ಮುಂಬೈ: ಮುಂಬರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಮುಂಬೈನ ವರ್ಲಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಶಿವಸೇನೆ ನಾಯಕ ಆದಿತ್ಯ ಠಾಕ್ರೆ ಸೋಮವಾರ ಘೋಷಿಸಿದ್ದಾರೆ. ಈ ಮೂಲಕ ಠಾಕ್ರೆ ಕುಟುಂಬದಿಂದ ಚುನಾವಣಾ ರಾಜಕಾರಣಕ್ಕೆ ಇಳಿಯುವ ಮೊದಲ ವ್ಯಕ್ತಿ ಎನಿಸಿಕೊಂಡಿದ್ದಾರೆ.


COMMERCIAL BREAK
SCROLL TO CONTINUE READING

ಚುನಾವಣಾ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಆದಿತ್ಯ ಠಾಕ್ರೆ, ತಾವು ಮುಂಬೈನ ವರ್ಲಿ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ತಿಳಿಸಿದರು. ಜತೆಗೆ ಎಲ್ಲರ ಆಶೀರ್ವಾದದಿಂದ ತಾವು ಗೆದ್ದೇ ಗೆಲ್ಲುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.


ಈ ಕ್ಷೇತ್ರದಲ್ಲಿ ಈ ಹಿಂದೆ ಶಿವಸೇನೆ ಶಾಸಕರಾಗಿದ್ದ ಸುನಿಲ್ ಶಿಂಧೆ ಅವರು ಆದಿತ್ಯಗಾಗಿ ಸ್ಥಾನವನ್ನು ಬಿಟ್ಟುಕೊಡಲಿದ್ದಾರೆ. ಇದೇ ವೇಳೆ ಈ ಬಾರಿಯ ಚುನಾವಣೆಯಲ್ಲಿ ಶಿವಸೇನಾ ಹೆಚ್ಚು ಸ್ಥಾನಗಳನ್ನು ಗಳಿಸಿದರೆ ಆದಿತ್ಯ ಠಾಕ್ರೆ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಶಿವಸೇನೆ ಹೇಳಿದೆ. 


ಈಗಾಗಲೇ ಬಿಜೆಪಿ-ಶಿವಸೇನೆ ಮೈತ್ರಿಯಲ್ಲಿ ಸಿತು ಹಂಚಿಕೆ ಅಂತಿಮಗೊಂಡಿದ್ದು, ಸಣ್ಣ ಪುಟ್ಟ ಪಕ್ಷಗಳಿಗೂ ಅವಕಾಶ ನೀಡಲಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಚಂದ್ರಕಾಂತ್ ಪಾಟೀಲ್ ತಿಳಿಸಿದ್ದಾರೆ.