ಕಾಂಗ್ರೆಸ್ ಸೋಲಿನ ನಂತರ ರಾಹುಲ್ ಗಾಂಧಿಗೆ ರಾಜೀನಾಮೆಗಳ ಸುರಿಮಳೆ

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೀನಾಯ ಸೋಲನ್ನು ಕಂಡ ನಂತರ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಲವು ರಾಜ್ಯ ನಾಯಕರು ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ. ಅದರಲ್ಲಿ ಉತ್ತರಪ್ರದೇಶದ ಕಾಂಗ್ರೆಸ್ ಅಧ್ಯಕ್ಷ ರಾಜ್ ಬಬ್ಬರ್ ಸೇರಿದಂತೆ ಮೂರು ರಾಜ್ಯ ಮುಖ್ಯಸ್ಥರು ರಾಜೀನಾಮೆ ಸಲ್ಲಿಸಿದ್ದಾರೆ.ಉತ್ತರ ಪ್ರದೇಶದಲ್ಲಿ ಸ್ವತಃ ರಾಹುಲ್ ಗಾಂಧಿ ಅಮೇಥಿ ಕ್ಷೇತ್ರದಲ್ಲಿ ಸೋಲನ್ನು ಅನುಭವಿಸಿದ ಹಿನ್ನಲೆಯಲ್ಲಿ ರಾಜ್ ಬಬ್ಬರ್ ರಾಜೀನಾಮೆ ಸಲ್ಲಿಸಿದ್ದಾರೆ.

Last Updated : May 24, 2019, 02:32 PM IST
ಕಾಂಗ್ರೆಸ್ ಸೋಲಿನ ನಂತರ ರಾಹುಲ್ ಗಾಂಧಿಗೆ ರಾಜೀನಾಮೆಗಳ ಸುರಿಮಳೆ    title=

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೀನಾಯ ಸೋಲನ್ನು ಕಂಡ ನಂತರ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಲವು ರಾಜ್ಯ ನಾಯಕರು ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ. ಅದರಲ್ಲಿ ಉತ್ತರಪ್ರದೇಶದ ಕಾಂಗ್ರೆಸ್ ಅಧ್ಯಕ್ಷ ರಾಜ್ ಬಬ್ಬರ್ ಸೇರಿದಂತೆ ಮೂರು ರಾಜ್ಯ ಮುಖ್ಯಸ್ಥರು ರಾಜೀನಾಮೆ ಸಲ್ಲಿಸಿದ್ದಾರೆ.ಉತ್ತರ ಪ್ರದೇಶದಲ್ಲಿ ಸ್ವತಃ ರಾಹುಲ್ ಗಾಂಧಿ ಅಮೇಥಿ ಕ್ಷೇತ್ರದಲ್ಲಿ ಸೋಲನ್ನು ಅನುಭವಿಸಿದ ಹಿನ್ನಲೆಯಲ್ಲಿ ರಾಜ್ ಬಬ್ಬರ್ ರಾಜೀನಾಮೆ ಸಲ್ಲಿಸಿದ್ದಾರೆ.

ಲೋಕಸಭೆಯಲ್ಲಿ ಕಳಪೆ ಪ್ರದರ್ಶನ ನೀಡಿದ ಹಿನ್ನಲೆಯಲ್ಲಿ ಕರ್ನಾಟಕದ ಕಾಂಗ್ರೆಸ್ ಪಕ್ಷದ ಪ್ರಚಾರ ವ್ಯವಸ್ಥಾಪಕ ಎಚ್. ಕೆ. ಪಾಟೀಲ್ ಮತ್ತು ಒಡಿಶಾ ಮುಖ್ಯಸ್ಥ ನಿರಂಜನ್ ಪಟ್ನಾಯಕ್ ಅವರು ಕೂಡ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.ಉತ್ತರ ಪ್ರದೇಶದಲ್ಲಿ ಪ್ರಿಯಾಂಕಾ ಗಾಂಧಿ ಹಾಗೂ ಜ್ಯೋತಿರಾಧಿತ್ಯ ಸಿಂಧಿಯಾ ಪ್ರಚಾರದ ನಡುವೆಯೂ ಕೂಡ 80 ಸ್ಥಾನಗಳಲ್ಲಿ ಕಾಂಗ್ರೆಸ್ ಪಕ್ಷವು ಕೇವಲ ಸೋನಿಯಾ ಗಾಂಧಿಯವರ ರಾಯ ಬರೇಲಿ ಕ್ಷೇತ್ರವನ್ನು ಮಾತ್ರ ಗೆಲ್ಲುವಲ್ಲಿ ಯಶಸ್ವಿಯಾಗಿದೆ.   

ಇನ್ನೊಂದೆಡೆ ದೇಶಾದ್ಯಂತ ಕಾಂಗ್ರೆಸ್ ಪಕ್ಷದ ಕಳಪೆ ಪ್ರದರ್ಶನದ ಹಿನ್ನಲೆಯಲ್ಲಿ ರಾಹುಲ್ ಗಾಂಧಿ ಪಕ್ಷದ ಕಾರ್ಯಕಾರಿ ಸಮಿತಿಯ (ಸಿಡಬ್ಲ್ಯೂಸಿ) ಸಭೆಯಲ್ಲಿ ನಾಳೆ ದಿನ ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ. 

Trending News