Maharashtra Violence: ಅಕೋಲಾ ಬಳಿಕ ಇದೀಗ ಅಹ್ಮದ್ ನಗರದಲ್ಲಿ ಭುಗಿಲೆದ್ದ ಹಿಂಸಾಚಾರ
Maharashtra Violence: ಪ್ರಕರಣ ಸಂಬಂಧ ಕ್ರಮ ಕೈಗೊಂಡಿರುವ ಪೊಲೀಸರು 50 ಮಂದಿಯನ್ನು ಬಂಧಿಸಿದ್ದಾರೆ. ಈ ಜನರನ್ನು ಪೊಲೀಸರು ನಿರಂತರವಾಗಿ ವಿಚಾರಣೆ ನಡೆಸುತ್ತಿದ್ದಾರೆ. ಇಲ್ಲಿ ಹಿಂಸಾಚಾರ ನಡೆದ ಸ್ಥಳದಲ್ಲಿ ಭಾರೀ ಪ್ರಮಾಣದ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಪ್ರದೇಶದಲ್ಲಿ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಈ ಧಾರ್ಮಿಕ ಯಾತ್ರೆಗೆ ಬರುವವರಿಗಾಗಿ ಪೊಲೀಸರೊಂದಿಗೆ ಎಸ್‌ಆರ್‌ಪಿಎಫ್ ಯೋಧರನ್ನೂ ಸಹ ನಿಯೋಜಿಸಲಾಗಿತ್ತು.
Maharashtra Violence: ಮಹಾರಾಷ್ಟ್ರದ ಅಕೋಲಾದಲ್ಲಿ ಭುಗಿಲೆದ್ದ ಹಿಂಸಾಚಾರದ ಬೆಂಕಿ ಇನ್ನೂ ತಣ್ಣಗಾಗಿಲ್ಲ, ರಾಜ್ಯದ ಅಹ್ಮದ್‌ನಗರದಲ್ಲಿ ಮತ್ತೊಂದು ಹಿಂಸಾಚಾರ ಭುಗಿಲೆದ್ದಿದೆ. ಮಹಾರಾಷ್ಟ್ರದ ಅಹಮದ್‌ನಗರ ಜಿಲ್ಲೆಯಲ್ಲಿ ಭಾನುವಾರ ಸಂಜೆ ಸಂಭಾಜಿ ಜಯಂತಿ ನಿಮಿತ್ತ ಮೆರವಣಿಗೆ ನಡೆಸಲಾಗುತ್ತಿತ್ತು. ಇದೇ ವೇಳೆ ಎರಡು ಗುಂಪುಗಳು ಪರಸ್ಪರ ಮುಖಾಮುಖಿಯಾಗಿವೆ, ಕೆಲವೇ ದಿನಗಳಲ್ಲಿ ಈ ಘರ್ಷಣೆ ಹಿಂಸಾಚಾರದ ರೂಪ ಪಡೆದುಕೊಂಡಿದ್ದೆ. ಸ್ಥಳಕ್ಕಾಗಮಿಸಿದ ಪೊಲೀಸ್ ತಂಡವನ್ನು ಸಹ ಜನರು ಬಿಡದೆ ತೀವ್ರವಾಗಿ ಕಲ್ಲು ತೂರಾಟ ನಡೆಸಲಾಗಿದೆ. ಎರಡೂ ಗುಂಪುಗಳ ವತಿಯಿಂದ ಕಲ್ಲು ತೂರಾಟ ನಡೆಸಲಾಗಿದೆ. ಮಾಹಿತಿ ಪ್ರಕಾರ, ಈ ಹಿಂಸಾಚಾರದಲ್ಲಿ 8 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಇದೇ ವೇಳೆ ಭಾರೀ ಸಂಖ್ಯೆಯಲ್ಲಿ ಜನರು ಗಾಯಗೊಂಡಿರುವ ಸುದ್ದಿಯೂ ಇದೆ.
ಪ್ರಕರಣ ಸಂಬಂಧ ಕ್ರಮ ಕೈಗೊಂಡಿರುವ ಪೊಲೀಸರು 50 ಮಂದಿಯನ್ನು ಬಂಧಿಸಿದ್ದಾರೆ. ಈ ಜನರನ್ನು ಪೊಲೀಸರು ನಿರಂತರವಾಗಿ ವಿಚಾರಣೆ ನಡೆಸುತ್ತಿದ್ದಾರೆ. ಇಲ್ಲಿ ಹಿಂಸಾಚಾರ ನಡೆದ ಸ್ಥಳದಲ್ಲಿ ಭಾರೀ ಪ್ರಮಾಣದ ಪೊಲೀಸ ಸಿಬ್ಬಂಧಿಯನ್ನು ನಿಯೋಜಿಸಲಾಗಿದೆ. ಪ್ರದೇಶದಲ್ಲಿ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಮತ್ತು ಧಾರ್ಮಿಕ ಸ್ಥಳಕ್ಕೆ ಭೇಟಿ ನೀಡಲು ಬರುವವರ ಸುರಕ್ಷ್ತತೆಗೆ ಪೊಲೀಸರ ಜೊತೆಗೆ ಎಸ್‌ಆರ್‌ಪಿಎಫ್ ಯೋಧರನ್ನೂ ನಿಯೋಜಿಸಲಾಗಿತ್ತು.
ಹಿಂಸಾಚಾರ ಭುಗಿಲೆದ್ದಿದ್ದು ಹೇಗೆ?
ಅಹಮದ್‌ನಗರ ಜಿಲ್ಲೆಯಲ್ಲಿ ಭಾನುವಾರ ಸಂಜೆ ಸಂಭಾಜಿ ಜಯಂತಿ ನಿಮಿತ್ತ ಮೆರವಣಿಗೆ ನಡೆಸಲಾಗುತ್ತಿದೆ. ಧಾರ್ಮಿಕ ಸ್ಥಳದ ಬಳಿ ಮೆರವಣಿಗೆ ಸಾಗುತ್ತಿದ್ದಂತೆ ಕೆಲವು ಸಮಾಜ ಘಾತುಕ ವ್ಯಕ್ತಿಗಳು ಘೋಷಣೆಗಳನ್ನು ಕೂಗಲಾರಂಭಿಸಿದ್ದಾರೆ. ಈ ಘೋಷಣೆಯ ನಂತರ ಕಲ್ಲು ತೂರಾಟ ಆರಂಭಗೊಂಡಿದೆ. ಸ್ಥಳದಲ್ಲಿದ್ದ ಪೊಲೀಸರು ಮಧ್ಯಪ್ರವೇಶಿಸಿದರೂ ಎರಡೂ ಕಡೆಯಿಂದ ಭಾರೀ ಕಲ್ಲು ತೂರಾಟ ನಡೆದಿದೆ.
ಇದನ್ನೂ ಓದಿ-ಇನ್ನೊಂದು ವರ್ಷದಲ್ಲಿ ಲೋಕಸಭೆ ಸೇರಿ 8 ವಿಧಾನಸಭೆಗೆ ಚುನಾವಣೆ : ಕರ್ನಾಟಕ ಫಲಿತಾಂಶದ ನಂತರ ಬದಲಾಗುತ್ತಿದೆ ಲೆಕ್ಕಾಚಾರ
ಸದ್ಯ ಈ ಪ್ರದೇಶದಲ್ಲಿ ಪರಿಸ್ಥಿತಿ ಹತೋಟಿಯಲ್ಲಿದ್ದು, ಶಾಂತಿ ನೆಲೆಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಡೀ ಪ್ರದೇಶದಲ್ಲಿ ಪೊಲೀಸರು ಜವಾನರನ್ನು ನಿಯೋಜಿಸಿದ್ದಾರೆ. ಇದರೊಂದಿಗೆ ಅಲ್ಲಿ ಎಲ್ಲಾ ರೀತಿಯ ಚಲನವಲನಗಳ ಮೇಲೆ ನಿಗಾ ಇಡಲಾಗಿದೆ.
ಇದನ್ನೂ ಓದಿ-Karnataka Weather: ಈ ಭಾಗದಲ್ಲಿ ಭಾರೀ ಮಳೆ… ವಿವಿಧೆಡೆ ಏರಲಿದೆ ಬಿಸಿಲಿನ ತಾಪ! ಅಪಾಯದ ಬಗ್ಗೆ ಇಲಾಖೆ ಮುನ್ಸೂಚನೆ
ಅಕೋಲಾ ಹಿಂಸಾಚಾರದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ
ಮೊನ್ನೆ ಶನಿವಾರವೂ ಮಹಾರಾಷ್ಟ್ರದ ಅಕೋಲಾದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿರುವ ಒಂದು ಪೋಸ್ಟ್ ಹಿನ್ನೆಲೆಯಲ್ಲಿ ಭಾರಿ ಹಿಂಸಾಚಾರ ನಡೆದಿತ್ತು. ಈ ಹಿಂಸಾಚಾರದಲ್ಲೂ ಎರಡು ಸಮುದಾಯಗಳು ಮುಖಾಮುಖಿಯಾದವು. ಈ ಹಿಂಸಾಚಾರದಲ್ಲಿ ಜನರು ಹಲವು ಮನೆಗಳಿಗೆ ಬೆಂಕಿ ಹಚ್ಚಿದ್ದರು, ವಾಹನಗಳನ್ನು ಧ್ವಂಸಗೊಳಿಸಿದ್ದರು. ಹಿಂಸಾಚಾರದ ಬೆಂಕಿಯಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದರೆ, 8 ಜನರು ಗಾಯಗೊಂಡಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪ್ರದೇಶದಲ್ಲಿ 144 ಸೆಕ್ಷನ್ ಜಾರಿಗೊಳಿಸಿದ್ದಾರೆ.
ಇದನ್ನೂ ನೋಡಿ-
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ