ, ಫಿಡೆಲ್ ಮತ್ತೊಂದು ವಾಹನವನ್ನು ಹಿಂದಿಕ್ಕುವ ಪ್ರಯತ್ನದಲ್ಲಿ ತನ್ನ ವಾಹನದ ನಿಯಂತ್ರಣವನ್ನು ಕಳೆದುಕೊಂಡನು. ಈ ಹಿನ್ನೆಲೆಯಲ್ಲಿ ರಸ್ತೆ ದಾಟುತ್ತಿದ್ದ 28 ವರ್ಷದ ಮಹಿಳೆ ಮೇಲೆ ಕಾರು ಹರಿದಿದೆ. ಈ ಘಟನೆಯಲ್ಲಿ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯ ನಂತರ ಅವರನ್ನು ಮುಂಬೈನ ಜಸ್ಲೋಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೀಗ ಮಹಿಳೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆಯ ನಂತರ, ಮುಂಬೈ ಪೊಲೀಸರು ಐಪಿಸಿಯ ಸೆಕ್ಷನ್ 279 ಮತ್ತು 338 ರ ಅಡಿಯಲ್ಲಿ ಪ್ರಕರಣ ದಾಖಲಿಸಿ ಫಿಡೆಲ್ ಅವರನ್ನು ಬಂಧಿಸಿದ್ದಾರೆ. ಆದರೆ, ಆತನನ್ನು ಬಂಧಿಸಿದ ಕೂಡಲೇ ಜಾಮೀನು ನೀಡಲಾಯಿತು. ಸಬಾ ಕರೀಮ್ ಟೀಮ್ ಇಂಡಿಯಾದ ಸೆಲೆಕ್ಟರ್ ಆಗಿದ್ದಾರೆ.

Trending News