ಉನ್ನಾವ್: ಆಗ್ರಾ ಲಕ್ನೋ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಮಂಗಳವಾರ ಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದೆ. ಎಕ್ಸ್ಪ್ರೆಸ್ವೇಯಲ್ಲಿ ಅತಿ ವೇಗವಾಗಿ ಬರುತ್ತಿದ್ದ ಬಸ್ ಮತ್ತು ಟ್ರಾಕ್ಟರ್ ನಡುವೆ ಡಿಕ್ಕಿ ಹೊಡೆದಿದೆ. ಟ್ರಾಕ್ಟರ್ ಡಿಕ್ಕಿಯಿಂದ ಟ್ರಾಲಿ ಪಲ್ಟಿ ಹೊಡೆದಿದೆ. ಟ್ರಾಲಿಯಲ್ಲಿ 25 ಜನರಿದ್ದರು ಎಂದು ಹೇಳಲಾಗುತ್ತಿದೆ. ಈ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದರೆ, 22 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳೆಲ್ಲರನ್ನೂ ಸಿಎಚ್ಸಿ ಬಂಗರ್ಮೌಗೆ ದಾಖಲಿಸಲಾಗಿದೆ.
ಪ್ರಯಾಣಿಕರಿಂದ ತುಂಬಿದ್ದ ಬಸ್ ಬಿಹಾರದಿಂದ ರಾಜಸ್ಥಾನದ ಜೈಪುರಕ್ಕೆ ಹೋಗುತ್ತಿತ್ತು. ಮಿಲ್ಲೆಸ್ಟೋನ್ 27ರ ಬಳಿ ಚಾಲಕ ಕಿರು ನಿದ್ರೆಗೆ ಜಾರಿದ್ದು, ಇದರಿಂದಾಗಿ ಬಸ್ ಚಾಲಕನ ನಿಯಂತ್ರಣ ತಪ್ಪಿದೆ.
ಅನಿಯಂತ್ರಿತ ಬಸ್ ಮುಂದೆ ಹೋಗುತ್ತಿದ್ದ ಮರಳು ತುಂಬಿದ ಟ್ರಕ್ಗೆ ಡಿಕ್ಕಿ ಹೊಡೆದಿದೆ. ಬಸ್ಸಿನ ವೇಗ ಹೆಚ್ಚಾಗಿದ್ದಿದ್ದರಿಂದ ತಕ್ಷಣ ಬ್ರೇಕ್ ಹಾಕಲು ಸಾಧ್ಯವಾಗದೆ ಈ ಘರ್ಷಣೆ ಸಂಭವಿಸಿದೆ ಎನ್ನಲಾಗುತ್ತಿದೆ. ಘಟನೆಯಲ್ಲಿ ಐವರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಾವನ್ನಪ್ಪಿದವರಲ್ಲಿ ಏಳು ವರ್ಷದ ಬಾಲಕಿ ಕೂಡ ಸೇರಿದ್ದಾಳೆ.
10 ದಿನಗಳಲ್ಲಿ ಎರಡನೇ ದೊಡ್ಡ ಅಪಘಾತ:
ಆಗ್ರಾ ಲಕ್ನೋ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಕೇವಲ 10 ದಿನಗಳಲ್ಲಿ ಸಂಭವಿಸಿದ ಎರಡನೇ ದೊಡ್ಡ ಅಪಘಾತ ಇದಾಗಿದೆ. ಕಳೆದ ತಿಂಗಳು 28 ರಂದು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘಾತದಲ್ಲಿ 7 ಜನರು ಸಾವನ್ನಪ್ಪಿದ್ದರು. ಆಗ್ರಾದ ಫತೇಹಾಬಾದ್ ಪೊಲೀಸ್ ಠಾಣೆ ಪ್ರದೇಶದ ಎಕ್ಸ್ಪ್ರೆಸ್ವೇಯ ಮೈಲಿಗಲ್ಲು 27ರ ಬಳಿ ಈ ಅಪಘಾತ ಸಂಭವಿಸಿತ್ತು.