ನವದೆಹಲಿ: ಆಂಧ್ರಪ್ರದೇಶದಲ್ಲಿ ನಿರಂತರ ಮಳೆಯಿಂದಾಗಿ 17 ಜನರು ಸಾವನ್ನಪ್ಪಿದ್ದಾರೆ ಮತ್ತು 100 ಕ್ಕೂ ಹೆಚ್ಚು ಜನರು ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾರೆ ಎಂದು ವರದಿಯಾಗಿದೆ.ದೇವಾಲಯದ ಪಟ್ಟಣವಾದ ತಿರುಪತಿಯ ದೃಶ್ಯಗಳು ನೂರಾರು ಯಾತ್ರಾರ್ಥಿಗಳು ಬೃಹತ್ ಪ್ರವಾಹದಲ್ಲಿ ಸಿಲುಕಿರುವುದನ್ನು ತೋರಿಸುತ್ತವೆ.
ಇದನ್ನೂ ಓದಿ: ದೇಶದ ಸ್ವಚ್ಛ ರಾಜ್ಯ, ಸ್ವಚ್ಛ ನಗರಿ ಯಾವುದು ಗೊತ್ತೇ?
ಮುಖ್ಯಾಂಶಗಳು
೧) ಅನಂತಪುರ ಜಿಲ್ಲೆಯ ಕದಿರಿ ಪಟ್ಟಣದಲ್ಲಿ ತಡರಾತ್ರಿ ಸುರಿದ ಭಾರೀ ಮಳೆಗೆ 3 ಅಂತಸ್ತಿನ ಹಳೆಯ ಕಟ್ಟಡ ಕುಸಿದು ಮೂವರು ಮಕ್ಕಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಕಟ್ಟಡದ ಅವಶೇಷಗಳೊಳಗೆ ಇನ್ನೂ 4 ಮಂದಿ ಸಿಲುಕಿದ್ದಾರೆ: ಸರ್ಕಲ್ ಇನ್ಸ್‌ಪೆಕ್ಟರ್ ಸತ್ಯಬಾಬು
೨) ದೇವಸ್ಥಾನವಿರುವ ತಿರುಮಲ ಬೆಟ್ಟಗಳಿಗೆ ಘಾಟ್ ರಸ್ತೆ ಮತ್ತು ನಡಿಗೆ ಮಾರ್ಗಗಳನ್ನು ಮುಚ್ಚಲಾಗಿದೆ.
೩) ತಿರುಪತಿ ಹೊರವಲಯದ ಸ್ವರ್ಣಮುಖಿ ನದಿಗೆ ನೀರು ಹರಿದಿದ್ದು, ಜಲಾಶಯಗಳು ತುಂಬಿ ಹರಿಯುತ್ತಿವೆ. ಪ್ರವಾಹದಲ್ಲಿ ಸಾಕಷ್ಟು ಮಂದಿ ಸಿಲುಕಿರುವ ಬಗ್ಗೆ ವರದಿಯಾಗಿದೆ.
೪) ಮೂರು ರಾಜ್ಯ ಸಾರಿಗೆ ಬಸ್‌ಗಳು ಜಖಂಗೊಂಡಿದ್ದು, 12 ಮಂದಿಯನ್ನು ರಕ್ಷಿಸಲು ಸಾಧ್ಯವಾಗಿಲ್ಲ.
೫) ಪರಿಸ್ಥಿತಿ ನಿಭಾಯಿಸಲು ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ಪರಿಹಾರ ತಂಡಗಳನ್ನು ನಿಯೋಜಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.
೬) ಪ್ರವಾಹದಿಂದಾಗಿ ಹಲವೆಡೆ ರಸ್ತೆಗಳು ಹಾಳಾಗಿದ್ದು, ರೈಲು, ರಸ್ತೆ ಮತ್ತು ವಿಮಾನ ಸಂಚಾರಕ್ಕೆ ತೊಂದರೆಯಾಗಿದೆ.
೭) ರಾಯಲಸೀಮಾ ಪ್ರದೇಶವು ಹೆಚ್ಚು ಹಾನಿಗೊಳಗಾಗಿದೆ. ರಾಜ್ಯದ ಚಿತ್ತೂರು, ಕಡಪ, ಕರ್ನೂಲು ಮತ್ತು ಅನಂತಪುರ ಜಿಲ್ಲೆಗಳು ಹಾನಿಗೀಡಾಗಿವೆ.
೮) ಗುರುವಾರದಿಂದ ಮಳೆ ನಿಂತಿಲ್ಲ, ಚೆಯ್ಯೂರು ನದಿ ತುಂಬಿ ಹರಿಯುತ್ತಿದೆ. ಅನ್ನಮಯ್ಯ ನೀರಾವರಿ ಯೋಜನೆಗೂ ಪೆಟ್ಟು ಬಿದ್ದಿದೆ.
೯) ಕಡಪ ವಿಮಾನ ನಿಲ್ದಾಣ ನವೆಂಬರ್ 25 ರವರೆಗೆ ಮುಚ್ಚಿರುತ್ತದೆ.
೧೦) ತಮಿಳುನಾಡು ಮತ್ತು ಕೇರಳದಲ್ಲೂ ಮಳೆ ಅಸ್ತವ್ಯಸ್ತವಾಗಿದೆ. ಕೇರಳದ ಪತ್ತನಂತಿಟ್ಟ ಜಿಲ್ಲೆಯಲ್ಲಿ ಪಂಬಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚುತ್ತಿರುವ ಕಾರಣ ನಾಳೆ ಪಂಬಾ ಮತ್ತು ಶಬರಿಮಲೆ ಯಾತ್ರೆಯನ್ನು ನಿಷೇಧಿಸಲಾಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.