ನವದೆಹಲಿ: ಸಾಮಾಜಿಕ ಮಧ್ಯಮಗಳಲ್ಲಿ ತಮ್ಮ ರಾಜಕೀಯ ನಿಲುವಿಗಾಗಿ ಹೆಸರುಗಳಿಸಿರುವ ಬಾಲಿವುಡ್ ನಟಿ ಸ್ವರ ಭಾಸ್ಕರ್ ಈಗ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ್ದಾರೆ.
ಈ ಹಿಂದೆ ಅಮೋಲ್ ಪಾಲೇಕರ್, ಸಂಧ್ಯಾ ಗೋಖಲೆ, ಪೂಜಾ ಭಟ್, ರಿಯಾ ಸೇನ್, ಸುಶಾಂತ್ ಸಿಂಗ್, ಮೋನಾ ಅಂಬೇಗಾಂವ್ಕರ್, ರಶ್ಮಿ ದೇಸಾಯಿ, ಮತ್ತು ಆಕಾಂಕ್ಷಾ ಪುರಿ ಮುಂತಾದ ಚಿತ್ರರಂಗದ ಪ್ರಮುಖರು ಯಾತ್ರೆಯಲ್ಲಿ ಭಾಗವಹಿಸಿದ್ದರು.
ಇದನ್ನೂ ಓದಿ : Rahul Dravid-Rohit Sharma Meeting: ದ್ರಾವಿಡ್- ರೋಹಿತ್ ಶರ್ಮಾಗೆ ಬಿಸಿಸಿಐ ಬಿಗ್ ರಿಲೀಫ್! ಸಭೆ ಮುಂದೂಡಿದ ಮಂಡಳಿ
ಕೇವಲ ಬಾಲಿವುಡ್ ಅಷ್ಟೇ ಅಲ್ಲದೆ ಹಾಲಿವುಡ್ ನಿಂದಲೂ ರಾಹುಲ್ ಗಾಂಧಿ ನೇತೃತ್ವದ ಭಾರತ ಜೋಡೋ ಯಾತ್ರೆಗೆ ಬೆಂಬಲ ವ್ಯಕ್ತವಾಗಿತ್ತು, ಹಾಲಿವುಡ್ ನಟ ಜಾನ್ ಕುಶಾಕ್ ಅವರು ಸೆಪ್ಟೆಂಬರ್ ತಿಂಗಳಲ್ಲಿ ಈ ಯಾತ್ರೆಗೆ ಬೆಂಬಲ ನೀಡಿದ್ದರು.ಒಂದು ದಿನದ ವಿರಾಮದ ನಂತರ ಗುರುವಾರ ಬೆಳಿಗ್ಗೆ ಉಜ್ಜಯಿನಿಯಿಂದ ಪುನರಾರಂಭವಾದ ಯಾತ್ರೆಯು ಮಧ್ಯಪ್ರದೇಶದ ಕೊನೆಯ ಜಿಲ್ಲೆಯಾದ ಅಗರ್ ಮಾಲ್ವಾಕ್ಕೆ ತೆರಳಿತು. ಯಾತ್ರೆಯು ಪಶ್ಚಿಮ ಮಧ್ಯಪ್ರದೇಶದ ರಾಜಕೀಯವಾಗಿ ನಿರ್ಣಾಯಕ ಮಾಲ್ವಾ-ನಿಮಾರ್ ಪ್ರದೇಶದಲ್ಲಿ 380 ಕಿ.ಮೀ ದೂರವನ್ನು 12 ದಿನಗಳಲ್ಲಿ ಕ್ರಮಿಸಲು ನಿರ್ಧರಿಸಲಾಗಿದೆ.
ಇದನ್ನೂ ಓದಿ : Notice to Roger Binny: ಬಿಸಿಸಿಐ ಮುಖ್ಯಸ್ಥ ರೋಜರ್ ಬಿನ್ನಿಗೆ ನೋಟಿಸ್ ಜಾರಿ: ಇದಕ್ಕೆ ಸೊಸೆ ಮಯಾಂತಿಯೇ ಕಾರಣ!!
At a time when hate is normal & the dominant logic is that ‘no low is too low as long as the election is won’.. when society is so brutalised that we barely blink at heinous crimes, @bharatjodo yatra is a radical new imagination & expression of how we can resist hate. @INCIndia pic.twitter.com/A4aEbnoCJ4
— Swara Bhasker (@ReallySwara) December 1, 2022
ಬಿಜೆಪಿ ಆಡಳಿತವಿರುವ ರಾಜ್ಯದಲ್ಲಿ ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದೆ.ಮಧ್ಯಪ್ರದೇಶದಿಂದ ಡಿಸೆಂಬರ್ 4 ರಂದು ಯಾತ್ರೆ ರಾಜಸ್ಥಾನಕ್ಕೆ ಪ್ರವೇಶಿಸಲಿದೆ ಎಂದು ಕಾಂಗ್ರೆಸ್ ಘೋಷಿಸಿದ ಕಾರ್ಯಕ್ರಮವೊಂದರಲ್ಲಿ ತಿಳಿಸಲಾಗಿದೆ.ರಾಹುಲ್ ಗಾಂಧಿ ನೇತೃತ್ವದ ಪಾದಯಾತ್ರೆ ನವೆಂಬರ್ 23 ರಂದು ನೆರೆಯ ಮಹಾರಾಷ್ಟ್ರದಿಂದ ಮಧ್ಯಪ್ರದೇಶದ ಬುರ್ಹಾನ್‌ಪುರ ಜಿಲ್ಲೆಯನ್ನು ಪ್ರವೇಶಿಸಿತು.ಇದು ಇಲ್ಲಿಯವರೆಗೆ ಬುರ್ಹಾನ್‌ಪುರ, ಖಾಂಡ್ವಾ, ಖಾರ್ಗೋನ್ ಮತ್ತು ಎಂಪಿಯ ಇಂದೋರ್ ಜಿಲ್ಲೆಗಳ ಮೂಲಕ ಹಾದುಹೋಗಿದೆ.ಭಾರತ್ ಜೋಡೋ ಯಾತ್ರೆ ಸೆಪ್ಟೆಂಬರ್ 7 ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಯಾತ್ರೆಗೆ ಚಾಲನೆ ನೀಡಲಾಗಿತ್ತು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.