ಬೆಂಗಳೂರಿನಲ್ಲೇ ನಡೆಯುತ್ತಾ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ?

ಏರ್ ಶೋ ಸ್ಥಳಾಂತರದ ಬಗ್ಗೆ ಇದುವರೆಗೂ ಯಾವುದೇ ನಿರ್ಧಾರ ಕೈಗೊಂಡಿಲ್ಲ- ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟನೆ

Last Updated : Aug 6, 2018, 07:38 AM IST
ಬೆಂಗಳೂರಿನಲ್ಲೇ ನಡೆಯುತ್ತಾ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ? title=

ಬೆಂಗಳೂರು: ಬೆಂಗಳೂರಿನ ಯಲಹಂಕ ಏರ್ ಫೋರ್ಸ್ ನಿಲ್ದಾಣದಲ್ಲಿ ನಡೆಯುವ ಪ್ರತಿಷ್ಠಿತ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ 12ನೇ ಆವೃತ್ತಿಯು, ಬೆಂಗಳೂರಿನಿಂದ ಬೇರೆ ರಾಜ್ಯಕ್ಕೆ ಸ್ಥಳಾಂತರಗೊಳ್ಳಲಿದೆ ಎಂಬ ಊಹಾಪೋಹಕ್ಕೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಈ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವೆ ನಿರ್ಮಲಾ ಸೀತಾರಾಮನ್, ಏರ್ ಶೋ ನಡೆಸುವ ಬಗ್ಗೆ ಬೇರೆ ಬೇರೆ ರಾಜ್ಯಗಳು ಮನವಿ ಸಲ್ಲಿಸಿವೆ. ಆದರೆ ಇಲ್ಲಿಯವರೆಗೆ ಆ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಏರ್ ಶೋ ಸ್ಥಳಾಂತರದ ಬಗ್ಗೆ ಇನ್ನೂ ಕೂಡ ಯಾವುದೇ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ. ಆದರೆ, ಈ ಮೊದಲು ಏರೋ ಇಂಡಿಯಾ ವೈಮಾನಿಕ ಪ್ರದರ್ಶನವನ್ನು ಬೆಂಗಳೂರಿನಿಂದ ಗೋವಾಗೆ ಸ್ಥಳಾಂತರಿಸಬಹುದು ಎಂದು ಸುದ್ದಿಯಾಗಿತ್ತು. ಇತ್ತೀಚೆಗೆ ಪ್ರತಿಷ್ಠಿತ ಏರೋ ಇಂಡಿಯಾ ವೈಮಾನಿಕ ಪ್ರದರ್ಶನವು ಉತ್ತರ ಪ್ರದೇಶಕ್ಕೆ ಶಿಫ್ಟ್ ಆಗಲಿದೆ ಎಂದು ಮಾಹಿತಿ ಲಭಿಸಿತ್ತು.

ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ರಕ್ಷಣಾ ಸಚಿವರು ಏರ್ ಶೋ ಸ್ಥಳಾಂತರದ ಬಗ್ಗೆ ಇದುವರೆಗೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ಬೆಂಗಳೂರಿನಲ್ಲೇ ನಡೆಯಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.
 

Trending News