ಕೋವಿಡ್-19 ಲಸಿಕೆಗೆ ಆಧಾರ್ ಕಡ್ಡಾಯವಲ್ಲ: ಸುಪ್ರೀಂಗೆ ಕೇಂದ್ರ ಸರ್ಕಾರದ ಮಾಹಿತಿ

Corona Vaccine: ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಸೂರ್ಯಕಾಂತ್ ಅವರ ಪೀಠಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಕೋವಿಡ್-19 ಲಸಿಕೆಗೆ ಆಧಾರ್ ಕಡ್ಡಾಯವಲ್ಲ ಎಂದು ತಿಳಿಸಿದೆ.

Edited by - Chetana Devarmani | Last Updated : Feb 7, 2022, 03:13 PM IST
  • ಕೋವಿಡ್-19 ಲಸಿಕೆಗೆ ಆಧಾರ್ ಕಡ್ಡಾಯವಲ್ಲ
  • ಗುರುತಿನ ಚೀಟಿ ಇಲ್ಲದ ಸುಮಾರು 87 ಲಕ್ಷ ಜನರಿಗೆ ಲಸಿಕೆ ಹಾಕಲಾಗಿದೆ
  • ಸುಪ್ರೀಂಗೆ ಕೇಂದ್ರ ಸರ್ಕಾರದ ಮಾಹಿತಿ
ಕೋವಿಡ್-19 ಲಸಿಕೆಗೆ ಆಧಾರ್ ಕಡ್ಡಾಯವಲ್ಲ: ಸುಪ್ರೀಂಗೆ ಕೇಂದ್ರ ಸರ್ಕಾರದ ಮಾಹಿತಿ  title=
ಕೋವಿಡ್-19 ಲಸಿಕೆ

ನವದೆಹಲಿ: ಕೋವಿಡ್-19 ಲಸಿಕೆಗಾಗಿ (Corona Vaccine) ಕೋವಿನ್ ಪೋರ್ಟಲ್‌ನಲ್ಲಿ ನೋಂದಣಿಗೆ ಆಧಾರ್ ಕಾರ್ಡ್ ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. 

ಇದನ್ನೂ ಓದಿ: ಲತಾ ಮಂಗೇಶ್ಕರ್ ಅಂತ್ಯಕ್ರಿಯೆಯಲ್ಲಿ ಶಾರುಖ್ ಉಗುಳಿದ್ದಾರಾ?

ನ್ಯಾಯಮೂರ್ತಿಗಳಾದ ಡಿ ವೈ ಚಂದ್ರಚೂಡ್ ಮತ್ತು ಸೂರ್ಯಕಾಂತ್ ಅವರ ಪೀಠಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಪಾಸ್‌ಪೋರ್ಟ್, ಡ್ರೈವಿಂಗ್ ಲೈಸೆನ್ಸ್, ಪ್ಯಾನ್ ಕಾರ್ಡ್, ಮತದಾರರ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಒಂಬತ್ತು ಗುರುತಿನ ದಾಖಲೆಗಳಲ್ಲಿ ಒಂದನ್ನು ಲಸಿಕೆಗೆ ಹಾಜರುಪಡಿಸಬಹುದು ಎಂದು ತಿಳಿಸಿತು.

ಕೋವಿನ್ ಪೋರ್ಟಲ್‌ನಲ್ಲಿ ಕೋವಿಡ್ -19 (Covid-19) ಲಸಿಕೆಯನ್ನು ನೀಡಲು ಆಧಾರ್ ಕಾರ್ಡ್ ಅನ್ನು ಕಡ್ಡಾಯವಾಗಿ ಒತ್ತಾಯಿಸಲಾಗುತ್ತಿದೆ ಎಂದು ಹೇಳುವ ಸಿದ್ಧಾರ್ಥ್ ಶಂಕರ್ ಶರ್ಮಾ ಅವರು ಸಲ್ಲಿಸಿದ ಮನವಿಯನ್ನು ಸುಪ್ರೀಂ ಕೋರ್ಟ್ (Supreme Court) ಗಮನಕ್ಕೆ ತೆಗೆದುಕೊಂಡಿತು ಮತ್ತು ವಿಲೇವಾರಿ ಮಾಡಿದೆ.

ಇದನ್ನೂ ಓದಿ:ಕಾಶ್ಮೀರದ ಕುರಿತು ಪಾಕ್ ಡೀಲರ್‌ನ ವಿವಾದಾತ್ಮಕ ಪೋಸ್ಟ್‌: 'ಭಾರತ ನಮ್ಮ ಎರಡನೇ ಮನೆ' ಎಂದ Hyundai

ಸುಪ್ರೀಂ ಕೋರ್ಟ್ ಅಕ್ಟೋಬರ್ 1, 2021 ರಂದು PIL ಮೇಲೆ ಕೇಂದ್ರಕ್ಕೆ ನೋಟಿಸ್ ನೀಡಿತ್ತು. "ಅಕ್ಟೋಬರ್ 1, 2021 ರ ನ್ಯಾಯಾಲಯದ ಆದೇಶದ ಪ್ರಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಕೋವಿನ್ ಪೋರ್ಟಲ್‌ನಲ್ಲಿ (Cowin Portal) ನೋಂದಣಿಗೆ ಆಧಾರ್ ಕಾರ್ಡ್ ಕಡ್ಡಾಯವಲ್ಲ ಎಂದು ದಾಖಲಿಸುವ ಅಫಿಡವಿಟ್ ಅನ್ನು ಸಲ್ಲಿಸಿದೆ. ಒಂಬತ್ತು ಗುರುತಿನ ದಾಖಲೆಗಳಲ್ಲಿ ಒಂದನ್ನು ಸಲ್ಲಿಸಬಹುದು." ಎಂದು ಪೀಠ ಹೇಳಿದೆ.

ಗುರುತಿನ ಚೀಟಿ (Identity Card) ಇಲ್ಲದ ಸುಮಾರು 87 ಲಕ್ಷ ಜನರಿಗೆ ಲಸಿಕೆ ಹಾಕಲಾಗಿದೆ ಎಂದು ಕೇಂದ್ರದ ವಕೀಲರು ತಿಳಿಸಿದ್ದಾರೆ.  

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು  Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News