ನವದೆಹಲಿ : ಬಿಹಾರ ಮತ್ತು ರಾಜಸ್ಥಾನದಲ್ಲಿ ಅಗ್ನಿಪಥ್ ನೇಮಕಾತಿ ಯೋಜನೆಯ ವಿರುದ್ಧ ಬೃಹತ್ ಪ್ರತಿಭಟನೆಗಳು ಭುಗಿಲೆದ್ದಿದ್ದು, ಪ್ರತಿಭಟನಾಕಾರರು ಉದ್ಯೋಗ ಭದ್ರತೆ ಮತ್ತು ಪಿಂಚಣಿ ಕುರಿತು ಕಳವಳ ವ್ಯಕ್ತಪಡಿಸಿದ್ದಾರೆ. ಬಿಹಾರ ಮತ್ತು ರಾಜಸ್ಥಾನದ ಬೀದಿಗಳಲ್ಲಿ ಭಾರೀ ಸಂಖ್ಯೆಯಲ್ಲಿ ಪ್ರತಿಭಟನಾಕಾರರು ಅಗ್ನಿಪಥ್ ಯೋಜನೆ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ. 


COMMERCIAL BREAK
SCROLL TO CONTINUE READING

ನಾಲ್ಕು ವರ್ಷಗಳ ಗುತ್ತಿಗೆ ಆಧಾರದ ಮೇಲೆ ಸೈನಿಕರನ್ನು ಸಶಸ್ತ್ರ ಪಡೆಗಳಿಗೆ ನೇಮಕ ಮಾಡಿಕೊಳ್ಳುವ ಅಗ್ನಿಪಥ್ ಯೋಜನೆಯನ್ನು ರದ್ದುಗೊಳಿಸಲು ಹಲವರು ಫಲಕಗಳನ್ನು ಹಿಡಿದರೆ ಮತ್ತೆ ಕೆಲವು ಕಡೆ ಟೈರ್‌ಗಳನ್ನು ಸುಡುತ್ತಿದ್ದಾರೆ. ಉದ್ಯೋಗಾಕಾಂಕ್ಷಿಗಳು ತಮ್ಮ ಸೇವೆಗಳ ಭವಿಷ್ಯದ ಬಗ್ಗೆ ಆತಂಕ ವ್ಯಕ್ತಪಡಿಸಿದರು, ಏಕೆಂದರೆ ಈ ಯೋಜನೆಯು ನೇಮಕಗೊಂಡ ಸೈನಿಕರಲ್ಲಿ ಕೇವಲ ಶೇ.25 ರಷ್ಟು ಜನರನ್ನು ಪೂರ್ಣ ಅವಧಿಗೆ ಉಳಿಸಿಕೊಳ್ಳಲು ಒತ್ತಾಯಿಸುತ್ತದೆ ಎಂದು ಹೇಳಿದ್ದಾರೆ. 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.