ನವದೆಹಲಿ: ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಭಾರತೀಯ ಕುಸ್ತಿ ಫೆಡರೇಶನ್‌ (WFI) ಅಧ್ಯಕ್ಷ ಬ್ರಿಜ್‌ ಭೂಷಣ್‌ ಸಿಂಗ್‌ ವಿರುದ್ಧ ಕ್ರಮ ಕೈಗೊಳ್ಳುವಂತೆ ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಬ್ರಿಜ್‌ ಭೂಷಣ್‌ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಳೆದ ಹಲವಾರು ದಿನಗಳಿಂದ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದಾರೆ.


COMMERCIAL BREAK
SCROLL TO CONTINUE READING

ಒಲಿಂಪಿಯನ್ ಕುಸ್ತಿಪಟುಗಳಾದ ವಿನೇಶಾ ಫೋಗಟ್, ಬಜರಂಗ್ ಪೂನಿಯಾ ಹಾಗೂ ಸಾಕ್ಷಿ ಮಲಿಕ್ ಧರಣಿಯ ನೇತೃತ್ವ ವಹಿಸಿದ್ದಾರೆ. ಈ ನಡುವೆ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ‘ಬ್ರಿಜ್ ಭೂಷಣ್ ವಿರುದ್ಧ ಮಹಿಳಾ ಕುಸ್ತಿಪಟುಗಳು ನೀಡಿದ ದೂರಿನ ಬಗ್ಗೆ ತನಿಖೆ ನಡೆಯತ್ತಿದೆ. ತನಿಖೆ ಪೂರ್ಣಗೊಂಡ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.


ಇದನ್ನೂ ಓದಿ: ಬ್ಯಾಂಕ್ , ಐಟಿಆರ್ ಸೇರಿದಂತೆ ಜೂನ್ 1ರಿಂದ ಈ ಎಲ್ಲಾ ನಿಯಮಗಳಲ್ಲಿ ಬದಲಾವಣೆ ! ಇಕ್ಕಟ್ಟಿಗೆ ಸಿಲುಕಲಿರುವ ಗ್ರಾಹಕರು


ಸುದ್ದಿಗಾರರ ಜೊತೆಗೆ ಮಾತನಾಡಿರುವ ಅವರು, ‘ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದೆ. ತನಿಖೆ ಮುಗಿದ ಬಳಿಕ ಸರ್ಕಾರವೇ ಈ ಬಗ್ಗೆ ಕ್ರಮ ತೆಗೆದುಕೊಳ್ಳುತ್ತದೆ ಎಂದು ಹೇಳಿದ್ದಾರೆ. ಬ್ರಿಜ್ ಭೂಷನ್ ಅವರನ್ನು ಫೆಡರೇಷನ್‍ನಿಂದ ವಜಾಗೊಳಿಸಬೇಕು ಮತ್ತು ಬಂಧಿಸಬೇಕೆಂದು ಆಗ್ರಹಿಸಿ ದೇಶದ ಕೆಲ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ದೆಹಲಿ ಪೊಲೀಸರು ಬ್ರಿಜ್ ಭೂಷನ್ ವಿರುದ್ಧ 2 FIR ದಾಖಲಿಸಿದ್ದು, ತನಿಖೆ ನಡೆಸುತ್ತಿದ್ದಾರೆ.


ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುತ್ತೇನೆ!


ತಮ್ಮ ವಿರುದ್ಧದ ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುವುದಾಗಿ ಬ್ರಿಜ್ ಭೂಷಣ್  ಹೇಳಿದ್ದಾರೆ. ಪ್ರತಿಭಟನೆ ಸಂಕೇತವಾಗಿ ತಮ್ಮ ಪದಕಗಳನ್ನು ಗಂಗಾನದಿಯಲ್ಲಿ ಹಾಕುವುದಾಗಿ ಹೇಳಿದ್ದ ಕುಸ್ತಿಪಟುಗಳ ವಿರುದ್ಧ ಕಿಡಿಕಾರಿದ್ದ ಸಿಂಗ್, ‘ನನ್ನ ವಿರುದ್ಧದ ಒಂದೇ ಒಂದು ಆರೋಪ ಸಾಬೀತಾದರೆ, ನಾನು ನೇಣು ಹಾಕಿಕೊಳ್ಳುತ್ತೇನೆ' ಎಂದು ಹೇಳಿದ್ದರು.


ಇದನ್ನೂ ಓದಿ: Banking Frauds: ಬ್ಯಾಂಕ್ ಗ್ರಾಹಕರಿಗೆ ಶಾಕ್ ನೀಡಿದ ಆರ್ಬಿಐ, ಗ್ರಾಹಕರು ಏನ್ ಮಾಡ್ಬೇಕು?


ಕುಸ್ತಿಪಟುಗಳ ಬಳಿ ನನ್ನ ವಿರುದ್ಧದ ಯಾವುದೇ ರೀತಿಯ ಸಾಕ್ಷ್ಯಗಳಿದ್ದರೆ ನ್ಯಾಯಾಲಯಕ್ಕೆ ನೀಡಲಿ. ನಾನು ಯಾವುದೇ ಶಿಕ್ಷೆಯನ್ನು ಸ್ವೀಕರಿಸಲು ಸಿದ್ಧನಿದ್ದೇನೆ. ಈ ಬಗ್ಗೆ ದೆಹಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕುಸ್ತಿಪಟುಗಳು ಮಾಡಿರುವ ಆರೋಪದಲ್ಲಿ ಸತ್ಯಾಂಶವಿದ್ದರೆ ನನ್ನನ್ನು ಬಂಧಿಸಲಾಗುತ್ತಿತ್ತು ಎಂದು ಹೇಳಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.