ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನ ಮುಗಿದ ನಂತರ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ನೂತನ ಅಧ್ಯಕ್ಷರ ನೇಮಕಕ್ಕಾಗಿ ಮುಂದಿನ ವಾರ ಸಭೆ ನಡೆಸಲಿದೆ ಎಂದು ಮೂಲಗಳು ತಿಳಿಸಿವೆ.


COMMERCIAL BREAK
SCROLL TO CONTINUE READING

2019 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನೈತಿಕ ಹೊಣೆಗಾರಿಕೆಯನ್ನುಹೊತ್ತು ಕೊಂಡು ರಾಹುಲ್ ಗಾಂಧಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿನ್ನಲೆಯಲ್ಲಿ ಪಕ್ಷದ ಉನ್ನತ ನಾಯಕರ ಇದುವರೆಗೆ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡುವಲ್ಲಿ ವಿಫಲರಾಗಿದ್ದಾರೆ. ಇದೇ ವೇಳೆ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕೂಡ ಈ ವಿಚಾರವಾಗಿ ತಮ್ಮ ನಿಲುವನ್ನು ಸ್ಪಷ್ಟಪಡಿಸಿಲ್ಲ ಎನ್ನಲಾಗಿದೆ.


ಈಗ ಐಎಎನ್ಎಸ್ ಸುದ್ದಿ ಸಂಸ್ಥೆಗೆ ತಿಳಿಸಿರುವ ಕಾಂಗ್ರೆಸ್ ನಾಯಕರೊಬ್ಬರು ನೂತನ ಕಾರ್ಯಕಾರಿ ಅಧ್ಯಕ್ಷರನ್ನು ನಿರ್ಧರಿಸಲು ಬಜೆಟ್ ಅಧಿವೇಶನದ ಮುಕ್ತಾಯದ ನಂತರ ಸಿಡಬ್ಲ್ಯೂಸಿ ಸಭೆ ಸೇರಲಿದೆ ಎಂದು ಹೇಳಿದ್ದಾರೆ. ಅವರ ಪ್ರಕಾರ ಸಿಡಬ್ಲ್ಯೂಸಿ ಸಭೆ ಆಗಸ್ಟ್ ಮೊದಲ ವಾರದಲ್ಲಿ ನಡೆಯಬೇಕಿತ್ತು, ಆದರೆ ಬಜೆಟ್ ಅಧಿವೇಶನವನ್ನು ಒಂದು ವಾರ ವಿಸ್ತರಿಸಿದ್ದರಿಂದ, ಈಗ ಅದರ ನಂತರ ನಡೆಯಲಿದೆ ಎನ್ನಲಾಗಿದೆ


ಕುತೂಹಲಕಾರಿ ಸಂಗತಿಯೆಂದರೆ, ಮುಂಬರುವ ಸಿಡಬ್ಲ್ಯುಸಿ ಸಭೆಯಲ್ಲಿ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ, ಆದರೆ ಅವರ ಉತ್ತರಾಧಿಕಾರಿಯನ್ನು ಆಯ್ಕೆ ಮಾಡುವಲ್ಲಿ ಅವರು ಭಾಗವಹಿಸುವುದಿಲ್ಲ. ಜೊತೆಗೆ ಪ್ರಿಯಾಂಕಾ ಗಾಂಧಿ ಕೂಡ ಭಾಗವಹಿಸುವುದಿಲ್ಲ ಎಂದು ಪಕ್ಷದ ಮುಖಂಡರು ಹೇಳಿದರು.


2019 ರ ಲೋಕಸಭಾ ಚುನಾವಣಾ ಫಲಿತಾಂಶಗಳನ್ನು ಘೋಷಿಸಿದ ಎರಡು ದಿನಗಳ ನಂತರ ಮೇ 25 ರಂದು ನಡೆದ ಸಿಡಬ್ಲ್ಯುಸಿ ಸಭೆಯಲ್ಲಿ ರಾಹುಲ್ ಗಾಂಧಿ  ತಮ್ಮ ಅಧ್ಯಕ್ಷ ಪದವಿಯಿಂದ ತ್ಯಜಿಸಲು ಮುಂದಾದರು. ಆದಾಗ್ಯೂ ಕಾಂಗ್ರೆಸ್ ನಾಯಕರು ಅವರ ಪ್ರಸ್ತಾಪವನ್ನು ಸಿಡಬ್ಲ್ಯೂಸಿ ಸ್ಪಷ್ಟವಾಗಿ ತಿರಸ್ಕರಿಸಿತು. ಆದರೆ ಇದಾದ ನಂತರ ರಾಹುಲ್ ಗಾಂಧಿ ತಮ್ಮ ರಾಜೀನಾಮೆ ಪತ್ರವನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡರು.