ಅಯೋಧ್ಯೆ ನಂತರ ಕಾಶಿ, ಮಥುರಾ ಜಾಗೃತಗೊಳ್ಳುತ್ತಿರುವಂತೆ ಕಾಣುತ್ತಿದೆ: ಯೋಗಿ ಆದಿತ್ಯನಾಥ್
Yogi Adityanath: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ನಂತರ, ಮಥುರಾ, ವೃಂದಾವನ, ವಿಂಧ್ಯವಾಸಿನಿ ಧಾಮ ಮತ್ತು ನೈಮಿಶ್ ಧಾಮದಂತೆ ದೇವಾಲಯಗಳ ಪಟ್ಟಣವಾದ ಕಾಶಿಯು ಎಚ್ಚರಗೊಳ್ಳುತ್ತಿರುವಂತೆ ತೋರುತ್ತಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾನುವಾರ ಹೇಳಿದರು.
ಲಖನೌ (ಉತ್ತರ ಪ್ರದೇಶ): ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ನಂತರ, ಮಥುರಾ, ವೃಂದಾವನ, ವಿಂಧ್ಯವಾಸಿನಿ ಧಾಮ ಮತ್ತು ನೈಮಿಶ್ ಧಾಮದಂತೆ ದೇವಾಲಯಗಳ ಪಟ್ಟಣವಾದ ಕಾಶಿಯು ಎಚ್ಚರಗೊಳ್ಳುತ್ತಿರುವಂತೆ ತೋರುತ್ತಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾನುವಾರ ಹೇಳಿದರು.
ಇದನ್ನೂ ಓದಿ: ಅಯೋಧ್ಯೆ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸಿಎಂ ಬೊಮ್ಮಾಯಿ ಸಾಂತ್ವನ
ಲಖನೌದಲ್ಲಿ ನಡೆದ ಬಿಜೆಪಿಯ ಒಂದು ದಿನದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ಕೋಮುಗಲಭೆ ನಡೆದಿಲ್ಲ. ಇತ್ತೀಚಿನ ಹಬ್ಬಗಳನ್ನು ಪ್ರಸ್ತಾಪಿಸಿ, ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಈದ್‌ನ ಹಿಂದಿನ ಕೊನೆಯ ಶುಕ್ರವಾರದ ನಮಾಜ್ ಅನ್ನು ರಸ್ತೆಗಳಲ್ಲಿ ನಡೆಸಲಾಗಿಲ್ಲ ಎಂದು ಹೇಳಿದರು.
ಕಾಶಿ ವಿಶ್ವನಾಥ ದೇವಸ್ಥಾನದ ಕಾರಿಡಾರ್ ಉದ್ಘಾಟನೆಯನ್ನು ಉಲ್ಲೇಖಿಸಿದ ಆದಿತ್ಯನಾಥ್, ಪ್ರತಿದಿನ ಒಂದು ಲಕ್ಷ ಭಕ್ತರು ಕಾಶಿಗೆ ಭೇಟಿ ನೀಡುತ್ತಾರೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ದೃಷ್ಟಿಕೋನಕ್ಕೆ ಅನುಗುಣವಾಗಿ ಈ ಸ್ಥಳವು ತನ್ನ ಹೆಸರಿನ ಮಹತ್ವವನ್ನು ಸಾಬೀತುಪಡಿಸುತ್ತಿದೆ ಎಂದರು.
ರಾಮ ನವಮಿ ಮತ್ತು ಹನುಮ ಜಯಂತಿಯನ್ನು ಶಾಂತಿಯುತವಾಗಿ ನಡೆಸಲಾಯಿತು. ಇದೇ ಮೊದಲ ಬಾರಿಗೆ ಈದ್ ಹಿಂದಿನ ಕೊನೆಯ ಶುಕ್ರವಾರದ ನಮಾಜ್ ಬೀದಿಗಳಲ್ಲಿ ನಡೆಯಲಿಲ್ಲ. ನಮಾಜ್‌ಗಾಗಿ ಪ್ರಾರ್ಥನಾ ಸ್ಥಳವಿದೆ, ಅವರ ಧಾರ್ಮಿಕ ಕಾರ್ಯಕ್ರಮಗಳು ನಡೆಯಲು ಮಸೀದಿಗಳಿವೆ ಎಂದು ಹೇಳಿದರು.
ಇದನ್ನೂ ಓದಿ: Indian Railway: ರೈಲಿನಲ್ಲಿ ಚೈನ್ ಎಳೆದಾಗ ರೈಲ್ವೆ ಪೊಲೀಸರು ಬೋಗಿಯ ವಿಳಾಸವನ್ನು ಕಂಡುಹಿಡಿಯುವ ಅದ್ಭುತ ಟ್ರಿಕ್
ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯ ನಂತರ ಬಿಜೆಪಿಯ ಮೊದಲ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಿತು. ಈ ಸಭೆಯಲ್ಲಿ ಯುಪಿ ಸಿಎಂ ಆದಿತ್ಯನಾಥ್ 2024 ರ ಲೋಕಸಭೆ ಚುನಾವಣೆಗೆ ತಯಾರಿ ಆರಂಭಿಸಲು ಮತ್ತು ರಾಜ್ಯದ 80 ರಲ್ಲಿ 75 ಸ್ಥಾನಗಳನ್ನು ಗೆಲ್ಲುವ ಗುರಿಯೊಂದಿಗೆ ಮುನ್ನಡೆಯಲು ಪಕ್ಷದ ಕಾರ್ಯಕರ್ತರನ್ನು ಹುರಿದುಂಬಿಸಿದರು.
2019 ರಲ್ಲಿ, ಉತ್ತರ ಪ್ರದೇಶದಲ್ಲಿ ಬಿಜೆಪಿ 62 ಲೋಕಸಭಾ ಸ್ಥಾನಗಳನ್ನು ಗೆದ್ದುಕೊಂಡಿದ್ದರೆ ಅದರ ಮಿತ್ರ ಪಕ್ಷವಾದ ಅಪ್ನಾ ದಳ (ಎಸ್) ಎರಡು ಸ್ಥಾನಗಳಲ್ಲಿ ಗೆಲುವು ದಾಖಲಿಸಿದೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.